ಪಾಂಡ್ಯ, ಪಂತ್, ಗಿಲ್ ಅಲ್ಲವೇ ಅಲ್ಲ, ಈತನೇ ಭಾರತದ ಭವಿಷ್ಯದ ಕ್ಯಾಪ್ಟನ್ ಎಂದ ಸಂಜಯ್ ಮಂಜ್ರೇಕರ್..!

Published : Jun 18, 2024, 04:33 PM ISTUpdated : Jun 18, 2024, 04:53 PM IST
ಪಾಂಡ್ಯ, ಪಂತ್, ಗಿಲ್ ಅಲ್ಲವೇ ಅಲ್ಲ, ಈತನೇ ಭಾರತದ ಭವಿಷ್ಯದ ಕ್ಯಾಪ್ಟನ್ ಎಂದ ಸಂಜಯ್ ಮಂಜ್ರೇಕರ್..!

ಸಾರಾಂಶ

ಸದ್ಯದ ಪರಿಸ್ಥಿತಿಯಲ್ಲಿ ನಿರಂತರವಾಗಿ ಮೂರು ಮಾದರಿಯಲ್ಲಿ ದೇಶವನ್ನು ಪ್ರತಿನಿಧಿಸುವುದು ಅಷ್ಟು ಸುಲಭದ ಮಾತಲ್ಲ. ಈ ಕಾರಣಕ್ಕಾಗಿ ಭವಿಷ್ಯದ ದೃಷ್ಟಿಯಿಂದ ವಿವಿಧ ಮಾದರಿಯ ಕ್ರಿಕೆಟ್‌ ತಂಡಕ್ಕೆ ಬೇರೆ ಬೇರೆ ನಾಯಕರಾಗುವುದು ಸೂಕ್ತ ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.

ಮುಂಬೈ: ಸದ್ಯ ರೋಹಿತ್ ಶರ್ಮಾ, ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಾಯಕನಾಗಿ ಯಶಸ್ವಿಯಾಗಿ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಯಲ್ಲಿ 'ಎ' ಗುಂಪಿಯನಲ್ಲಿ ಅಜೇಯವಾಗಿ ಟೀಂ ಇಂಡಿಯಾ ಸೂಪರ್ 8 ಹಂತಕ್ಕೆ ಲಗ್ಗೆಯಿಟ್ಟಿದೆ. ಇನ್ನು ಕ್ರಿಕೆಟ್ ವೃತ್ತಿಜೀವನದ ಸಂಧ್ಯಾಕಾಲದಲ್ಲಿರುವ ರೋಹಿತ್ ಶರ್ಮಾ, ಬಹುತೇಕ ಈ ಟಿ20 ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾ ನಾಯಕತ್ವದಿಂದ ಕೆಳಗಿಳಿಯಲಿದ್ದಾರೆ. ಹೀಗಾಗಿ ರೋಹಿತ್ ಬಳಿಕ ಟೀಂ ಇಂಡಿಯಾ ಭವಿಷ್ಯದ ನಾಯಕ ಯಾರಾಗಬಹುದು ಎನ್ನುವ ಚರ್ಚೆ ಜೋರಾಗಿಯೇ ನಡೆಯುತ್ತಿದೆ. 

ಸದ್ಯ ಟೀಂ ಇಂಡಿಯಾ ನಾಯಕರಾಗಲು ಶುಭ್‌ಮನ್ ಗಿಲ್, ರಿಷಭ್ ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ನಡುವೆ ದೊಡ್ಡ ಹೋರಾಟ ನಡೆಯುತ್ತಿದೆ, ಹೀಗಿರುವಾಗಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಕ್ರಿಕೆಟ್ ವಿಶ್ಲೇಷಕ ಸಂಜಯ್ ಮಂಜ್ರೇಕರ್, 30 ವರ್ಷದ ವೇಗಿ ಜಸ್ಪ್ರೀತ್ ಬುಮ್ರಾ, ಭಾರತದ ಭವಿಷ್ಯದ ನಾಯಕರಾಗಲು ಸೂಕ್ತವಾದ ವ್ಯಕ್ತಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಸ್ಪ್ರೀತ್ ಬುಮ್ರಾ, ಭಾರತ ಟಿ20, ಏಕದಿನ ಹಾಗೂ ಟೆಸ್ಟ್ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ. ಅವರಲ್ಲಿ ಒಳ್ಳೆಯ ನಾಯಕತ್ವದ ಗುಣಗಳು ಇವೆ ಎಂದು ಮುಂಬೈ ಮೂಲದ ಮಾಜಿ ಕ್ರಿಕೆಟಿಗ ಅಭಿಪ್ರಾಯಪಟ್ಟಿದ್ದಾರೆ.

ಈತ ಕ್ಯಾಪ್ಟನ್ ಅಲ್ಲ, ಆಟಗಾರನಾಗಿ ಕೂಡಾ ತಂಡದಲ್ಲಿರಲು ಯೋಗ್ಯನಲ್ಲ: ಅಚ್ಚರಿ ಹೇಳಿಕೆ ಕೊಟ್ಟ ಸೆಹ್ವಾಗ್..!

ಸದ್ಯದ ಪರಿಸ್ಥಿತಿಯಲ್ಲಿ ನಿರಂತರವಾಗಿ ಮೂರು ಮಾದರಿಯಲ್ಲಿ ದೇಶವನ್ನು ಪ್ರತಿನಿಧಿಸುವುದು ಅಷ್ಟು ಸುಲಭದ ಮಾತಲ್ಲ. ಈ ಕಾರಣಕ್ಕಾಗಿ ಭವಿಷ್ಯದ ದೃಷ್ಟಿಯಿಂದ ವಿವಿಧ ಮಾದರಿಯ ಕ್ರಿಕೆಟ್‌ ತಂಡಕ್ಕೆ ಬೇರೆ ಬೇರೆ ನಾಯಕರಾಗುವುದು ಸೂಕ್ತ ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.

"ಮೂರು ಮಾದರಿಯ ಭಾರತ ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿದ್ದರೂ, ರೋಹಿತ್ ಅಲಭ್ಯರಾಗಿದ್ದಾಗ ಭಾರತ ಟಿ20, ಏಕದಿನ ಹಾಗೂ ಟೆಸ್ಟ್‌ ತಂಡಕ್ಕೆ ಬೇರೆ ಬೇರೆ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೀಗೆಲ್ಲಾ ಆಗುತ್ತೆ" ಎಂದು ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಪಾಕಿಸ್ತಾನ, ನ್ಯೂಜಿಲೆಂಡ್ ಸೇರಿ 2026ರ ಟಿ20 ವಿಶ್ವಕಪ್‌ಗೆ 12 ತಂಡಗಳಿಗೆ ನೇರ ಅರ್ಹತೆ..!

"ಮೂರು ಮಾದರಿಯ ಭಾರತ ತಂಡಕ್ಕೆ, ನಾಯಕತ್ವ ಗುಣ ಹೊಂದಿರುವ ಆಟಗಾರರ ಪೈಕಿ ನನ್ನ ಪ್ರಕಾರ ಜಸ್ಪ್ರೀತ್ ಬುಮ್ರಾ ಸೂಕ್ತ ವ್ಯಕ್ತಿ ಎನಿಸುತ್ತಿದೆ. ಕ್ಯಾಲೆಂಡರ್ ವರ್ಷವೊಂದರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಒಬ್ಬರೇ ನಾಯಕರಾಗಿರುವುದು ಸೂಕ್ತವೆಂದು ನನಗನಿಸುತ್ತಿಲ್ಲ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಜಸ್ಪ್ರೀತ್ ಬುಮ್ರಾ ಭಾರತ ತಂಡದ ಭವಿಷ್ಯದ ನಾಯಕರಾಗುವಲ್ಲಿ ಸೂಕ್ತ ವ್ಯಕ್ತಿ" ಎಂದು ಹೇಳಿದ್ದಾರೆ.

ಜಸ್ಪ್ರೀತ್ ಬುಮ್ರಾ, ಜುಲೈ 01, 2022ರಲ್ಲಿ ಮೊದಲ ಬಾರಿಗೆ ನಾಯಕನಾಗಿ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಿದ್ದರು. ಇಂಗ್ಲೆಂಡ್ ಎದುರಿನ ಪುನರ್‌ನಿಗದಿಯಾಗಿದ್ದ ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಿದ್ದರು. ಆ ಪಂದ್ಯದಲ್ಲಿ ಭಾರತ ಸೋಲು ಕಂಡಿತ್ತು. ಇನ್ನು ಇದಾದ ಬಳಿಕ 2023ರ ಆಗಸ್ಟ್‌ನಲ್ಲಿ ಐರ್ಲೆಂಡ್ ಎದುರು ಟಿ20 ಸರಣಿಯಲ್ಲೂ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Ind vs SA 5th T20I: ಇಂದು ಭಾರತ vs ದಕ್ಷಿಣ ಆಫ್ರಿಕಾ ಫೈನಲ್ ಫೈಟ್
ಐಪಿಎಲ್ ಹರಾಜಿನ ಬಳಿಕ 4 ಬಲಿಷ್ಠ ತಂಡ ಆಯ್ಕೆ ಮಾಡಿದ ಆರ್. ಅಶ್ವಿನ್; ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕಿಲ್ಲ ಸ್ಥಾನ!