
ದುಬೈ: ಏಷ್ಯಾಕಪ್‌ನಲ್ಲಿ ಶ್ರೀಲಂಕಾ ವಿರುದ್ಧದ ಕೊನೆಯ ಸೂಪರ್-4 ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಇಳಿದು 23 ಎಸೆತಗಳಲ್ಲಿ 39 ರನ್ ಗಳಿಸಿ ಸ್ಫೋಟಕ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಸಿಕ್ಸರ್ ಬೇಟೆಯಲ್ಲೂ ದಾಖಲೆ ಬರೆದಿದ್ದಾರೆ. ಶ್ರೀಲಂಕಾ ವಿರುದ್ಧ ಮೂರು ಸಿಕ್ಸರ್‌ಗಳನ್ನು ಬಾರಿಸಿದ ಸಂಜು, ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ವಿಕೆಟ್ ಕೀಪರ್ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಇಳಿಯುವಾಗ 52 ಸಿಕ್ಸರ್‌ಗಳೊಂದಿಗೆ ಸಂಜು ಮತ್ತು ಧೋನಿ ಇಬ್ಬರೂ ಜಂಟಿ ಅಗ್ರಸ್ಥಾನದಲ್ಲಿದ್ದರು.
ಹದಿಮೂರನೇ ಓವರ್‌ನಲ್ಲಿ ಶ್ರೀಲಂಕಾದ ವನಿಂದು ಹಸರಂಗಗೆ ಸಿಕ್ಸರ್ ಬಾರಿಸುವ ಮೂಲಕ ಧೋನಿಯನ್ನು ಹಿಂದಿಕ್ಕಿ 53 ಸಿಕ್ಸರ್‌ಗಳೊಂದಿಗೆ ಸಂಜು, ಭಾರತೀಯ ವಿಕೆಟ್ ಕೀಪರ್‌ಗಳ ಸಿಕ್ಸರ್ ಬೇಟೆಯಲ್ಲಿ ನಂಬರ್ ಒನ್ ಆದರು. ಹಸರಂಗ ಅವರ ಮುಂದಿನ ಓವರ್‌ನಲ್ಲೂ ಸಿಕ್ಸರ್ ಗಳಿಸಿದ ಸಂಜು, ಶನಕ ವಿರುದ್ಧವೂ ಸಿಕ್ಸರ್ ಬಾರಿಸಿ ಮೂರು ಸಿಕ್ಸರ್‌ಗಳನ್ನು ಪೂರೈಸಿದರು. ಶನಕಗೆ ಸಿಕ್ಸರ್ ಬಾರಿಸಿದ ನಂತರ ಮತ್ತೊಂದು ಸಿಕ್ಸರ್‌ಗಾಗಿ ಪ್ರಯತ್ನಿಸುವಾಗ 23 ಎಸೆತಗಳಲ್ಲಿ 39 ರನ್ ಗಳಿಸಿ ಸಂಜು ಔಟಾದರು.
ಸಂಜು ಸ್ಯಾಮ್ಸನ್ 48 ಇನ್ನಿಂಗ್ಸ್‌ಗಳಿಂದ 53 ಸಿಕ್ಸರ್‌ಗಳನ್ನು ಬಾರಿಸಿ ಧೋನಿಯನ್ನು ಹಿಂದಿಕ್ಕಿದ್ದಾರೆ. ಧೋನಿ 85 ಇನ್ನಿಂಗ್ಸ್‌ಗಳಿಂದ 52 ಸಿಕ್ಸರ್‌ಗಳನ್ನು ಗಳಿಸಿದ್ದರು. ರಿಷಭ್ ಪಂತ್ ಭಾರತೀಯ ವಿಕೆಟ್ ಕೀಪರ್‌ಗಳಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 66 ಇನ್ನಿಂಗ್ಸ್‌ಗಳಿಂದ ರಿಷಭ್ ಪಂತ್ 44 ಸಿಕ್ಸರ್‌ಗಳನ್ನು ಗಳಿಸಿದ್ದಾರೆ. ಇಶಾನ್ ಕಿಶನ್ ನಾಲ್ಕನೇ ಸ್ಥಾನದಲ್ಲಿದ್ದಾರೆ. 32 ಇನ್ನಿಂಗ್ಸ್‌ಗಳಿಂದ ಇಶಾನ್ ಕಿಶನ್ 32 ಸಿಕ್ಸರ್‌ಗಳನ್ನು ಗಳಿಸಿದ್ದಾರೆ.
ಶ್ರೀಲಂಕಾ ವಿರುದ್ಧ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿದರೆ, ಶ್ರೀಲಂಕಾ ಕೂಡ 20 ಓವರ್‌ಗಳಲ್ಲಿ 202 ರನ್ ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿತು. ನಂತರ ಸೂಪರ್ ಓವರ್‌ನಲ್ಲಿ ವಿಜೇತರನ್ನು ನಿರ್ಧರಿಸಲಾಯಿತು. ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಕೇವಲ ಎರಡು ರನ್ ಗಳಿಸಿದರೆ, ಭಾರತ ಒಂದು ಎಸೆತದಲ್ಲಿ ಗುರಿ ತಲುಪಿತು.
2025ರ ಏಷ್ಯಾಕಪ್ ಟೂರ್ನಿಯ ಮಹಾ ಫೈನಲ್‌ಗೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಪ್ರತಿಷ್ಠಿತ ಏಷ್ಯಾಕಪ್ ಟ್ರೋಫಿಗಾಗಿ ಕಾದಾಡಲಿವೆ. ಈ ಪಂದ್ಯವು ಸೆಪ್ಟೆಂಬರ್ 28ರಂದು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿದೆ. ಸದ್ಯ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಇದುವರೆಗೂ ತಾನಾಡಿದ ಆರು ಪಂದ್ಯಗಳಲ್ಲೂ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದೆ. ಇನ್ನೊಂದೆಡೆ ಸಲ್ಮಾನ್ ಅಲಿ ಅಘಾ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡವು ಭಾರತ ಎದುರು ಗ್ರೂಪ್ ಹಂತದಲ್ಲಿ ಹಾಗೂ ಸೂಪರ್-4 ಹಂತದಲ್ಲಿ ಸೋಲು ಅನುಭವಿಸಿದ್ದು ಬಿಟ್ಟರೇ, ಇನ್ನುಳಿದ ನಾಲ್ಕು ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ.
ಅಂದಹಾಗೆ ಇದೇ ಮೊದಲ ಸಲ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. 41 ವರ್ಷಗಳ ಇತಿಹಾಸವಿರುವ ಈ ಏಷ್ಯಾಕಪ್‌ನಲ್ಲಿ ಇದುವರೆಗೂ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿರಲಿಲ್ಲ. ಆದರೆ ನಾಲ್ಕು ದಶಕಗಳ ನಂತರ ಫೈನಲ್‌ನಲ್ಲಿ ಮೊದಲ ಸಲ ಕಾದಾಡಲು ರೆಡಿಯಾಗಿವೆ. ಇನ್ನು ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು, ಪಾಕಿಸ್ತಾನ ಎದುರು ಸತತ ಪಂದ್ಯಗಳಲ್ಲೂ ಗೆಲುವಿನ ನಗೆ ಬೀರಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.