
ದುಬೈ(ಜ.26): ಬಹುನಿರೀಕ್ಷಿತ ಉದ್ಘಾಟನಾ ಆವೃತ್ತಿಯ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಒಂದು ವಾರ ಮುಂದೂಡಿಕೆಯಾಗಿದೆ.
ಈ ಮೊದಲು ನಿಗದಿಯಾಗಿದ್ದಂತೆ ಜೂನ್ 10ರಿಂದ 14ರ ವರೆಗೂ ಪಂದ್ಯ ನಡೆಯಬೇಕಿತ್ತು. ಆದರೆ ಈಗ ಪಂದ್ಯವನ್ನು ಜೂನ್ 18ರಿಂದ 22ರವರೆಗೂ ನಡೆಸಲು ಐಸಿಸಿ ನಿರ್ಧರಿಸಿದೆ. ಐಪಿಎಲ್ 14ನೇ ಆವೃತ್ತಿಯ ಫೈನಲ್ ಪಂದ್ಯಕ್ಕೂ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೂ ಕನಿಷ್ಠ 15 ದಿನಗಳ ಸಮಯವಿರಬೇಕು ಎನ್ನುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇಂಡೋ-ಆಂಗ್ಲ ಮೊದಲ ಟೆಸ್ಟ್ ಮುನ್ನ ಇಂಗ್ಲೆಂಡ್ 3 ದಿನ ಅಭ್ಯಾಸ
ಒಂದೊಮ್ಮೆ ಐಪಿಎಲ್‌ನಲ್ಲಿ ಆಡಿದ ಆಟಗಾರರು ವಿಶ್ವ ಟೆಸ್ಟ್ ಫೈನಲ್‌ನಲ್ಲೂ ಆಡಬೇಕಾಗಿ ಬಂದರೆ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಹೀಗಾಗಿ ಸಮಯದ ಅಭಾವ ಎದುರಾಗಬಾರದು ಎನ್ನುವ ಕಾರಣಕ್ಕೆ ವೇಳಾಪಟ್ಟಿ ಬದಲಿಸಲಾಗಿದೆ. ಇದೇ ವೇಳೆ ಫೈನಲ್ ಪಂದ್ಯ ಲಂಡನ್‌ನ ಲಾರ್ಡ್ಸ್ ಮೈದಾನದಿಂದ ಸೌಥಾಂಪ್ಟನ್‌ಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.
ಅಗ್ರಶ್ರೇಯಾಂಕಿತ 9 ಟೆಸ್ಟ್ ತಂಡಗಳು ಎರಡು ವರ್ಷಗಳ ಅವಧಿಯಲ್ಲಿ ತವರು ಮತ್ತು ತವರಿನಾಚೆ 6 ಸರಣಿಗಳನ್ನು ಆಡಲಿದ್ದು, ಅಗ್ರಸ್ಥಾನದಲ್ಲಿರುವ ಎರಡು ತಂಡಗಳು ಫೈನಲ್‌ನಲ್ಲಿ ಕಾದಾಡಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.