ಇಂಗ್ಲೆಂಡ್‌ ಟೆಸ್ಟ್‌ಗೆ ಇಂದು ಟೀಂ ಇಂಡಿಯಾ ಆಯ್ಕೆ; ಯಾರಿಗೆಲ್ಲಾ ಸಿಗಲಿದೆ ಸ್ಥಾನ?

Suvarna News   | stockphoto
Published : Jan 19, 2021, 09:43 AM IST
ಇಂಗ್ಲೆಂಡ್‌ ಟೆಸ್ಟ್‌ಗೆ ಇಂದು ಟೀಂ ಇಂಡಿಯಾ ಆಯ್ಕೆ; ಯಾರಿಗೆಲ್ಲಾ ಸಿಗಲಿದೆ ಸ್ಥಾನ?

ಸಾರಾಂಶ

ಫೆಬ್ರವರಿ 05ರಿಂದ ತವರಿನಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ದದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ನೂತನ ಆಯ್ಕೆ ಸಮಿತಿ ಇಂದು ಟೀಂ ಇಂಡಿಯಾವನ್ನು ಆಯ್ಕೆ ಮಾಡಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ನವದೆಹಲಿ(ಜ.19): ಇಂಗ್ಲೆಂಡ್‌ ವಿರುದ್ಧದ 4 ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲೆರಡು ಪಂದ್ಯಗಳಿಗೆ ಮಂಗಳವಾರ ಭಾರತ ತಂಡದ ಆಯ್ಕೆ ನಡೆಯಲಿದೆ. ಐವರು ಆಯ್ಕೆ ಸಮಿತಿ ಸದಸ್ಯರು, ನಾಯಕ ವಿರಾಟ್‌ ಕೊಹ್ಲಿ ಆನ್‌ಲೈನ್‌ ಮೂಲಕ ಸಭೆ ನಡೆಸಿ ತಂಡದ ಆಯ್ಕೆ ನಡೆಸಲಿದ್ದಾರೆ. 

ಆಸ್ಪ್ರೇಲಿಯಾ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಆಟಗಾರರನ್ನು ಉಳಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಚೇತನ್‌ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ಇಂದು(ಜ.19) ಸಂಜೆ 5 ಗಂಟೆಗೆ ಸಭೆ ಸೇರಲು ಸಮಯ ನಿಗದಿಯಾಗಿದೆ. ಇನ್ನು ಫಿಟ್ನೆಸ್ ಸಮಸ್ಯೆ ಎದುರಿಸುತ್ತಿರುವ ಅನುಭವಿ ಬೌಲರ್‌ಗಳಾದ ರವಿಚಂದ್ರನ್ ಅಶ್ವಿನ್ ಹಾಗೂ ಜಸ್ಪ್ರೀತ್ ಬುಮ್ರಾ ಲಭ್ಯತೆ ಬಗ್ಗೆ ಆಯ್ಕೆ ಸಮಿತಿ ಚರ್ಚೆ ನಡೆಸಲಿದೆ ಎನ್ನಲಾಗಿದೆ. ಈ ಇಬ್ಬರು ಬೌಲರ್‌ಗಳು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಬ್ರಿಸ್ಬೇನ್‌ ಟೆಸ್ಟ್‌: ಗಿಲ್ ಆಕರ್ಷಕ ಫಿಫ್ಟಿ, ಆಸೀಸ್‌ಗೆ ಟೀಂ ಇಂಡಿಯಾ ತಿರುಗೇಟು

ಇನ್ನುಳಿದಂತೆ ಆಸೀಸ್ ಪ್ರವಾಸದಲ್ಲಿ ಸ್ನಾಯು ಸೆಳೆತಕ್ಕೆ ಒಳಗಾಗಿರುವ ರವೀಂದ್ರ ಜಡೇಜಾ ಹಾಗೂ ಹನುಮ ವಿಹಾರಿ ಫಿಟ್ನೆಸ್‌ ವರದಿಯನ್ನು ಬಿಸಿಸಿಐ ಆಯ್ಕೆ ಸಮಿತಿ ಎದುರು ನೋಡುತ್ತಿದೆ. ಬೌಲಿಂಗ್‌ ವಿಭಾಗದಲ್ಲಿ ಸಹಜವಾಗಿಯೇ ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್‌ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ. ಆದರೆ ಆಸೀಸ್‌ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ತೋರಿರುವ ಮೊಹಮ್ಮದ್ ಸಿರಾಜ್, ಟಿ. ನಟರಾಜನ್ ಹಾಗೂ ಶಾರ್ದೂಲ್‌ ಠಾಕೂರ್‌ ಅವರನ್ನು ಏನು ಮಾಡಬೇಕು ಎನ್ನುವ ತಲೆನೋವು ಆಯ್ಕೆಗಾರರಿಗೆ ಶುರುವಾಗಿದೆ. 

ಫೆ.5ರಿಂದ 9ರವರೆಗೆ ಚೆನ್ನೈನಲ್ಲಿ ಮೊದಲ ಟೆಸ್ಟ್‌ ನಡೆಯಲಿದೆ, ಇನ್ನು ಎರಡನೇ ಟೆಸ್ಟ್ ಪಂದ್ಯ ಕೂಡಾ ಚೆನ್ನೈನಲ್ಲೇ  ಫೆಬ್ರವರಿ 13 ರಿಂದ 17ರವರೆಗೆ ಜರುಗಲಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?
T20I ನೂರು ಸಿಕ್ಸರ್ ಕ್ಲಬ್ ಸೇರಿದ ಹಾರ್ದಿಕ್ ಪಾಂಡ್ಯ; ರೋಹಿತ್ ರೆಕಾರ್ಡ್ ಮುರಿತಾರಾ ಈ ಆಲ್ರೌಂಡರ್?