
ದುಬೈ[ಮಾ.03] ಭಯೋತ್ಫಾದನೆಗೆ ಕುಮ್ಮಕ್ಕು ನೀಡುವ ಪಾಕಿಸ್ತಾನವನ್ನು ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರಗಿಡಬೇಕು ಎಂಬ ಬಿಸಿಸಿಐ ಮನವಿಯನ್ನು ಐಸಿಸಿ ತಳ್ಳಿಹಾಕಿದೆ.
ಉಗ್ರರನ್ನು ಬೆಂಬಲಿಸುವ ಪಾಕ್ ತಂಡವನ್ನು ಬಹಿಷ್ಕರಿಸಿ: ವಿನೋದ್ ರಾಯ್
ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಷ್ ಇ ಮೊಹಮ್ಮದ್ ಸಂಘಟನೆ ಪುಲ್ವಾಮಾದಲ್ಲಿ ನಡೆಸಿದ ಆತ್ಮಾಹುತಿ ದಾಳಿಗೆ ಭಾರತದ 44 ಸಿಆರ್’ಪಿಎಫ್ ಯೋಧರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಭಾರತ ತಂಡವು ಪಾಕ್ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಬೇಕು ಎಂಬ ಕೂಗು ಕೇಳಿಬಂದಿತ್ತು. ಈ ಕುರಿತಂತೆ ಐಸಿಸಿಗೆ ಪತ್ರ ಬರೆದಿದ್ದ ಬಿಸಿಸಿಐ, ಭಯೋತ್ಫಾದನೆಗೆ ನೆರವು ನೀಡುವ ದೇಶದೊಂದಿಗೆ ಯಾವುದೇ ಸಂಪರ್ಕ ಹೊಂದಬಾರದು ಎಂದು ಪತ್ರಬರೆದಿತ್ತು. ಇದೀಗ ಬಂದ ಮಾಧ್ಯಮಗಳ ವರದಿ ಪ್ರಕಾರ, ಬಿಸಿಸಿಐನ ಮನವಿಯನ್ನು ಐಸಿಸಿ ತಳ್ಳಿಹಾಕಿದೆ. ಅಲ್ಲದೇ ಐಸಿಸಿ ಟೂರ್ನಿಯು ರಾಜಕೀಯ ಗೊಂದಲಗಳಿಂದ ಸಂಪೂರ್ಣ ಅಂತರವನ್ನು ಕಾಯ್ದುಕೊಂಡಿದೆ ಎಂದು ತಿಳಿಸಿದೆ. ಅಲ್ಲದೆ ಎಲ್ಲಾ ತಂಡಗಳಿಗೂ ಸೂಕ್ತ ಭದ್ರತೆಯನ್ನು ಒದಗಿಸುವುದಾಗಿ ಐಸಿಸಿ ಭರವಸೆ ನೀಡಿದೆ.
ವಿಶ್ವಕಪ್ ಭದ್ರತೆ ಕುರಿತು ಬಿಸಿಸಿಐಗೆ ಐಸಿಸಿ ಭರವಸೆ
2019ರ ಏಕದಿನ ವಿಶ್ವಕಪ್ ಟೂರ್ನಿಯು ಮೇ 30ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಭಾರತ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. ಇನ್ನು ಪಾಕಿಸ್ತಾನ ವಿರುದ್ಧ ಜೂನ್ 16ರಂದು ಭಾರತ ಕಾದಾಡಲಿದೆ.
ಆಟಗಾರರ ಸುರಕ್ಷತೆಯೇ ಮೊದಲ ಆದ್ಯತೆ: ಐಸಿಸಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.