
ಮ್ಯಾಂಚೆಸ್ಟರ್(ಆ.07): ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಪಾಕಿಸ್ತಾನ ಮೇಲುಗೈ ಸಾಧಿಸಿದೆ. ಮೊದಲಿಗೆ ಬ್ಯಾಟಿಂಗ್‌ನಲ್ಲಿ ಪ್ರಾಬಲ್ಯ ಮೆರೆದಿದ್ದ ಪಾಕ್, ಬಳಿಕ ಬೌಲಿಂಗ್‌ನಲ್ಲೂ ತನ್ನ ಸಾಮರ್ಥ್ಯವನ್ನು ಅನಾವರಣ ಮಾಡಿದೆ.
ಪಾಕಿಸ್ತಾನ ಆರಂಭಿಕ ಬ್ಯಾಟ್ಸ್‌ಮನ್ ಶಾನ್ ಮಸೂದ್ (156) ಬಾರಿಸಿದ ಆಕರ್ಷಕ ಶತಕದ ನೆರವಿನಿಂದ ಮೊದಲ ಇನ್ನಿಂಗ್ಸ್‌ನಲ್ಲಿ 326 ರನ್ ಗಳಿಸಿತು. ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದೆಡೆ ನೆಲಕಚ್ಚಿ ಬ್ಯಾಟಿಂಗ್ ಪ್ರದರ್ಶನ ತೋರಿದ ಮಸೂದ್ 319 ಎಸೆತಗಳನ್ನು ಎದುರಿಸಿ 18 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ 156 ರನ್ ಗಳಿಸಿ 9ನೇಯವರಾಗಿ ವಿಕೆಟ್ ಒಪ್ಪಿಸಿದರು. ಮಧ್ಯಮ ಕ್ರಮಾಂಕದಲ್ಲಿ ಶಾದಾಬ್ ಖಾನ್(45) ಉತ್ತಮ ಸಾಥ್ ನೀಡಿದರು. ಇಂಗ್ಲೆಂಡ್ ಪರ ಸ್ಟುವರ್ಟ್ ಬ್ರಾಡ್ ಹಾಗೂ ಜೋಫ್ರಾ ಆರ್ಚರ್ ತಲಾ ಮೂರು ವಿಕೆಟ್ ಪಡೆದರೆ, ಕ್ರಿಸ್ ವೋಕ್ಸ್ 2 ಹಾಗೂ ಆಂಡರ್‌ಸನ್ 1 ವಿಕೆಟ್ ಪಡೆದರು.
ಐತಿಹಾಸಿಕ, ಸಾರ್ಥಕ ದಿನ: ರಾಮ ಮಂದಿರ ನಿರ್ಮಾಣ ಕೊಂಡಾಡಿದ ಪಾಕ್ ಕ್ರಿಕೆಟಿಗ ಕನೇರಿಯಾ!
ಇಂಗ್ಲೆಂಡ್‌ಗೆ ಆರಂಭಿಕ ಆಘಾತ: ಇನ್ನು ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಮೊದಲ ಓವರ್‌ನಲ್ಲೇ ರೋರಿ ಬರ್ನ್ಸ್ ವಿಕೆಟ್ ಕಳೆದುಕೊಂಡಿತು. ನಾಲ್ಕನೇ ಓವರ್‌ನಲ್ಲಿ ಮತ್ತೋರ್ವ ಆರಂಭಿಕ ಬ್ಯಾಟ್ಸ್‌ಮನ್ ಸಿಬ್ಲಿಯನ್ನು ಮೊಹಮ್ಮದ್ ಅಬ್ಬಾಸ್ ಪೆವಿಲಿಯನ್ ಹಾದಿ ತೋರಿಸಿದರು. ಬೆನ್ ಸ್ಟೋಕ್ಸ್ ಶೂನ್ಯ ಸುತ್ತಿ ಅಬ್ಬಾಸ್‌ಗೆ ಎರಡನೇ ಬಲಿಯಾದರು. ಇದೀಗ 2ನೇ ದಿನದಂತ್ಯಕ್ಕೆ ಇಂಗ್ಲೆಂಡ್ ತಂಡವನ್ನು 4 ವಿಕೆಟ್ ನಷ್ಟಕ್ಕೆ 92 ರನ್‌ಗಳಿಸಿದೆ.
ಇಂಗ್ಲೆಂಡ್ ಇನ್ನೂ 234 ರನ್‌ಗಳಿಂದ ಹಿಂದಿದ್ದು, ಓಲಿ ಪೋಪ್ (ಅಜೇಯ 46) ಹಾಗೂ ಜೋಸ್ ಬಟ್ಲರ್ (ಅಜೇಯ 15) 3ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಸ್ಕೋರ್: ಪಾಕಿಸ್ತಾನ 326, ಇಂಗ್ಲೆಂಡ್ 92/4(2ನೇ ದಿನದಂತ್ಯಕ್ಕೆ)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.