ನಾವು ಯಾರೊಬ್ಬರ ಮೇಲೆ ಅವಲಂಬಿತವಾಗಿಲ್ಲ: ಶಿಖರ್ ಧವನ್

Suvarna News   | Asianet News
Published : May 02, 2021, 04:44 PM IST
ನಾವು ಯಾರೊಬ್ಬರ ಮೇಲೆ ಅವಲಂಬಿತವಾಗಿಲ್ಲ: ಶಿಖರ್ ಧವನ್

ಸಾರಾಂಶ

ಡೆಲ್ಲಿ ಕ್ಯಾಪಿಟಲ್ಸ್‌ ತಂಡ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ತೋರುತ್ತಿರುವ ಅದ್ಭುತ ಪ್ರದರ್ಶನದ ಸೀಕ್ರೇಟ್ ಬಿಚ್ಚಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಅಹಮದಾಬಾದ್‌(ಮೇ.02): 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಯಶಸ್ಸಿನ ಗುಟ್ಟನ್ನು ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಬಿಚ್ಚಿಟ್ಟಿದ್ದು, ಡೆಲ್ಲಿ ತಂಡ ಯಾರೊಬ್ಬರ ಪ್ರದರ್ಶನದ ಮೇಲೆ ಅವಲಂಬಿತವಾಗಿಲ್ಲ ಎಂದಿದ್ದಾರೆ.

ನಾವು 7 ಪಂದ್ಯಗಳ ಪೈಕಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದೇವೆ. ಹೀಗಾಗಿ ನಾವು ಒಳ್ಳೆಯ ಹಂತದಲ್ಲಿಯೇ ಇದ್ದೇವೆ. ಒಂದು ಖುಷಿಯ ವಿಚಾರವೇನೆಂದರೆ ಇಡೀ ತಂಡವಾಗಿ ಎಲ್ಲರೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ನಾವು ಬ್ಯಾಟಿಂಗ್‌ನಲ್ಲಿ ಇಲ್ಲವೇ ಬೌಲಿಂಗ್‌ ವಿಭಾಗದಲ್ಲಿ ಯಾರೊಬ್ಬರ ಮೇಲೆ ಅವಲಂಬಿತವಾಗಿಲ್ಲ. ಪಂದ್ಯದಲ್ಲಿ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಹೊತ್ತುಕೊಂಡು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ನಮ್ಮದು ಬಲಿಷ್ಠ ತಂಡವಾಗಿದ್ದು, ತಂಡದ ಪ್ರದರ್ಶನದ ಬಗ್ಗೆ ತೃಪ್ತಿಯಿದೆ ಎಂದು ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಹೇಳಿದ್ದಾರೆ.

ಐಪಿಎಲ್ 2021: ಬಲಿಷ್ಠ ಡೆಲ್ಲಿಗಿಂದು ಪಂಜಾಬ್ ಕಿಂಗ್ಸ್ ಸವಾಲು

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಶಿಖರ್ ಧವನ್ ಅದ್ಭುತ ಫಾರ್ಮ್‌ನಲ್ಲಿರುವ ಶಿಖರ್ ಧವನ್‌ 7 ಪಂದ್ಯಗಳನ್ನಾಡಿ 44.42ರ ಸರಾಸರಿಯಲ್ಲಿ 311 ರನ್‌ ಬಾರಿಸಿದ್ದಾರೆ. ಶಿಖರ್ ಧವನ್‌ ಹಾಗೂ ಪೃಥ್ವಿ ಶಾ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಡುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಇಂದು(ಮೇ.02) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!