BCCI Central Contract: ಬಿಸಿಸಿಐ ನೂತನ ಸೆಂಟ್ರಲ್ ಕಾಂಟ್ರ್ಯಾಕ್ಟ್ ಪ್ರಕಟ; ಈ ಕ್ರಿಕೆಟಿಗರಿಗೆ ಜಾಕ್‌ಪಾಟ್!

Published : Apr 21, 2025, 12:49 PM ISTUpdated : Apr 22, 2025, 02:19 PM IST
BCCI Central Contract: ಬಿಸಿಸಿಐ ನೂತನ ಸೆಂಟ್ರಲ್ ಕಾಂಟ್ರ್ಯಾಕ್ಟ್ ಪ್ರಕಟ; ಈ ಕ್ರಿಕೆಟಿಗರಿಗೆ ಜಾಕ್‌ಪಾಟ್!

ಸಾರಾಂಶ

2024-25ನೇ ಸಾಲಿನ ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್ ಪ್ರಕಟವಾಗಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ 'ಎ+' ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಶುಭ್‌ಮನ್ ಗಿಲ್, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ ಮತ್ತು ರಿಷಭ್ ಪಂತ್ 'ಎ' ಗ್ರೇಡ್‌ನಲ್ಲಿದ್ದಾರೆ.

ಮುಂಬೈ: ಸಾಕಷ್ಟು ಕುತೂಹಲ ಕೆರಳಿಸಿದ್ದ 2024-25ನೇ ಸಾಲಿನ ಸೆಂಟ್ರಲ್ ಕಾಂಟ್ರ್ಯಾಕ್ಟ್‌ ಕೊನೆಗೂ ಪ್ರಕಟವಾಗಿದೆ. ಇದೀಗ ಮತ್ತೊಮ್ಮೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ಎ+  ಗ್ರೇಡ್‌ನಲ್ಲಿ ತಮ್ಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಬಾರಿ ಕೂಡ ಈ ನಾಲ್ವರು ಆಟಗಾರರು ಬಿಸಿಸಿಐ ಕೇಂದ್ರೀಯ ಗುತ್ತಿಗೆಯಲ್ಲಿ 'ಎ+' ಗ್ರೇಡ್ ಪಡೆದುಕೊಂಡಿದ್ದರು. 

ಇನ್ನುಳಿದಂತೆ ಪ್ರತಿಭಾನ್ವಿತ ಕ್ರಿಕೆಟಿಗರಾದ ಶುಭ್‌ಮನ್ ಗಿಲ್, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 'ಎ' ಗ್ರೇಡ್‌ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಭಾರತ ಟಿ20 ತಂಡದ ನಾಯಕರಾಗಿ ನೇಮಕವಾಗಿರುವ ಸೂರ್ಯಕುಮಾರ್ ಯಾದವ್ 'ಬಿ' ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಸಾಕಷ್ಟು ಕುತೂಹಲ ಕೆರಳಿಸಿದ್ದ ಶ್ರೇಯಸ್ ಅಯ್ಯರ್ ಹಾಗೂ ಇಶಾನ್ ಕಿಶನ್ ಇದೀಗ ಹೊಸದಾಗಿ ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಬಾರಿ ಡೊಮೆಸ್ಟಿಕ್ ಕ್ರಿಕೆಟ್ ಆಡಲು ಹಿಂದೇಟು ಹಾಕಿದ್ದ ಈ ಇಬ್ಬರು ಆಟಗಾರರು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಿಂದ ಹೊರಬಿದ್ದಿದ್ದರು. ಇದೀಗ ಶ್ರೇಯಸ್ ಅಯ್ಯರ್ 'ಬಿ' ಗ್ರೇಡ್‌ನಲ್ಲಿ ಸ್ಥಾನ ಪಡೆದರೆ, ಇಶಾನ್ ಕಿಶನ್ 'ಸಿ' ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಐಪಿಎಲ್‌ನ ಸಾರ್ವಕಾಲಿಕ ದಾಖಲೆ ಮುರಿದ ವಿರಾಟ್ ಕೊಹ್ಲಿ!

ಶ್ರೇಯಸ್ ಅಯ್ಯರ್‌ಗೆ ಬಂಪರ್: ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಕಳೆದ ಬಾರಿ ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಿಂದ ಹೊರಬಿದ್ದ ಬೆನ್ನಲ್ಲೇ ಅಯ್ಯರ್ ಕ್ರಿಕೆಟ್ ಕರಿಯರ್ ಮುಗಿಯಿತು ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಕಳೆದ ಐಪಿಎಲ್‌ನಲ್ಲಿ ನಾಯಕನಾಗಿ ಕೆಕೆಆರ್ ತಂಡವನ್ನು ಚಾಂಪಿಯನ್ ಮಾಡಿದ್ದ ಶ್ರೇಯಸ್ ಅಯ್ಯರ್, 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಶ್ರೇಯಸ್ ಅಯ್ಯರ್ ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಕಳೆದ ಬಾರಿ ಬಿ ಗ್ರೇಡ್ ಪಡೆದುಕೊಂಡಿದ್ದ ರಿಷಭ್ ಪಂತ್ ಇದೀಗ 'ಎ' ಗ್ರೇಡ್‌ಗೆ ಅಪ್‌ಗ್ರೇಡ್ ಆಗಿದ್ದಾರೆ. ಇನ್ನು ಕೆಲ ತಿಂಗಳ ಹಿಂದಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ರವಿಚಂದ್ರನ್ ಅಶ್ವಿನ್, ಸಹಜವಾಗಿಯೇ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಿಂದ ಹೊರಬಿದ್ದಿದ್ದಾರೆ.

ಇದನ್ನೂ ಓದಿ: 8ನೇ ತರಗತಿ ಹುಡುಗನ ಐಪಿಎಲ್ ಅಟ ನೋಡಲು ರಾತ್ರಿಯಿಡಿ ಎಚ್ಚರವಿದ್ದೆ: google CEO ಸುಂದರ್ ಪಿಚೈ

ಇನ್ನು 'ಸಿ' ಗ್ರೇಡ್‌ನಲ್ಲಿ ಮಹತ್ವದ ಬದಲಾವಣೆಗಳಾಗಿದ್ದು, ಕಳೆದ ಬಾರಿ 'ಸಿ' ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದ ಶಿವಂ ದುಬೆ, ಜಿತೇಶ್ ಶರ್ಮಾ, ಕೆ ಎಸ್ ಭರತ್ ಹಾಗೂ ಆವೇಶ್ ಖಾನ್ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಿಂದ ಹೊರಬಿದ್ದಿದ್ದಾರೆ. ಇನ್ನು ಧೃವ್ ಜುರೆಲ್, ಸರ್ಫರಾಜ್ ಖಾನ್, ನಿತೀಶ್ ರೆಡ್ಡಿ, ಅಭಿಷೇಕ್ ಶರ್ಮಾ, ಆಕಾಶ್ ದೀಪ್, ವರುಣ್ ಚಕ್ರವರ್ತಿ ಹಾಗೂ ಹರ್ಷಿತ್ ರಾಣಾ ಸೆಂಟ್ರಲ್ ಕಾಂಟ್ರ್ಯಾಕ್ಟ್‌ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 

ಬಿಸಿಸಿಐ ಸೆಂಟ್ರಲ್ ಕಾಂಟ್ರ್ಯಾಕ್ಟ್ ಪ್ರಕಾರ, ಎ+ ಗ್ರೇಡ್ ಪಡೆದ ಆಟಗಾರರು ವಾರ್ಷಿಕ 7 ಕೋಟಿ ರುಪಾಯಿ ಸಂಭಾವನೆ ಪಡೆದುಕೊಳ್ಳುತ್ತಾರೆ. ಇನ್ನು 'ಎ' ಗ್ರೇಡ್ ಕಾಂಟ್ರ್ಯಾಕ್ಟ್ ಪಡೆದ ಆಟಗಾರರು ವಾರ್ಷಿಕ 5 ಕೋಟಿ ರುಪಾಯಿ ಸಂಭಾವನೆ ಪಡೆದುಕೊಳ್ಳುತ್ತಾರೆ. ಇನ್ನು 'ಬಿ' ಗ್ರೇಡ್ ಪಡೆದ ಆಟಗಾರರು ಮೂರು ಕೋಟಿ ಹಾಗೂ 'ಸಿ' ಪಡೆದ ಆಟಗಾರರು ವಾರ್ಷಿಕ ಒಂದು ಕೋಟಿ ರುಪಾಯಿ ಸಂಭಾವನೆ ಪಡೆದುಕೊಳ್ಳುತ್ತಾರೆ. 

ಇದನ್ನೂ ಓದಿ: ಶುಭ್‌ಮನ್ ಗಿಲ್ ಜತೆ ಸಾರಾ ತೆಂಡುಲ್ಕರ್ ಬ್ರೇಕ್‌ಅಪ್! ಅಯ್ಯೋ, ಏನಾಯ್ತು?

ಸೆಂಟ್ರಲ್ ಕಾಂಟ್ರ್ಯಾಕ್ಟ್ ಕಂಪ್ಲೀಟ್ ಡೀಟೈಲ್ಸ್:

ಗ್ರೇಡ್ 'ಎ+': ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ

ಗ್ರೇಡ್ 'ಎ': ರಿಷಭ್ ಪಂತ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆ ಎಲ್ ರಾಹುಲ್, ಶುಭ್‌ಮನ್ ಗಿಲ್ ಹಾಗೂ ಹಾರ್ದಿಕ್ ಪಾಂಡ್ಯ.

ಗ್ರೇಡ್ 'ಬಿ': ಸೂರ್ಯಕುಮಾರ್ ಯಾದವ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ಯಶಸ್ವಿ ಜೈಸ್ವಾಲ್.

ಗ್ರೇಡ್ "ಸಿ': ರಿಂಕು ಸಿಂಗ್, ತಿಲಕ್ ವರ್ಮಾ, ಋತುರಾಜ್ ಗಾಯಕ್ವಾಡ್, ಶಿವಂ ದುಬೆ, ರವಿ ಬಿಷ್ಣೋಯಿ, ವಾಷಿಂಗ್ಟನ್ ಸುಂದರ್, ಮುಕೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ರಜತ್ ಪಾಟೀದಾರ್, ಧೃವ್ ಜುರೆಲ್, ಸರ್ಫರಾಜ್ ಖಾನ್, ನಿತೀಶ್ ರೆಡ್ಡಿ, ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಆಕಾಶ್‌ ದೀಪ್, ವರುಣ್ ಚಕ್ರವರ್ತಿ ಹಾಗೂ ಹರ್ಷಿತ್ ರಾಣಾ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿರಾಟ್ ಕೊಹ್ಲಿ to ಕೆಎಲ್ ರಾಹುಲ್, ಭಾರತೀಯ ಕ್ರಿಕೆಟಿಗರಲ್ಲಿದೆ ಅತೀ ದುಬಾರಿ ಕಾರು
ಬ್ರೇಕ್ ಅಪ್ ಆಗೋರಿಗೆ ಮೂವ್ ಆನ್ ಆಗೋ ಬೆಸ್ಟ್ ಪಾಠ ಹೇಳಿದ ಸ್ಮೃತಿ ಮಂಧನಾ! ಕೊನೆಗೂ ಮೌನ ಮುರಿದ ಕ್ರಿಕೆಟರ್!