ಗಂಭೀರ್ ಕೋಚ್ ಆಗುವುದು ಖಚಿತವಾಗುತ್ತಿದ್ದಂತೆಯೇ ಜಿಂಬಾಬ್ವೆ ಟಿ20 ಸರಣಿಗೆ ಶ್ರೇಯಸ್‌ ಅಯ್ಯರ್‌ ಆಯ್ಕೆ?

By Kannadaprabha News  |  First Published Jun 19, 2024, 12:42 PM IST

ಜುಲೈನಲ್ಲಿ ಭಾರತ ತಂಡ ಜಿಂಬಾಬ್ವೆ ಪ್ರವಾಸಕ್ಕೆ ತೆರಳಲಿದ್ದು, 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಸರಣಿಗೆ ಶ್ರೇಯಸ್‌ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ. ಒಂದು ವೇಳೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆಯಾಗದೆ ಇದ್ದರೂ ಜುಲೈ ಅಂತ್ಯದಲ್ಲಿ ಶ್ರೀಲಂಕಾಕ್ಕೆ 3 ಏಕದಿನ ಪಂದ್ಯವಾಡಲು ಭಾರತ ತಂಡ ತೆರಳಲಿದ್ದು, ಆ ಸರಣಿಗೆ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.


ನವದೆಹಲಿ: ಗೌತಮ್‌ ಗಂಭೀರ್‌ ಭಾರತ ತಂಡದ ನೂತನ ಕೋಚ್‌ ಆಗಿ ಆಯ್ಕೆಯಾಗುತ್ತಿದ್ದಂತೆ ತಂಡದಿಂದ ಹೊರಬಿದ್ದಿರುವ ಬ್ಯಾಟರ್‌ ಶ್ರೇಯಸ್‌ ಅಯ್ಯರ್‌ಗೆ ಮತ್ತೆ ಅವಕಾಶ ಸಿಗಬಹುದು ಎನ್ನುವ ಚರ್ಚೆ ಭಾರತೀಯ ಕ್ರಿಕೆಟ್‌ ವಲಯದಲ್ಲಿ ಶುರುವಾಗಿದೆ. ಗಂಭೀರ್‌ ಮಾರ್ಗದರ್ಶನದಡಿ ಶ್ರೇಯಸ್‌ ಇತ್ತೀಚೆಗೆ ಕೆಕೆಆರ್‌ ತಂಡವನ್ನು ಐಪಿಎಲ್‌ ಚಾಂಪಿಯನ್‌ ಪಟ್ಟಕ್ಕೇರಿಸಿದ್ದರು. 

ಜುಲೈನಲ್ಲಿ ಭಾರತ ತಂಡ ಜಿಂಬಾಬ್ವೆ ಪ್ರವಾಸಕ್ಕೆ ತೆರಳಲಿದ್ದು, 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಸರಣಿಗೆ ಶ್ರೇಯಸ್‌ ಆಯ್ಕೆಯಾಗಬಹುದು ಎನ್ನಲಾಗುತ್ತಿದೆ. ಒಂದು ವೇಳೆ ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆಯಾಗದೆ ಇದ್ದರೂ ಜುಲೈ ಅಂತ್ಯದಲ್ಲಿ ಶ್ರೀಲಂಕಾಕ್ಕೆ 3 ಏಕದಿನ ಪಂದ್ಯವಾಡಲು ಭಾರತ ತಂಡ ತೆರಳಲಿದ್ದು, ಆ ಸರಣಿಗೆ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Tap to resize

Latest Videos

T20 World Cup: ಸೂಪರ್ 8 ಮೊದಲ ಪಂದ್ಯ- ಹರಿಣಗಳಿಗೆ ಆತಿಥೇಯ ಅಮೆರಿಕದ ಸವಾಲು..!

ಏಕದಿನ ರ್‍ಯಾಂಕಿಂಗ್‌: 3ನೇ ಸ್ಥಾನಕ್ಕೇರಿದ ಮಂಧನಾ

ದುಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿದ್ದ ಭಾರತದ ತಾರಾ ಬ್ಯಾಟರ್‌ ಸ್ಮೃತಿ ಮಂಧನಾ, ಐಸಿಸಿ ಮಹಿಳಾ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ 2 ಸ್ಥಾನ ಏರಿಕೆ ಕಂಡಿದ್ದಾರೆ. ಮಂಗಳವಾರ ಪ್ರಕಟಗೊಂಡ ಪರಿಷ್ಕೃತ ಪಟ್ಟಿಯಲ್ಲಿ ಸ್ಮೃತಿ 3ನೇ ಸ್ಥಾನ ಪಡೆದಿದ್ದಾರೆ. ಸ್ಮೃತಿ 715 ರೇಟಿಂಗ್‌ ಅಂಕಗಳನ್ನು ಹೊಂದಿದ್ದಾರೆ. ಇಂಗ್ಲೆಂಡ್‌ನ ನಥಾಲಿ ಸ್ಕೀವರ್‌ ಬ್ರಂಟ್‌ ಹಾಗೂ ಶ್ರೀಲಂಕಾದ ಚಾಮರಿ ಅಟಾಪಟು ಕ್ರಮವಾಗಿ 2 ಹಾಗೂ 3ನೇ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ದೀಪ್ತಿ ಶರ್ಮಾ 1 ಸ್ಥಾನ ಮೇಲೇರಿ 4ನೇ ಸ್ಥಾನ ಪಡೆದಿದ್ದಾರೆ.

ವಿರಾಟ್ ಕೊಹ್ಲಿ ಸೇರಿ ಈ ನಾಲ್ವರನ್ನು ರೀಟೈನ್‌ ಮಾಡಲು ರೆಡಿಯಾದ ಆರ್‌ಸಿಬಿ..! ಮ್ಯಾಕ್ಸಿ, ಫಾಫ್ ಕಥೆ ಏನು?

ಭಾರತ vs ದ.ಆಫ್ರಿಕಾ 2ನೇ ಏಕದಿನ ಇಂದು

ಬೆಂಗಳೂರು: ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ 2ನೇ ಏಕದಿನ ಪಂದ್ಯ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯವನ್ನು 143 ರನ್‌ಗಳಿಂದ ಗೆದ್ದುಕೊಂಡಿದ್ದ ಭಾರತ, 2ನೇ ಪಂದ್ಯದಲ್ಲೂ ಜಯಭೇರಿ ಬಾರಿಸಿ 1 ಪಂದ್ಯ ಬಾಕಿ ಇರುವಂತೆಯೇ ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದಿಂದ ಸಂಘಟಿತ ಪ್ರದರ್ಶನ ಮೂಡಿಬಂದಿತ್ತು. ಹರ್ಮನ್‌ಪ್ರೀತ್‌ ಕೌರ್‌ ಪಡೆ ತನ್ನ ಪ್ರದರ್ಶನ ಗುಣಮಟ್ಟವನ್ನು ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ. ಬುಧವಾರ ಬೆಂಗಳೂರಲ್ಲಿ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ.

ಪಂದ್ಯ: ಮಧ್ಯಾಹ್ನ 1.30ಕ್ಕೆ, ನೇರ ಪ್ರಸಾರ: ಜಿಯೋ ಸಿನಿಮಾ
 

click me!