
ಬರ್ಮಿಂಗ್‌ಹ್ಯಾಮ್(ಜು.05): ಟೀಂ ಇಂಡಿಯಾ ಪ್ರತಿಭಾನ್ವಿತ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್, ಮತ್ತೊಮ್ಮೆ ಬರ್ಮಿಂಗ್‌ಹ್ಯಾಮ್ ಟೆಸ್ಟ್ ಪಂದ್ಯದಲ್ಲಿ ತಮ್ಮ ದೌರ್ಬಲ್ಯ ಅನಾವರಣ ಮಾಡಿ ಕ್ರಿಕೆಟ್ ಅಭಿಮಾನಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ. ಎಜ್‌ಬಾಸ್ಟನ್ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ನಲ್ಲೂ ಶ್ರೇಯಸ್ ಅಯ್ಯರ್ ಔಟ್ ಆದ ರೀತಿಯನ್ನು ಕ್ರಿಕೆಟ್ ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ. ಇದಷ್ಟೇ ಇದಷ್ಟೇ ಅಲ್ಲದೇ ಐಪಿಎಲ್‌ನಲ್ಲಿ ಕೆಕೆಆರ್ ತಂಡದ ಕೋಚ್ ಆಗಿರುವ ಬ್ರೆಂಡನ್ ಮೆಕ್ಕಲಂ, ಕೆಕೆಆರ್ ನಾಯಕನಾಗಿರುವ ಶ್ರೇಯಸ್ ಅಯ್ಯರ್‌ಗೆ ಮೋಸ ಮಾಡಿದ್ದಾರೆ ಎನ್ನುವ ಮೀಮ್ಸ್‌ಗಳು ಹರಿದಾಡಲಾರಂಭಿಸಿವೆ.
ಮುಂಬೈ ಮೂಲದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ (Shreyas Iyer) ಅವರನ್ನು ಎರಡೂ ಇನಿಂಗ್ಸ್‌ನಲ್ಲೂ ಹೆಚ್ಚುಹೊತ್ತು ಕ್ರೀಸ್‌ನಲ್ಲಿರಲು ಇಂಗ್ಲೆಂಡ್ ಬೌಲರ್‌ಗಳು ಅವಕಾಶವನ್ನೇ ನೀಡಲಿಲ್ಲ. ಬರ್ಮಿಂಗ್‌ಹ್ಯಾಮ್ ಟೆಸ್ಟ್‌ನಲ್ಲಿ ಶ್ರೇಯಸ್ ಅಯ್ಯರ್ ಚುರುಕಾಗಿ ರನ್ ಗಳಿಸಿದರಾದರೂ, ಶಾರ್ಟ್ ಬಾಲ್‌ಗೆ ವಿಕೆಟ್ ಒಪ್ಪಿಸುವ ಮೂಲಕ ತಮ್ಮ ದೌರ್ಬಲ್ಯವನ್ನು ಮತ್ತೊಮ್ಮೆ ಅನಾವರಣ ಮಾಡಿದ್ದಾರೆ.
ಐಪಿಎಲ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಬ್ರೆಂಡನ್ ಮೆಕ್ಕಲಂಗೆ, ತನ್ನ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ದೌರ್ಬಲ್ಯದ ಅರಿವಿದೆ. ಹೀಗಾಗಿಯೇ ಇಂಗ್ಲೆಂಡ್ ಟೆಸ್ಟ್ ತಂಡದ ನೂತನ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಬ್ರೆಂಡನ್ ಮೆಕ್ಕಲಂ, ಬೌಲರ್‌ಗಳಿಗೆ ಶ್ರೇಯಸ್ ಅಯ್ಯರ್ ಎದುರು ಶಾರ್ಟ್ ಬಾಲ್ ಎಸೆಯಲು ಸೂಚನೆ ಕೊಟ್ಟಿದ್ದಾರೆ. ಬ್ರೆಂಡನ್ ಮೆಕ್ಕಲಂ ಅವರ ತಂತ್ರ ಫಲಕೊಟ್ಟಿದೆ.
Birmingham Test ಭಾರತೀಯರ ಮೇಲೆ ಇಂಗ್ಲೆಂಡ್ ಫ್ಯಾನ್ಸ್ ಜನಾಂಗೀಯ ನಿಂದನೆ..!
ಬರ್ಮಿಂಗ್‌ಹ್ಯಾಮ್ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶ್ರೇಯಸ್ ಅಯ್ಯರ್ ಕೇವಲ 11 ಎಸೆತಗಳಲ್ಲಿ 15 ರನ್ ಬಾರಿಸಿ ಜೇಮ್ಸ್ ಆಂಡರ್‌ಸನ್‌ಗೆ ವಿಕೆಟ್ ಒಪ್ಪಿಸಿದ್ದರು. ಇನ್ನು ಇದಾದ ಬಳಿಕ ಎರಡನೇ ಇನಿಂಗ್ಸ್‌ನಲ್ಲಿ ಶ್ರೇಯಸ್ ಅಯ್ಯರ್ 26 ಎಸೆತಗಳಲ್ಲಿ 19 ರನ್ ಬಾರಿಸಿ ಪಾಟ್ಸ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ಶ್ರೇಯಸ್ ಅಯ್ಯರ್ ಔಟಾದ ರೀತಿಯ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೀಮ್ಸ್‌ಗಳು ವೈರಲ್ ಆಗಿವೆ. ಅವುಗಳ ಪೈಕಿ ಅತ್ಯುತ್ತಮವಾದ ಮೀಮ್ಸ್‌ಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ.
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ 5ನೇ ಟೆಸ್ಟ್ ಪಂದ್ಯವು ನಿರ್ಣಾಯಕ ಘಟ್ಟ ತಲುಪಿದ್ದು, ಆತಿಥೇಯ ಇಂಗ್ಲೆಂಡ್ ತಂಡವು ಗೆಲುವಿನತ್ತ ದಾಪುಗಾಲಿಡಲಾರಂಭಿಸಿದೆ. ಭಾರತ ನೀಡಿರುವ 378 ರನ್‌ಗಳ ಸವಾಲಿನ ಗುರಿ ಬೆನ್ನತ್ತಿರುವ ಇಂಗ್ಲೆಂಡ್ ತಂಡವು ನಾಲ್ಕನೇ ದಿನದಾಟದಂತ್ಯದ ವೇಳೆಗೆ ಕೇವಲ 3 ವಿಕೆಟ್ ಕಳೆದುಕೊಂಡು 259 ರನ್ ಬಾರಿಸಿದ್ದು, ಕೊನೆಯ ದಿನ ಗೆಲ್ಲಲು ಕೇವಲ 119 ರನ್‌ಗಳ ಅಗತ್ಯವಿದೆ. ಮಾಜಿ ನಾಯಕ ಜೋ ರೂಟ್ 76 ಹಾಗೂ ಜಾನಿ ಬೇರ್‌ಸ್ಟೋವ್ 72 ಕೊನೆಯ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.