
ಗಾಲೆ: ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಆಗಸ್ಟ್ 15ರಿಂದ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್, ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಈ ದಾಖಲೆಯನ್ನು ಭಾರತದ ಕ್ರಿಕೆಟ್ ದಂತಕಥೆಗಳಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೂ ಮಾಡಲು ಸಾಧ್ಯವಾಗಿಲ್ಲ.
2019ರಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿ ಆರಂಭವಾಗಿದೆ. ಸದ್ಯ ಶುಭ್‌ಮನ್ ಗಿಲ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಶುಭ್‌ಮನ್ ಗಿಲ್, ಭಾರತ ಪರ ಗರಿಷ್ಠ ರನ್ ಸರದಾರರಾಗಿ ಹೊರಹೊಮ್ಮಿದ್ದಾರೆ. ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ 40 ಟೆಸ್ಟ್ ಪಂದ್ಯಗಳಲ್ಲಿ 43.07 ರ ಬ್ಯಾಟಿಂಗ್ ಸರಾಸರಿಯಲ್ಲಿ 10 ಶತಕ ಹಾಗೂ 8 ಅರ್ಧಶತಕ ಸಹಿತ 2,843 ರನ್ ಸಿಡಿಸಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ ಇತಿಹಾಸದಲ್ಲಿ ಭಾರತದ ಯಾವೊಬ್ಬರ ಬ್ಯಾಟರ್ ಕೂಡಾ ಇದುವರೆಗೂ 3000 ರನ್ ಪೂರೈಸಿಲ್ಲ. ಇದೀಗ ಆ ಅಪರೂಪದ ದಾಖಲೆ ಮಾಡಲು ಶುಭ್‌ಮನ್ ಗಿಲ್‌ಗೆ 157 ರನ್‌ಗಳ ಅಗತ್ಯವಿದೆ. ಆಗಸ್ಟ್ 15ರಿಂದ ಆರಂಭವಾಗಲಿರುವ ಗಾಲೆ ಟೆಸ್ಟ್ ಪಂದ್ಯದಲ್ಲಿ ಈ ದಾಖಲೆ ನಿರ್ಮಿಸಲು ಗಿಲ್ ರೆಡಿಯಾಗಿದ್ದಾರೆ. ಒಂದು ವೇಳೆ ಗಿಲ್ 157 ರನ್ ಬಾರಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ 3000 ರನ್ ಬಾರಿಸಿದ ಭಾರತದ ಮೊದಲ ಹಾಗೂ ಒಟ್ಟಾರೆ 13ನೇ ಕ್ರಿಕೆಟಿಗ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ.
ಇನ್ನು ಭಾರತ ಟೆಸ್ಟ್ ತಂಡದ ಮಾಜಿ ಉಪನಾಯಕ ರಿಷಭ್ ಪಂತ್ ಎರಡನೇ ಸ್ಥಾನದಲ್ಲಿದ್ದಾರೆ. ಪಂತ್, 40 ಟೆಸ್ಟ್ ಪಂದ್ಯಗಳಿಂದ 41.49ರ ಬ್ಯಾಟಿಂಗ್ ಸರಾಸರಿಯಲ್ಲಿ 6 ಶತಕ ಹಾಗೂ 16 ಅರ್ಧಶತಕ ಸಹಿತ 2780 ರನ್ ಸಿಡಿಸಿದ್ದಾರೆ.
ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ, ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, 2019ರಿಂದ 2024ರ ಅವಧಿಯಲ್ಲಿ 40 ಟೆಸ್ಟ್ ಪಂದ್ಯಗಳನ್ನಾಡಿ 41.15ರ ಬ್ಯಾಟಿಂಗ್ ಸರಾಸರಿಯಲ್ಲಿ 9 ಶತಕ ಹಾಗೂ 8 ಅರ್ಧಶತಕ ಸಹಿತ 2696 ರನ್ ಬಾರಿಸಿದ್ದಾರೆ. ಇನ್ನು ಭಾರತದ ಮತ್ತೋರ್ವ ದಿಗ್ಗಜ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 46 ಪಂದ್ಯಗಳನ್ನಾಡಿ 35.36ರ ಬ್ಯಾಟಿಂಗ್ ಸರಾಸರಿಯಲ್ಲಿ 5 ಶತಕ ಹಾಗೂ 11 ಅರ್ಧಶತಕ ಸಹಿತ 2617 ರನ್ ಬಾರಿಸಿದ್ದಾರೆ.
1. ಜೋ ರೂಟ್: 6651 ರನ್
2. ಸ್ಟೀವ್ ಸ್ಮಿತ್: 4564 ರನ್
3. ಮಾರ್ನಸ್ ಲಬುಶೇನ್: 4484 ರನ್
4. ಟ್ರ್ಯಾವಿಸ್ ಹೆಡ್: 3929 ರನ್
5. ಬೆನ್ ಸ್ಟೋಕ್ಸ್: 3857 ರನ್
Shubman Gill is on the verge of WTC history!
Shubman Gill has 2,843 WTC runs and is just 157 runs away from completing the massive 3,000-run milestone!
If he reaches the mark, he will become the 13th player ever to achieve this monumental feat in WTC history!#ShubmanGill pic.twitter.com/cKgLFQiFHS— Dream Comparison (@dreamcomparison) August 9, 2026
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.