ದಕ್ಷಿಣ ಆಫ್ರಿಕಾ ಎದುರಿನ ಗುವಾಹಟಿ ಟೆಸ್ಟ್‌ಗೂ ಮುನ್ನ ಭಾರತಕ್ಕೆ ದೊಡ್ಡ ಶಾಕ್!

Published : Nov 20, 2025, 05:18 PM IST
Shubman Gill

ಸಾರಾಂಶ

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನಿಂದ ನಾಯಕ ಶುಭಮನ್ ಗಿಲ್ ಕುತ್ತಿಗೆ ನೋವಿನಿಂದಾಗಿ ಹೊರಬಿದ್ದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.  

ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಕ್ರಿಕೆಟ್ ಟೆಸ್ಟ್‌ನಲ್ಲಿ ನಾಯಕ ಶುಭಮನ್ ಗಿಲ್ ಹೊರಬಿದ್ದಿದ್ದಾರೆ. ಹೀಗಾಗಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಎರಡನೇ ಟೆಸ್ಟ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ, ಹೀಗಾದಲ್ಲಿ ಎರಡನೇ ಟೆಸ್ಟ್‌ನಲ್ಲಿ ಶುಭ್‌ಮನ್ ಗಿಲ್ ಅನುಪಸ್ಥಿತಿ ಭಾರತ ತಂಡವನ್ನು ಕಾಡಲಿದೆ

ಅಭ್ಯಾಸದಿಂದ ದೂರ ಉಳಿದ ಶುಭ್‌ಮನ್ ಗಿಲ್:

ನಿನ್ನೆ ಗುವಾಹಟಿಗೆ ಬಂದಿಳಿದ ಭಾರತ ತಂಡ ಇಂದು ಬೆಳಿಗ್ಗೆ ಅಭ್ಯಾಸಕ್ಕೆ ಇಳಿದರೂ, ಗಿಲ್ ಅಭ್ಯಾಸದಿಂದ ದೂರ ಉಳಿದಿದ್ದರು. ಕೋಲ್ಕತಾದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಕೇವಲ ಮೂರು ಎಸೆತಗಳನ್ನು ಎದುರಿಸಿದ್ದ ಗಿಲ್, ಕುತ್ತಿಗೆ ನೋವಿನಿಂದಾಗಿ ನಾಲ್ಕು ರನ್ ಗಳಿಸಿದ್ದಾಗ ಕ್ರೀಸ್ ತೊರೆದಿದ್ದರು. ನಂತರ ಗಿಲ್ ಬ್ಯಾಟಿಂಗ್‌ಗೆ ಇಳಿಯಲಿಲ್ಲ. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ ಗೆಲ್ಲಲು ಕೆಲವೇ ರನ್ ಬೇಕಿದ್ದವು ಆಗಲೂ ಗಿಲ್ ಬ್ಯಾಟ್ ಮಾಡಲು ಮೈದಾನಕ್ಕಿಳಿದಿರಲಿಲ್ಲ.

ಕೋಲ್ಕತಾದಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ 124 ರನ್‌ಗಳ ಗುರಿ ಬೆನ್ನಟ್ಟಿದ ಭಾರತ 93 ರನ್‌ಗಳಿಗೆ ಆಲೌಟ್ ಆಗಿ 30 ರನ್‌ಗಳ ಸೋಲು ಅನುಭವಿಸಿದಾಗ ಗಿಲ್ ಅನುಪಸ್ಥಿತಿ ನಿರ್ಣಾಯಕವಾಯಿತು. ಎರಡನೇ ಟೆಸ್ಟ್‌ಗೆ ಗಿಲ್‌ಗೆ ಬದಲಿ ಆಟಗಾರನನ್ನು ಆಯ್ಕೆಗಾರರು ಇನ್ನೂ ಪ್ರಕಟಿಸಿಲ್ಲ. ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಋತುರಾಜ್ ಗಾಯಕ್ವಾಡ್ ಅಥವಾ ಕರುಣ್ ನಾಯರ್ ಅವರನ್ನು ಪರಿಗಣಿಸಲಾಗುವುದು ಎಂಬ ವರದಿಗಳಿದ್ದರೂ, ಆಯ್ಕೆಗಾರರು ಬದಲಿ ಆಟಗಾರರನ್ನು ಆಯ್ಕೆ ಮಾಡಲು ಸಿದ್ಧರಿರಲಿಲ್ಲ. ಹೀಗಾಗಿ ಶುಭ್‌ಮನ್ ಗಿಲ್ ಸ್ಥಾನಕ್ಕೆ ಸಾಯಿ ಸುದರ್ಶನ್ ಇಲ್ಲವೇ ದೇವದತ್ ಪಡಿಕ್ಕಲ್ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಗುವಾಹಟಿ ಟೆಸ್ಟ್: ಭಾರತಕ್ಕೆ ಮಾಡು ಇಲ್ಲವೇ ಮಡಿ ಮ್ಯಾಚ್

ಸರಣಿಯಲ್ಲಿ 0-1 ಹಿನ್ನಡೆ ಅನುಭವಿಸಿರುವುದರಿಂದ ಎರಡನೇ ಟೆಸ್ಟ್‌ನಲ್ಲಿ ಭಾರತಕ್ಕೆ ಗೆಲುವು ಅನಿವಾರ್ಯವಾಗಿದೆ. ಟೆಸ್ಟ್ ಡ್ರಾ ಆದರೂ ದಕ್ಷಿಣ ಆಫ್ರಿಕಾ ಸರಣಿ ಗೆಲ್ಲಲಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಮುನ್ನಡೆಗೆ ಅಡ್ಡಿಯಾಗಲಿದೆ. ಎರಡನೇ ಟೆಸ್ಟ್‌ಗೆ ಆತಿಥ್ಯ ವಹಿಸುತ್ತಿರುವ ಗುವಾಹಟಿ ಇದೇ ಮೊದಲ ಬಾರಿಗೆ ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ