
ಗುವ್ಹಾಟಿ (ಸೆ.30) ಟೀಂ ಇಂಡಿಯಾ ನಾಯಕ ಶುಬಮನ್ ಗಿಲ್ ಐತಿಹಾಸಿಕ ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಗಿಲ್ ಸ್ಫೋಟಕ ಡಬಲ್ ಸೆಂಚುರಿ ಸಿಡಿಸಿದ್ದಾರೆ. ವೆಸ್ಟ್ ಇಂಡೀಸ್ ನೀಡಿದ 406 ರನ್ ಟಾರ್ಗೆಟ್ ಚೇಸಿಂಗ್ ವೇಳೆ ಗಿಲ್ ಎಸೆತದಲ್ಲಿ ದ್ವಿಶತಕ ಸಿಡಿಸಿ ಅಬ್ಬರಿಸಿದ್ದಾರೆ. ಶುಬಮನ್ ಗಿಲ್ 2ನೇ ಬಾರಿ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ಇಷ್ಟೇ ಅಲ್ಲ ಶುಬಮನ್ ಗಿಲ್ ಏಕದಿನದಲ್ಲಿ ಅತೀ ವೇಗದಲ್ಲಿ ದ್ವಿಶತಕ ಸಿಡಿಸಿದ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಏಕದಿನದಲ್ಲಿ ಶುಬಮನ್ ಗಿಲ್ ಕೇವಲ 117 ಎಸೆತದಲ್ಲಿ ಡಬಲ್ ಸೆಂಚುರಿ ಸಿಡಿಸಿದ್ದಾರೆ. ಇದಕ್ಕೂ ಮೊದಲು ಟೀಂ ಇಂಡಿಯಾದ ಮತ್ತೊಬ್ಬ ಕ್ರಿಕೆಟಿಗ ಇಶಾನ್ ಕಿಶನ್ 117 ಎಸೆತದಲ್ಲಿ ಡಬಲ್ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಇಶಾನ್ ಕಿಶನ್ ದಾಖಲೆಯನ್ನು ಗಿಲ್ ಮುರಿದಿದ್ದಾರೆ.
ಏಕದಿನದಲ್ಲಿ ರನ್ ಚೇಸಿಂಗ್ ವೇಳೆ ಗರಿಷ್ಠ ರನ್ ಸಿಡಿಸಿದ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೆ ಶುಬಮನ್ ಗಿಲ್ ಪಾತ್ರರಾಗಿದ್ದಾರೆ. ಗಿಲ್ ಅಜೇಯ 215 ರನ್ ಸಿಡಿಸಿ ಮುನ್ನುಗ್ಗುತ್ತಿದ್ದಾರೆ. ಇದಕ್ಕೂ ಮೊದಲು ಚೇಸಿಂಗ್ ವೇಳೆ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಅಜೇಯ 201 ರನ್ ಸಿಡಿಸಿದ್ದರು.
ಶುಬಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಜೊತೆ ಮೊದಲ ವಿಕೆಟ್‌ಗೆ ದಾಖಲೆ ಜೊತೆಯಾಟ ನೀಡಿದ್ದಾರೆ. ಭಾರತದ ಪರ ಗರಿಷ್ಠ ಜೊತೆಯಾಟ ನೀಡಿದ 2ನೇ ಜೋಡಿ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.