
ಕ್ರೈಸ್ಟ್‌ಚರ್ಚ್(ಫೆ.03): ಯುವ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಭಾರತ 'ಎ' ಪರ ಅಜೇಯ ದ್ವಿಶತಕ ಸಿಡಿಸುವ ಮೂಲಕ ಟೆಸ್ಟ್ ಟೀಂ ಇಂಡಿಯಾದಲ್ಲಿ ಸ್ಥಾನ ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನಿಸಿದೆ.
ಒಟ್ಟು 279 ಎಸೆತಗಳಲ್ಲಿ 22 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ ದ್ವಿಶತಕ ಸಿಡಿಸಿ ಸಂಭ್ರಮಿಸಿದರು. ಮೊದಲ ಇನಿಂಗ್ಸ್‌ನಲ್ಲೂ 83 ರನ್ ಬಾರಿಸುವ ಮೂಲಕ ಭಾರತ 'ಎ' ಪರ ಗರಿಷ್ಠ ಸ್ಕೋರರ್ ಎನಿಸಿದ್ದರು. ಈ ದ್ವಿಶತಕ ಟೆಸ್ಟ್ ಟೀಂ ಇಂಡಿಯಾದಲ್ಲಿ ಸ್ಥಾನ ಉಳಿಸಿಕೊಳ್ಳಲು ನೆರವಾಗಬಹುದು. 20 ವರ್ಷದ ಗಿಲ್ ಈ ಹಿಂದೆ ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಸ್ಥಾನ ಪಡೆದಿದ್ದರಾದರೂ, ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಲಭಿಸಿರಲಿಲ್ಲ. ಇನ್ನು ಭಾರತ ಟೆಸ್ಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್‌ವಾಲ್ 2 ಇನಿಂಗ್ಸ್‌ಗಳಲ್ಲೂ ಶೂನ್ಯ ಸುತ್ತಿ ನಿರಾಸೆ ಅನುಭವಿಸಿದರು.
ಕಿವೀಸ್ ಸರಣಿ ಗೆದ್ದು ಧೋನಿ ಸೇರಿದಂತೆ ದಿಗ್ಗಜ ನಾಯಕರನ್ನೇ ಹಿಂದಿಕ್ಕಿದ ಕೊಹ್ಲಿ!
ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಸದ್ಯದಲ್ಲೇ ಬಿಸಿಸಿಐ ಟೀಂ ಇಂಡಿಯಾವನ್ನು ಪ್ರಕಟಿಸುವ ಸಾಧ್ಯತೆಯಿದೆ. 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಫೆಬ್ರವರಿ 21ರಿಂದ ಆರಂಭವಾಗಲಿದೆ.
ಅನಧಿಕೃತ ಟೆಸ್ಟ್ ಡ್ರಾದಲ್ಲಿ ಅಂತ್ಯ:
ಶುಭ್‌ಮನ್ ಗಿಲ್ ಅಜೇಯ ದ್ವಿಶತಕ ಹಾಗೂ ನಾಯಕ ಹನುಮ ವಿಹಾರಿ ಅಜೇಯ ಶತಕದ ನೆರವಿನಿಂದ ಭಾರತ ‘ಎ’, ನ್ಯೂಜಿಲೆಂಡ್ ‘ಎ’ ವಿರುದ್ಧದ ಮೊದಲ ಅನಧಿಕೃತ ಟೆಸ್ಟ್ ಪಂದ್ಯ ಡ್ರಾದಲ್ಲಿ ಮುಕ್ತಾಯವಾಗಿದೆ.
4ನೇ ಹಾಗೂ ಕೊನೆಯ ದಿನವಾದ ಭಾನುವಾರ 2 ವಿಕೆಟ್‌ಗೆ 127 ರನ್‌ಗಳಿಂದ 2ನೇ ಇನ್ನಿಂಗ್ಸ್ ಮುಂದುವರಿಸಿದ ಭಾರತ ‘ಎ’ ಪ್ರಿಯಾಂಕ್ ಪಾಂಚಲ್ (115), ಶುಭ್‌ಮನ್ ಗಿಲ್ (204*), ಹನುಮ ವಿಹಾರಿ (100*) ಹೋರಾಟದಿಂದ ದಿನದಂತ್ಯಕ್ಕೆ 3 ವಿಕೆಟ್‌ಗೆ 448 ರನ್‌ಗಳಿಸಿದ ಪರಿಣಾಮ ಪಂದ್ಯ ಡ್ರಾಗೊಂಡಿತು.
ಸ್ಕೋರ್: ಭಾರತ ‘ಎ’ 216 ಮತ್ತು 448/3
ನ್ಯೂಜಿಲೆಂಡ್ ‘ಎ’ 562/7
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.