
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. 2026ರ ಮಹಿಳಾ ಏಷ್ಯಾ ಕಪ್‌ನಲ್ಲಿ ಹಾಂಗ್ ಕಾಂಗ್ ವಿರುದ್ಧ ನಡೆದ ಪಂದ್ಯದಲ್ಲಿ ಮಂಧಾನ ಭರ್ಜರಿ ಬ್ಯಾಟಿಂಗ್ ನಡೆಸಿ, ಒಂದೇ ಪಂದ್ಯದಲ್ಲಿ ಎರಡು ಬೃಹತ್ ವಿಶ್ವ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಅತಿ ಹೆಚ್ಚು ರನ್ ಮತ್ತು ಅತಿ ಹೆಚ್ಚು ಶತಕಗಳ ದಾಖಲೆ ಈಗ ಮಂಧಾನ ಪಾಲಾಗಿದೆ.
ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 18ನೇ ಶತಕವನ್ನು ಪೂರೈಸಿದರು. ಇದರೊಂದಿಗೆ ಆಸ್ಟ್ರೇಲಿಯಾದ ದಂತಕಥೆ ಮೆಗ್ ಲ್ಯಾನಿಂಗ್ (17 ಶತಕ) ಅವರ ಹೆಸರಿನಲ್ಲಿದ್ದ ಅತಿ ಹೆಚ್ಚು ಅಂತರಾಷ್ಟ್ರೀಯ ಶತಕಗಳ ದಾಖಲೆಯನ್ನು ಮಂಧಾನ ಮುರಿದರು. ಸದ್ಯ ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಮಂಧಾನ ಪಾತ್ರರಾಗಿದ್ದಾರೆ.
ಕೇವಲ ಶತಕ ಮಾತ್ರವಲ್ಲದೆ, ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮಹಿಳಾ ಆಟಗಾರ್ತಿ ಎಂಬ ದಾಖಲೆಯನ್ನು ಮಂಧಾನ ಈಗ ಮುಡಿಗೇರಿಸಿಕೊಂಡಿದ್ದಾರೆ. ಭಾರತದ ಮಾಜಿ ನಾಯಕಿ ಮಿಥಾಲಿ ರಾಜ್ ಅವರು 10,868 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದರು. ಹಾಂಗ್ ಕಾಂಗ್ ವಿರುದ್ಧದ ಈ ಇನಿಂಗ್ಸ್ ಮೂಲಕ ಮಂಧಾನ 10,869* ರನ್‌ಗಳ ಗಡಿಯನ್ನು ದಾಟುವ ಮೂಲಕ ಮಿಥಾಲಿ ಅವರನ್ನು ಹಿಂದಿಕ್ಕಿದ್ದಾರೆ.
ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ಕೇವಲ 64 ಎಸೆತಗಳಲ್ಲಿ 124 ರನ್ ಸಿಡಿಸಿ ಅಬ್ಬರಿಸಿದರು. ಅವರ ಈ ಸ್ಫೋಟಕ ಇನಿಂಗ್ಸ್‌ನಲ್ಲಿ 14 ಬೌಂಡರಿ ಮತ್ತು 7 ಮನಮೋಹಕ ಸಿಕ್ಸರ್‌ಗಳಿದ್ದವು. ಇದು ಟಿ20 ಮಹಿಳಾ ಏಷ್ಯಾ ಕಪ್ ಇತಿಹಾಸದಲ್ಲಿ ದಾಖಲಾದ ಗರಿಷ್ಠ ವೈಯಕ್ತಿಕ ಮೊತ್ತ ಎಂಬ ದಾಖಲೆಯನ್ನೂ ಸಹ ಬರೆದಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.