BJP ಸೇರಲಿಲ್ಲ ದಾದಾ, ಅದಕ್ಕೆ BCCI ನಿಂದ ಗಂಗೂಲಿಗೆ ಗೇಟ್‌ಪಾಸ್: ಟಿಎಂಸಿ

Published : Oct 12, 2022, 01:40 PM IST
BJP ಸೇರಲಿಲ್ಲ ದಾದಾ, ಅದಕ್ಕೆ BCCI ನಿಂದ ಗಂಗೂಲಿಗೆ ಗೇಟ್‌ಪಾಸ್: ಟಿಎಂಸಿ

ಸಾರಾಂಶ

* ಎರಡನೇ ಅವಧಿಗೆ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗುವುದು ಡೌಟ್ * ದಾದಾ ಬಿಸಿಸಿಐ ಚುನಾವಣೆಗೆ ಸ್ಪರ್ಧಿಸದಿರುವುದಕ್ಕೆ ರಾಜಕೀಯ ತಿರುವು * ಬಿಜೆಪಿ ಮೇಲೆ ಗಂಭೀರ ಆರೋಪ ಮಾಡಿದ ತೃಣಮೂಲ ಕಾಂಗ್ರೆಸ್

ಕೋಲ್ಕತಾ(ಅ.12): ಅಕ್ಟೋಬರ್ 18ರಂದು ನಡೆಯಲಿರುವ ಬಿಸಿಸಿಐ ಚುನಾವಣೆಯಲ್ಲಿ ಅಧ್ಯಕ್ಷ ಹುದ್ದೆಗೆ ಮತ್ತೊಮ್ಮೆ ಸ್ಪರ್ಧಿಸದಿರುವ ಸೌರವ್ ಗಂಗೂಲಿ ತೀರ್ಮಾನಿಸಿದ್ದಾರೆ. ಹೀಗಾಗಿ ಕರ್ನಾಟಕ ಮೂಲದ ರೊಜರ್ ಬಿನ್ನಿ, ಬಿಸಿಸಿಐ ನೂತನ ಅಧ್ಯಕ್ಷರಾಗುವುದು ಬಹುತೇಕ ಖಚಿತ ಎನಿಸಿದೆ. ಇದೆಲ್ಲದರ ನಡುವೆ ಸೌರವ್ ಗಂಗೂಲಿ ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗದೇ ಇರುವುದರ ಕುರಿತಂತೆ ರಾಜಕೀಯ ತಿರುವುಗಳು ಪಡೆದುಕೊಂಡಿದ್ದು, ಪಶ್ಚಿಮ ಬಂಗಾಳದ ಆಡಳಿತಾರೂಢ ಪಕ್ಷ ತೃಣಮೂಲ ಕಾಂಗ್ರೆಸ್, ಬಿಜೆಪಿ ಮೇಲೆ ಗಂಭೀರ ಆರೋಪ ಮಾಡಿದೆ.

ಕಳೆದ ವರ್ಷ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷವು, ಪಶ್ಚಿಮ ಬಂಗಾಳದಲ್ಲಿ ಪ್ರಖ್ಯಾತವಾಗಿರುವ ಸೌರವ್ ಗಂಗೂಲಿ, ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಜನರಲ್ಲಿ ಸುಳ್ಳು ಸುದ್ದಿಯನ್ನು ಹರಡಲು ಪ್ರಯತ್ನಿಸಿತ್ತು ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ವಕ್ತಾರ ಕುನಾಲ್ ಘೋಷ್ ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಜಯ್ ಶಾ, ಬಿಸಿಸಿಐ ಕಾರ್ಯದರ್ಶಿಯಾಗಿ ಎರಡನೇ ಅವಧಿಗೆ ಮುಂದುವರೆಯಲಿದ್ದಾರೆ. ಆದರೆ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿ ಮುಂದುವರೆಯದೇ ಇರುವುದು ರಾಜಕೀಯ ಪ್ರತಿಕಾರಕ್ಕೆ ಒಳ್ಳೆಯ ಉದಾಹರಣೆಯಾಗಿದೆ ಎಂದು ಆರೋಪ ಮಾಡಿದ್ದಾರೆ.

ಇನ್ನು ತೃಣಮೂಲ ಕಾಂಗ್ರೆಸ್ ಪಕ್ಷದ ಆರೋಪವನ್ನು ಭಾರತೀಯ ಜನತಾ ಪಾರ್ಟಿಯು ಅಲ್ಲಗಳೆದಿದ್ದು, ಈ ಎಲ್ಲಾ ಆರೋಪಗಳು ಆಧಾರರಹಿತವಾದದ್ದು. ಬಿಜೆಪಿ ಪಕ್ಷವು 'ಕೋಲ್ಕತಾದ ಮಹಾರಾಜ' ಖ್ಯಾತಿಯ ಸೌರವ್ ಗಂಗೂಲಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ತಿರುಗೇಟು ನೀಡಿದೆ.

BCCI ಅಧ್ಯಕ್ಷ ಸೌರವ್ ಗಂಗೂಲಿ ಸ್ಥಾನಕ್ಕೆ ಏಕದಿನ ವಿಶ್ವಕಪ್ ಹೀರೋ ಆಯ್ಕೆ..?

1983ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ, ಮಂಗಳವಾರವಷ್ಟೇ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಹುತೇಕ ರೋಜರ್ ಬಿನ್ನಿ ಅವಿರೋಧವಾಗಿ ಬಿಸಿಸಿಐ ನೂತನ ಅಧ್ಯಕ್ಷರಾಗಿ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿವೆ. 

ಇನ್ನು ಜಯ್ ಶಾ ಕೂಡಾ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಮ್ಮ ನಾಮಪತ್ರವನ್ನು ಸಲ್ಲಿಸಿದ್ದು, ಸತತ ಎರಡನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಕವಾಗುವುದು ಬಹುತೇಕ ಖಚಿತ ಎನಿಸಿದೆ. ಒಂದು ವೇಳೆ ಬೇರೆ ಯಾವ ಅಭ್ಯರ್ಥಿಯು ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸದೇ ಹೋದರೆ, ಜಯ್ ಶಾ ಕೂಡಾ ಅವಿರೋಧವಾಗಿ ಬಿಸಿಸಿಐ ಕಾರ್ಯದರ್ಶಿಯಾಗಿ ಎರಡನೇ ಅವಧಿಗೆ ಆಯ್ಕೆಯಾಗುವ ಸಾಧ್ಯತೆಯಿದೆ. 

ಈ ಹಿಂದೆ ಮಾಧ್ಯಮದವರು ಸೌರವ್ ಗಂಗೂಲಿಯವರನ್ನು ನಿಮಗೆ ರಾಜಕೀಯದಲ್ಲಿ ಆಸಕ್ತಿಯಿದೆಯೇ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ದಾದಾ, ತಮಗೆ ಕ್ರಿಕೆಟ್ ಆಡಳಿತದಲ್ಲಿ ಮಾತ್ರ ಆಸಕ್ತಿಯಿದೆ. ರಾಜಕೀಯದ ಕಡೆ ಒಲವು ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದರು.

ಈ ವರ್ಷದ ಮೇ ತಿಂಗಳಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೌರವ್ ಗಂಗೂಲಿಯವರ ನಿವಾಸಕ್ಕೆ ಡಿನ್ನರ್‌ಗೆ ಆಗಮಿಸಿದ್ದರು. ಇದರ ಬೆನ್ನಲ್ಲೇ ಸೌರವ್‌ ಗಂಗೂಲಿ ಬಿಜೆಪಿ ಸೇರ್ಪಡೆಗೆ ಕಾಲ ಸನ್ನಿಹಿತವಾಗಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದರೆ ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಸೌರವ್, ಅಮಿತ್ ಶಾ ತಮಗೆ ದೀರ್ಘಕಾಲದಿಂದ ಪರಿಚಿತ ವ್ಯಕ್ತಿಯಾಗಿದ್ದು, ಸಹಜ ಭೇಟಿ ನೀಡಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿಗಳು ಇರಲಿಲ್ಲ ಎಂದಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌