
ನವದೆಹಲಿ(ಮೇ.28): ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ)ಯ ಅಧ್ಯಕ್ಷ ಸ್ಥಾನಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಹ ಸ್ಪರ್ಧಿಸಲು ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್, ‘ಗಂಗೂಲಿ ಐಸಿಸಿ ಅಧ್ಯಕ್ಷರಾಗಲು ಅರ್ಹರಿದ್ದಾರೆ’ ಎಂದಿದ್ದರು. ಅವರ ಹೇಳಿಕೆ ಕ್ರಿಕೆಟ್ ವಲಯದಲ್ಲಿ ಕುತೂಹಲ ಹೆಚ್ಚಲು ಕಾರಣವಾಗಿದೆ.
ಹಾಲಿ ಅಧ್ಯಕ್ಷ ಶಶಾಂಕ್ ಮನೋಹರ್ ಅಧಿಕಾರ ಅವಧಿ ಮುಂದಿನ ತಿಂಗಳು ಮುಕ್ತಾಯಗೊಳ್ಳಲಿದ್ದು, ನಾಮನಿರ್ದೇಶಕ ಪ್ರಕ್ರಿಯೆ ಸದ್ಯದಲ್ಲೇ ಆರಂಭಗೊಳ್ಳಲಿದೆ. ಐಸಿಸಿ ಅಧ್ಯಕ್ಷರ ಚುನಾವಣೆ ಜುಲೈನಲ್ಲಿ ನಡೆಯಲಿದೆ. ಸದ್ಯದ ಮಟ್ಟಿಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ಕಾಲಿನ್ ಗ್ರೇವ್ಸ್ ಐಸಿಸಿ ನೂತನ ಅಧ್ಯಕ್ಷರಾಗುವ ನೆಚ್ಚಿನ ಅಭ್ಯರ್ಥಿ ಎನಿಸಿಕೊಂಡಿದ್ದಾರೆ.
#DhoniRetires vs #DhoniNeverTires: ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್..!
ಕಳೆದ ವಾರವಷ್ಟೇ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹಾಗೂ ಕ್ರಿಕೆಟ್ ಡೈರೆಕ್ಟರ್ ಗ್ರೇಮ್ ಸ್ಮಿತ್, ಗಂಗೂಲಿಗೆ ಉತ್ತಮ ನಾಯಕತ್ವ ಗುಣ ಹಾಗೂ ವಿಶ್ವಾಸಾರ್ಹತೆಯಿದ್ದು, ಐಸಿಸಿ ಮುನ್ನಡೆಸಲು ಸಮರ್ಥರಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದರು.
ಗಂಗೂಲಿ, ಶಾ ಕಾರ್ಯಾವಧಿ 3 ವರ್ಷಕ್ಕೆ ವಿಸ್ತರಣೆ?
ನವದೆಹಲಿ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಅವರ ಕಾರ್ಯಾವಧಿಯನ್ನು 3 ವರ್ಷಕ್ಕೆ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಅರ್ಜಿ ಸಲ್ಲಿಸಿದ್ದಾರೆ.
ನ್ಯಾ.ಲೋಧಾ ಸಮಿತಿ ಶಿಫಾರಸ್ಸಿನ ಅನ್ವಯ ಇಬ್ಬರು ಕ್ರಮವಾಗಿ ಜೂನ್ ಹಾಗೂ ಜುಲೈನಿಂದ 3 ವರ್ಷಗಳ ಕೂಲಿಂಗ್ ಆಫ್ ಅವಧಿಗೆ ತೆರಳಬೇಕು. ಆದರೆ ಈ ನಿಯಮಕ್ಕೆ ಕಳೆದ ವರ್ಷ ಡಿ.1ರಂದು ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ತಿದ್ದುಪಡಿ ತರಲಾಗಿದೆ. ಸುಪ್ರೀಂ ಕೋರ್ಟ್ ಇಬ್ಬರ ಕೂಲಿಂಗ್ ಆಫ್ ಅವಧಿಯನ್ನು ತೆರವುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಗಂಗೂಲಿ, ಶಾ ಅಧಿಕಾರ ವಹಿಸಿಕೊಂಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.