
ಕೋಲ್ಕತಾ[ನ.04]: ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನಾಡಲು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕೇವಲ 3 ಸೆಕೆಂಡುಗಳಲ್ಲಿ ಒಪ್ಪಿಕೊಂಡರು ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಹಿರಂಗಪಡಿಸಿದ್ದಾರೆ.
ಡೇ ಅಂಡ್ ನೈಟ್ ಟೆಸ್ಟ್ ಮ್ಯಾಚ್: ಏನು? ಎತ್ತ..? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
‘ಕಳೆದ ವರ್ಷ ಆಸ್ಪ್ರೇಲಿಯಾ ಪ್ರವಾಸದ ವೇಳೆ ಭಾರತ ತಂಡ ಅಡಿಲೇಡ್‌ನಲ್ಲಿ ಹಗಲು-ರಾತ್ರಿ ಟೆಸ್ಟ್ ಯಾಕೆ ಆಡಲಿಲ್ಲ ಎಂಬುದು ನನಗೆ ಗೊತ್ತಿಲ್ಲ. ಆದರೆ ಕೊಹ್ಲಿಯನ್ನು ಭೇಟಿ ಮಾಡಿದಾಗ ಹಗಲು-ರಾತ್ರಿ ಟೆಸ್ಟ್ ಕುರಿತಾಗಿ ಪ್ರಶ್ನಿಸಿದೆ. ಕೇವಲ 3 ಸೆಕೆಂಡುಗಳಲ್ಲಿ ಅವರು ಒಪ್ಪಿದರು. ಟೆಸ್ಟ್ ಕ್ರಿಕೆಟ್ ಜನಪ್ರಿಯಗೊಳಿಸಲು ಬದಲಾವಣೆ ಅಗತ್ಯ ಎನ್ನುವುದು ಆಟಗಾರರಿಗೆ ಮನವರಿಕೆಯಾಗಿದೆ’ ಎಂದು ಗಂಗೂಲಿ ಹೇಳಿದರು.
ರಾಜಧಾನಿಯಲ್ಲಿ ನಡೆಯಲಿಲ್ಲ ಆಟ; ಬಾಂಗ್ಲಾದೇಶ ವಿರುದ್ದ ಸೋಲು ಕಂಡ ಭಾರತ!
ನ.22ರಂದು ಇಲ್ಲಿನ ಈಡನ್ ಗಾರ್ಡನ್ಸ್‌ನಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವೆ ಹಗಲು-ರಾತ್ರಿ ಟೆಸ್ಟ್ ನಡೆಯಲಿದೆ. ಇದೇ ಮೊದಲ ಬಾರಿಗೆ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಟೆಸ್ಟ್ ಡೇ ಅಂಡ್ ನೈಟ್ ಪಂದ್ಯವನ್ನಾಡುತ್ತಿವೆ. ಮಧ್ಯಾಹ್ನ 2 ಗಂಟೆ ಪಂದ್ಯ ಆರಂಭವಾಗಿ 9 ಗಂಟೆಗೆ ದಿನದಾಟ ಮುಕ್ತಾಯಗೊಳ್ಳಲಿದೆ.
ಮೊದಲ ಅಹರ್ನಿಶಿ ಟೆಸ್ಟ್ ಪಂದ್ಯವು ನವೆಂಬರ್ 2015ರಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ನಡೆದಿತ್ತು. ಅಡಿಲೇಡ್ ಓವಲ್’ನಲ್ಲಿ ನಡೆದ ಡೇ ಅಂಡ್ ನೈಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 3 ವಿಕೆಟ್’ಗಳ ಜಯ ಸಾಧಿಸಿತ್ತು. ಇದಾದ ಬಳಿಕ ಇದುವರೆಗೂ ಒಟ್ಟು 11 ಪಂದ್ಯಗಳು ನಡೆದಿದ್ದು, ಎಲ್ಲಾ ಪಂದ್ಯಗಳಲ್ಲೂ ಫಲಿತಾಂಶ ಹೊರಬಂದಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.