ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿಯ ಆಯೋಜನೆಯ ಬಗ್ಗೆ ಉಭಯ ದೇಶಗಳ ಪ್ರಧಾನಿಗಳಾದ ಮೋದಿ ಹಾಗೂ ಇಮ್ರಾನ್ ಖಾನ್ ಅವರನ್ನು ಕೇಳಿ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಕೋಲ್ಕತಾ(ಅ.18): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ನಿಯೋಜಿತ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬೆನ್ನಲ್ಲೇ ಕಳೆದ ಕೆಲ ವರ್ಷಗಳಿಂದ ಸ್ತಬ್ಧವಾಗಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ದ್ವಿಪಕ್ಷೀಯ ಕ್ರಿಕೆಟ್ ಬಾಂಧವ್ಯ ಮತ್ತೆ ಆರಂಭವಾಗಲಿದೆಯಾ ಎಂಬ ಕುತೂಹಲ ಹೆಚ್ಚಾಗಿದೆ. ಆದರೆ ಈ ಬಗ್ಗೆ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ.
70ರ ವಿಂಡೀಸ್, 90 ಆಸೀಸ್‌ನಷ್ಟೇ ಭಾರತ ಟೆಸ್ಟ್ ತಂಡ ಬಲಿಷ್ಠ
undefined
ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಬಾಂಧವ್ಯದ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಲ್ಲಿ ಕೇಳುವುದು ಸೂಕ್ತ ಎಂದಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಸರಣಿ ಆಡಬೇಕೆಂದರೆ ಸರ್ಕಾರದ ಅನುಮೋದನೆ ಪಡೆಯಬೇಕು. ಏಕೆಂದರೆ ಅಂ.ರಾ. ಸರಣಿಗಳು ಸರ್ಕಾರದ ಒಪ್ಪಿಗೆ ಮೇರೆಗೆ ನಡೆಯಲಿವೆ. ಹೀಗಾಗಿ ಇದರ ಬಗ್ಗೆ ನನಗೆ ತಿಳಿದಿಲ್ಲ ಎಂದು ಗಂಗೂಲಿ ಹೇಳಿದ್ದಾರೆ.
ಟೀಂ ಇಂಡಿಯಾ ಎದುರಿನ ಟಿ20 ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ
2012ರಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕೊನೆಯದಾಗಿ ದ್ವಿಪಕ್ಷೀಯ ಕ್ರಿಕೆಟ್ ಸರಣಿಯಲ್ಲಿ ಭಾಗವಹಿಸಿದ್ದವು. 2 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಗೆ ಭಾರತ ಆತಿಥ್ಯ ನೀಡಿತ್ತು. ಅ.23 ರಂದು ನಡೆಯುವ ಬಿಸಿಸಿಐ ಚುನಾವಣೆಯಲ್ಲಿ ಗಂಗೂಲಿ ಅಧಿಕೃತವಾಗಿ ಅಧ್ಯಕ್ಷಗಾದಿಗೇರಲಿದ್ದಾರೆ.
2019ರ ಫೆಬ್ರವರಿ 14ರಂದು ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಎಲ್ಲ ದೇಶಗಳನ್ನು ಕ್ರಿಕೆಟ್‌ನಿಂದ ನಿಷೇಧಗೊಳಿಸಬೇಕು ಎಂದು ಅಂ.ರಾ. ಕ್ರಿಕೆಟ್ ಮಂಡಳಿ (ಐಸಿಸಿ)ಗೆ ಬಿಸಿಸಿಐ ಪತ್ರ ಬರೆದಿತ್ತು. ಇದರ ಮಧ್ಯೆ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಭಾರತ ತಂಡ ಬಹಿಷ್ಕರಿಸಬೇಕು ಎಂಬುದು ಬಲವಾಗಿ ಕೇಳಿಬಂದಿತ್ತು. ಈ ಪಂದ್ಯದಲ್ಲಿ ಪಾಕ್ ತಂಡವನ್ನು ಭಾರತ ಬಗ್ಗು ಬಡಿದಿತ್ತು.