
ಮುಂಬೈ(ಅ.23): ಭಾರತೀಯ ಕ್ರಿಕೆಟ್‌ನ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಸೌರವ್ ಗಂಗೂಲಿ, ಬುಧವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ನ 39ನೇ ಅಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸಲಿದ್ದಾರೆ. ಬುಧವಾರ ಇಲ್ಲಿ ವಾರ್ಷಿಕ ಸಾಮಾನ್ಯ ಸಭೆ ನಡೆಯಲಿದ್ದು, ವಿನೋದ್ ರಾಯ್ ನೇತೃತ್ವದ ಸುಪ್ರೀಂ ಕೋರ್ಟ್ ನೇಮಿತ ಆಡಳಿತ 33 ತಿಂಗಳ ಬಳಿಕ ಅಧಿಕಾರ ಹಸ್ತಾಂತರಿಸಲಿದೆ.
"
ಇದನ್ನೂ ಓದಿ: BJP ಸೇರ್ತಾರ ಗಂಗೂಲಿ? ಅಮಿತ್ ಶಾ ಭೇಟಿಯಾದ ನೂತನ BCCI ಅಧ್ಯಕ್ಷ!
ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ಅವಿರೋಧ ಆಯ್ಕೆಯಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಉತ್ತರಾಖಂಡದ ಮಾಹಿಮ್ ವರ್ಮಾ ಉಪಾಧ್ಯಕ್ಷ, ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಅನುರಾಗ್ ಠಾಕೂರ್‌ರ ಸಹೋದರ ಅರುಣ್ ಧುಮಾಲ್ ಖಜಾಂಚಿ, ಕೇರಳದ ಜಯೇಶ್ ಜಾಜ್‌ರ್ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಗಂಗೂಲಿ ಕೇವಲ 9 ತಿಂಗಳ ಕಾಲ ಅಧ್ಯಕ್ಷರಾಗಿರಲಿದ್ದಾರೆ.
ಇದನ್ನೂ ಓದಿ: Bigg boss ಗಂಗೂಲಿಗೆ CM ಮಮತಾ ಬ್ಯಾನರ್ಜಿ ಅಭಿನಂದನೆ!
ಕರ್ನಾಟಕ ಕ್ರಿಕೆಟ್ ಸಂಸ್ಥೆ ಮಾಜಿ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಬಿಸಿಸಿಐ ಅಧ್ಯಕ್ಷ ರೇಸ್‌ನಿಂದ ಹಿಂದೆ ಸರಿದ ಕಾರಣ, ಸೌರವ್ ಗಂಗೂಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಬಂಗಾಳ ಕ್ರಿಕೆಟ್ ಸಂಸ್ಥೆಯಲ್ಲಿ 2ನೇ ಬಾರಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಗಂಗೂಲಿ, ಇಂದು ಅದೀಕೃತವಾಗಿ ಬಿಸಿಸಿಐ ಅಧ್ಯಕ್ಷ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.