Ind vs SA: ಕೇಪ್‌ಟೌನ್ ಟೆಸ್ಟ್‌ನಲ್ಲಿ ಮುಗ್ಗರಿಸಿದ ಭಾರತ, ಟೆಸ್ಟ್ ಸರಣಿ ದಕ್ಷಿಣ ಆಫ್ರಿಕಾ ಪಾಲು..!

Suvarna News   | Asianet News
Published : Jan 14, 2022, 05:19 PM ISTUpdated : Jan 14, 2022, 05:29 PM IST
Ind vs SA: ಕೇಪ್‌ಟೌನ್ ಟೆಸ್ಟ್‌ನಲ್ಲಿ ಮುಗ್ಗರಿಸಿದ ಭಾರತ, ಟೆಸ್ಟ್ ಸರಣಿ ದಕ್ಷಿಣ ಆಫ್ರಿಕಾ ಪಾಲು..!

ಸಾರಾಂಶ

* ಕೇಪ್‌ಟೌನ್ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್‌ಗಳ ಜಯ ಸಾಧಿಸಿದ ದಕ್ಷಿಣ ಆಫ್ರಿಕಾ * 3 ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಜಯಿಸಿದ ಡೀನ್ ಎಲ್ಗರ್ ಪಡೆ * ಸತತ ಎರಡು ಟೆಸ್ಟ್ ಪಂದ್ಯದಲ್ಲಿ ಸೋಲು ಕಂಡ ಟೀಂ ಇಂಡಿಯಾ

ಕೇಪ್‌ಟೌನ್‌(ಜ.14); ಕಳಪೆ ಬ್ಯಾಟಿಂಗ್ ಹಾಗೂ ಕ್ಷೇತ್ರರಕ್ಷಣೆಗೆ ಭಾರತ ಕ್ರಿಕೆಟ್‌ ತಂಡ (Indian Cricket Team) ಕೇಪ್‌ಟೌನ್‌ ಟೆಸ್ಟ್ (Cape Town Test) ಪಂದ್ಯದಲ್ಲಿ ಬೆಲೆ ತೆತ್ತಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳ ನಡುವಿನ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವು (South Africa Cricket Team) 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಫ್ರೀಡಂ ಟ್ರೋಫಿ ಟೆಸ್ಟ್ ಸರಣಿಯು ಡೀನ್ ಎಲ್ಹರ್ (Dean Elgar) ನೇತೃತ್ವದ ದಕ್ಷಿಣ ಆಫ್ರಿಕಾ ತಂಡದ ಪಾಲಾಗಿದೆ. ಈ ಸೋಲಿನೊಂದಿಗೆ ದಕ್ಷಿಣ ಆಫ್ರಿಕಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲ್ಲುವ ಟೀಂ ಇಂಡಿಯಾ ಕನಸು ಮತ್ತೊಮ್ಮೆ ಭಗ್ನವಾಗಿದೆ.

ಇಲ್ಲಿನ ನ್ಯೂಲ್ಯಾಂಡ್ಸ್‌ ಮೈದಾನದಲ್ಲಿ ಭಾರತ ನೀಡಿದ್ದ 212 ರನ್‌ಗಳ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡವು ಮೂರನೇ ದಿನದಾಟದಂತ್ಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 101 ರನ್‌ ಬಾರಿಸಿತ್ತು. ನಾಲ್ಕನೇ ದಿನದಲ್ಲಿ ದಕ್ಷಿಣ ಆಫ್ರಿಕಾ ತಂಡವು 111 ರನ್‌ಗಳ ಅಗತ್ಯವಿತ್ತು. ದಕ್ಷಿಣ ಆಫ್ರಿಕಾ ತಂಡವು ಮೂರನೇ ವಿಕೆಟ್‌ಗೆ ರಾಸ್ಸಿ ವ್ಯಾನ್ ಡರ್ ಡುಸೇನ್ ಹಾಗೂ ಕೀಗನ್‌ ಪೀಟರ್‌ಸನ್ ಜೋಡಿ 54 ರನ್‌ಗಳ ಅಮೂಲ್ಯ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.  

ನಾಲ್ಕನೇ ದಿನದಾಟದ ಆರಂಭದಲ್ಲೇ ಜಸ್ಪ್ರೀತ್ ಬುಮ್ರಾ (Jasprit Bumrah) ಬೌಲಿಂಗ್‌ನಲ್ಲಿ ಕೀಗನ್ ಪೀಟರ್‌ಸನ್‌ ಬ್ಯಾಟ್ ಸವರಿದ ಚೆಂಡು ಸ್ಪಿಪ್‌ನಲ್ಲಿದ್ದ ಚೇತೇಶ್ವರ್ ಪೂಜಾರಗೆ ಕೈಗೆ ಸೇರಿತಾದರೂ, ಸುಲಭ ಕ್ಯಾಚನ್ನು ಕೈಚೆಲ್ಲುವ ಮೂಲಕ ನಿರಾಸೆ ಮೂಡಿಸಿದರು. ಆಗ ಪೀಟರ್‌ಸನ್ 59 ರನ್‌ ಗಳಿಸಿದ್ದರು. ಬಳಿಕ ಸಿಕ್ಕ ಜೀವಾದಾನವನ್ನು ಸರಿಯಾಗಿಯೇ ಬಳಸಿಕೊಂಡ ಕೀಗನ್ ಪೀಟರ್‌ಸನ್‌ 82 ರನ್‌ ಗಳಿಸಿ ಶಾರ್ದೂಲ್ ಠಾಕೂರ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗುವ ಮೂಲಕ ಪೆವಿಲಿಯನ್ ಸೇರಿದರು.

ತಂಡವನ್ನು ಗೆಲುವಿನ ದಡ ಸೇರಿಸಿದ ಬುವುಮಾ-ಡುಸೇನ್‌: ಕೀಗನ್ ಪೀಟರ್‌ಸನ್ ವಿಕೆಟ್ ಪತನದ ಬಳಿಕ ನಾಲ್ಕನೇ ವಿಕೆಟ್‌ಗೆ ಜತೆಯಾದ ರಾಸ್ಸಿ ವ್ಯಾನ್ ಡರ್ ಡುಸೇನ್ ಹಾಗೂ ತೆಂಬ ಬವುಮಾ ಜೋಡಿ ಮತ್ತೊಮ್ಮೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು. ಬವುಮಾ ಹಾಗೂ ಡುಸೇನ್ ಜೋಡಿ ನಾಲ್ಕನೇ ವಿಕೆಟ್‌ಗೆ ಮುರಿಯದ 57 ರನ್‌ಗಳ ಜತೆಯಾಟವಾಡಿ ಹರಿಣಗಳ ಪಡೆಗೆ ಗೆಲುವು ತಂದುಕೊಟ್ಟಿತು. ವ್ಯಾನ್ ಡರ್ ಡುಸೇನ್‌ 95 ಎಸೆತಗಳನ್ನು ಎದುರಿಸಿ ಅಜೇಯ 41 ರನ್ ಬಾರಿಸಿದರೆ, ತೆಂಬ ಬವುಮಾ 32 ರನ್‌ ಗಳಿಸಿ ಮಿಂಚಿದರು.

DRS Controversy: ಡಿಆರ್‌ಎಸ್‌ ಬಗ್ಗೆ ವಿರಾಟ್ ಕೊಹ್ಲಿ ಕೆಂಡಾಮಂಡಲ..!

ಹರಿಣಗಳ ನಾಡಲ್ಲಿ ಟೆಸ್ಟ್ ಸರಣಿ ಗೆಲ್ಲುವ ಭಾರತದ ಕನಸು ಭಗ್ನ: ಭಾರತ ತಂಡವು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಇದುವರೆಗೂ ಟೆಸ್ಟ್ ಸರಣಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಸೆಂಚೂರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿತ್ತು. ಈ ಮೂಲಕ ಹರಿಣಗಳ ನಾಡಿನಲ್ಲಿ ಟೆಸ್ಟ್ ಸರಣಿ ಗೆಲ್ಲುವ ಆಸೆ ಮೂಡಿತ್ತು. ಆದರೆ ಜೋಹಾನ್ಸ್‌ಬರ್ಗ್ ಟೆಸ್ಟ್ ಹಾಗೂ ಕೇಪ್‌ಟೌನ್ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು 7 ವಿಕೆಟ್‌ಗಳ ಅಂತರದ ಜಯ ಸಾಧಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ