SA vs NZ: ಕಿವೀಸ್ ಎದುರು ಎರಡನೇ ಟೆಸ್ಟ್ ಪಂದ್ಯ ಗೆದ್ದು, ಸರಣಿ ಸಮ ಮಾಡಿಕೊಂಡ ಹರಿಣಗಳು..!

By Suvarna NewsFirst Published Mar 1, 2022, 4:46 PM IST
Highlights

* ನ್ಯೂಜಿಲೆಂಡ್ ಎದುರಿನ ಎರಡನೇ ಟೆಸ್ಟ್ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾ

* ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ಸಮಬಲ

* ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿದ್ದ ಹರಿಣಗಳ ಪಡೆ, ಎರಡನೇ ಪಂದ್ಯದಲ್ಲಿ ಕಮ್‌ಬ್ಯಾಕ್

ಕ್ರೈಸ್ಟ್‌ಚರ್ಚ್‌(ಮಾ.01): ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಸಾಧಾರಣ ಪ್ರದರ್ಶನ ತೋರಿದ ಡೀನ್ ಎಲ್ಗರ್ (Dean Elgar) ನೇತೃತ್ವದ ದಕ್ಷಿಣ ಆಫ್ರಿಕಾ ತಂಡವು ಆತಿಥೇಯ ನ್ಯೂಜಿಲೆಂಡ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಲ್ಲಿ 198 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯು 1-1ರಲ್ಲಿ  ಸಮಬಲಗೊಂಡಿದೆ.

ಇಲ್ಲಿನ ಹೇಗ್ಲೆ ಓವಲ್ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 426 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಆತಿಥೇಯ ನ್ಯೂಜಿಲೆಂಡ್ ತಂಡವು (New Zealand Cricket Team) ಕೇವಲ 227 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಇನ್ನೂ ಒಂದು ಸೆಷನ್ ಬಾಕಿ ಇರುವಂತೆಯೇ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವು ಗೆಲುವಿನ ನಗೆ ಬೀರಿತು. ಇದೇ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಇನಿಂಗ್ಸ್ ಹಾಗೂ 276 ರನ್‌ಗಳ ಅಂತರದ ಜಯ ಸಾಧಿಸಿತ್ತು. ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು 95 ಹಾಗೂ 111 ರನ್‌ಗಳಿಗೆ ಸರ್ವಪತನ ಕಂಡಿತ್ತು

Latest Videos

ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್, ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ದಿಟ್ಟ ನಿರ್ಧಾರವನ್ನು ತೆಗೆದುಕೊಂಡರು. ಮೊದಲ ಟೆಸ್ಟ್‌ನಿಂದ ಸೋಲಿನ ಶಾಕ್‌ನಿಂದ ಹೊರಬಂದು ಎರಡನೇ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಹರಿಣಗಳ ಪಡೆಗೆ ಕ್ರಿಕೆಟ್ ಪಂಡಿತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೊಂದು ದಿಟ್ಟ ನಿರ್ಧಾರವಾಗಿತ್ತು. ನಾವೆಲ್ಲರೂ ಒಂದು ತಂಡವಾಗಿ ಆಡಿದೆವು. ಅದೃಷ್ಟವಶಾತ್ ನಮಗೆ ಒಳ್ಳೆಯ ಪ್ರತಿಫಲವೇ ಸಿಕ್ಕಿದೆ. ಒಂದು ವೇಳೆ ಈ ನಿರ್ಧಾರ ತಪ್ಪಾಗಿದ್ದರೆ, ಬಹುತೇಕ ಮಂದಿ ನನ್ನನ್ನು ಮೂರ್ಖನೆಂದು ಭಾವಿಸುತ್ತಿದ್ದರು ಎಂದು ಪಂದ್ಯ ಮುಕ್ತಾಯದ ಬಳಿಕ ದಕ್ಷಿಣ ಆಫ್ರಿಕಾ ಟೆಸ್ಟ್ ತಂಡದ ನಾಯಕ ಡೀನ್ ಎಲ್ಗರ್ ಹೇಳಿದ್ದಾರೆ.

Ind vs SL ವಿರಾಟ್ ಕೊಹ್ಲಿ 100ನೇ ಟೆಸ್ಟ್‌ಗಿಲ್ಲ ಪ್ರೇಕ್ಷಕರು; ಅಭಿಮಾನಿಗಳ ಆಕ್ರೋಶ..!

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ ತಂಡವು, ಆರಂಭಿಕ ಬ್ಯಾಟರ್ ಸರೀಲ್ ಎರ್ವೀ (Sarel Erwee) ಬಾರಿಸಿದ ಚೊಚ್ಚಲ ಟೆಸ್ಟ್ ಶತಕದ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ 364 ರನ್‌ ಬಾರಿಸಿತ್ತು. ಇದಾದ ಬಳಿಕ ಆತಿಥೇಯ ನ್ಯೂಜಿಲೆಂಡ್ ತಂಡವನ್ನು 293 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಮೊದಲ ಇನಿಂಗ್ಸ್‌ನಲ್ಲಿ ಅಮೂಲ್ಯ 71 ರನ್‌ಗಳ ಮುನ್ನಡೆ ಸಾಧಿಸಿತ್ತು. ಅನುಭವಿ ವೇಗಿ ಕಗಿಸೋ ರಬಾಡ 5 ವಿಕೆಟ್ ಪಡೆದರೆ, ಯುವ ಎಡಗೈ ವೇಗಿ ಮಾರ್ಕೊ ಯಾನ್ಸೆನ್‌ 4 ವಿಕೆಟ್ ಪಡೆದು ಮಿಂಚಿದ್ದರು.

South Africa have won the second Test against New Zealand by 198 runs and claim 12 crucial points 👏

The series ends 1-1. pic.twitter.com/4lIch3mQHj

— ICC (@ICC)

ಇನ್ನು ಎರಡನೇ ಇನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಆರಂಭಿಕ ಆಘಾತದ ಹೊರತಾಗಿಯೂ ಕೈಲ್ ವೆರಿಯೆನ್ನೆ ಬಾರಿಸಿದ ಚೊಚ್ಚಲ ಟೆಸ್ಟ್ ಶತಕದ ನೆರವಿನಿಂದ 354/9 ರನ್‌ ಬಾರಿಸಿ ಎರಡನೇ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ನಾಲ್ಕನೇ ದಿನದಾಟದಲ್ಲಿ ಎರಡನೇ ಇನಿಂಗ್ಸ್‌ ಆರಂಭಿಸಿದ ನ್ಯೂಜಿಲೆಂಡ್ ತಂಡವು 25 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಆಸೆಯನ್ನು ಕೈಬಿಟ್ಟಿತ್ತು. ನಾಲ್ಕನೇ ದಿನದಾಟದಂತ್ಯದ ವೇಳೆಗೆ ನ್ಯೂಜಿಲೆಂಡ್ ತಂಡವು 94 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು. ಇನ್ನು ಐದನೇ ದಿನದಾಟವನ್ನು ನ್ಯೂಜಿಲೆಂಡ್ ತಂಡವು ಅತ್ಯಂತ ಎಚ್ಚರಿಕೆಯಿಂದಲೇ ಆರಂಭಿಸಿತು. 5ನೇ ವಿಕೆಟ್‌ಗೆ ಡೆವೊನ್ ಕಾನ್‌ವೇ ಹಾಗೂ ಟಾಮ್ ಬ್ಲಂಡೆಲ್ 85 ರನ್‌ಗಳ ಜತೆಯಾಟ ನಿಭಾಯಿಸಿದರು. ಡೆವೊನ್‌ ಕಾನ್‌ವೇ 92 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಟಾಮ್‌ ಬ್ಲಂಡೆಲ್‌ 44 ವಿಕೆಟ್ ಪತನವಾಗುತ್ತಿದ್ದಂತೆಯೇ ದಕ್ಷಿಣ ಆಫ್ರಿಕಾ ತಂಡವು ಸೋಲಿನತ್ತ ಮುಖ ಮಾಡಿತು.
 

click me!