
ಕರಾಚಿ(ಜ.27): ಬರೋಬ್ಬರಿ 14 ವರ್ಷಗಳ ಬಳಿಕ ಪಾಕಿಸ್ತಾನ ಪ್ರವಾಸಕ್ಕೆ ತೆರಳಿರುವ ದಕ್ಷಿಣ ಆಫ್ರಿಕಾ, ಮೊದಲ ಟೆಸ್ಟ್‌ನಲ್ಲಿ ಮೊದಲ ದಿನವೇ ಮೇಲುಗೈ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್‌ನಲ್ಲಿ 220 ರನ್‌ಗಳಿಗೆ ಆಲೌಟ್ ಆಯಿತು. ದಕ್ಷಿಣ ಆಫ್ರಿಕಾ ಪರ ಆರಂಭಿಕ ಬ್ಯಾಟ್ಸ್‌ಮನ್ ಡೀನ್ ಏಲ್ಗರ್ ಅರ್ಧಶತಕ ಬಾರಿಸಿದ್ದು ಬಿಟ್ಟರೆ ಉಳಿದ್ಯಾವ ಬ್ಯಾಟ್ಸ್‌ಮನ್‌ಗಳನ್ನು ನೆಲಕಚ್ಚಿ ಆಡಲು ಪಾಕಿಸ್ತಾನದ ಬೌಲರ್‌ಗಳು ಅವಕಾಶ ನೀಡಲಿಲ್ಲ. ಆಲ್ರೌಂಡರ್‌ಗಳಾದ ಜಾರ್ಜ್ ಲಿಂಡೆ(35) ಹಾಗೂ ವೇಗಿ ಕಗಿಸೋ ರಬಾಡ(21) ಕೆಲಕಾಲ ಪಾಕ್ ಬೌಲರ್ ಎದುರು ಪ್ರತಿರೋಧ ತೋರುವ ಮೂಲಕ ತಂಡ ಗೌರವಾನ್ವಿತ ಮೊತ್ತ ಕಲೆ ಹಾಕಲು ನೆರವಾದರು.
ಟೀಂ ಇಂಡಿಯಾಗೆ ಶುರುವಾಗಿದೆ ಇಂಗ್ಲೆಂಡ್ ಸ್ಪಿನ್ನರ್ಸ್ ಟೆನ್ಷನ್..!
ಪಾಕಿಸ್ತಾನ ಪರ ಯಾಸಿರ್ ಶಾ 3 ವಿಕೆಟ್ ಪಡೆದರೆ, ಶಾಹೀನ್ ಅಫ್ರಿದಿ, ನೌಮನ್ ಅಲಿ ತಲಾ ಎರಡು ಹಾಗೂ ಹಸನ್ ಅಲಿ ಒಂದು ವಿಕೆಟ್ ಪಡೆದರು.
ಮೊದಲ ಇನ್ನಿಂಗ್ಸ್ ಆರಂಭಿಸಿದ ಪಾಕಿಸ್ತಾನ ತಂಡಕ್ಕೆ ಕಗಿಸೋ ರಬಾಡ ಆರಂಭದಲ್ಲೇ 2 ವಿಕೆಟ್ ಪಡೆದು ಶಾಕ್ ನೀಡಿದರು. ಅಂತಿಮವಾಗಿ ಪಾಕಿಸ್ತಾನ ಮೊದಲ ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 33 ರನ್ ಗಳಿಸಿತು. ಅಜರ್ ಅಲಿ(5), ಪವಾದ್ ಆಲಂ(5) ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಪಾಕಿಸ್ತಾನ ಇನ್ನೂ 187 ರನ್‌ಗಳ ಹಿನ್ನಡೆಯಲ್ಲಿದ್ದು, ದಕ್ಷಿಣ ಆಫ್ರಿಕಾಕ್ಕೆ ಇನ್ನಿಂಗ್ಸ್ ಮುನ್ನಡೆ ಬಿಟ್ಟುಕೊಡುವ ಭೀತಿಯಲ್ಲಿದೆ.
ಸ್ಕೋರ್:
ದಕ್ಷಿಣ ಆಫ್ರಿಕಾ 220
ಪಾಕಿಸ್ತಾನ 33/4
(* ಮೊದಲ ದಿನದಾಟದಂತ್ಯಕ್ಕೆ)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.