
ಜೋಹಾನ್ಸ್‌ಬರ್ಗ್(ಏ.04): ಭಾರತ ವಿರುದ್ಧ ನಡೆಯಬೇಕಿದ್ದ ಏಕದಿನ ಸರಣಿ ಕೊರೋನಾ ಸೋಂಕಿನ ಭೀತಿಯಿಂದಾಗಿ ರದ್ದಾದ ಬಳಿಕ ತವರಿಗೆ ತೆರಳಿದ ದಕ್ಷಿಣ ಆಫ್ರಿಕಾ ಕ್ರಿಕೆಟಿಗರಿಗೆ ಸೋಂಕು ತಗುಲಿಲ್ಲ ಎಂದು ದೃಢಪಟ್ಟಿದೆ.
ತವರಿಗೆ ವಾಪಸಾದ ಬಳಿಕ ಆಟಗಾರರು ಸ್ವಯಂ ದಿಗ್ಬಂಧನಕ್ಕೆ ಒಳಪಟ್ಟಿದ್ದರು. ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಆಟಗಾರರ ವದರಿಯಲ್ಲಿ ಸೋಂಕು ಪತ್ತೆಯಾಗಿಲ್ಲ ಎಂದು ತಂಡದ ವೈದ್ಯರು ತಿಳಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಇನ್ನೂ ಕೆಲ ದಿನಗಳ ಕಾಲ ಆಟಗಾರರು ಪ್ರತ್ಯೇಕವಾಗಿಯೇ ಇರಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಭಾರತ-ಸೌತ್ ಆಫ್ರಿಕಾ ಏಕದಿನ ಸರಣಿ ರದ್ದು, ಕೊರೋನಾಗೆ ಬಲಿಯಾಯ್ತು ಕ್ರಿಕೆಟ್!
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ತವರಿಗೆ ಮರಳಿದ್ದ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲು ಸಜ್ಜಾಗಿತ್ತು. ಮಾರ್ಚ್ 12 ರಂದು ಧರ್ಮಶಾಲಾ ಮೊದಲ ಪಂದ್ಯಕ್ಕೆ ಆತಿಥ್ಯ ವಹಿಸಿತ್ತು. ಆದರೆ ಮಳೆಯಿಂದಾಗಿ ಒಂದೂ ಎಸೆತ ಕಾಣದೇ ಪಂದ್ಯ ರದ್ದಾಗಿತ್ತು. ಇನ್ನು ಎರಡನೇ ಪಂದ್ಯವನ್ನಾಡಲು ಉಭಯ ತಂಡಗಳು ಲಖನೌಗೆ ತೆರಳಿದ್ದವಾದರೂ, ಕೊರೋನಾ ಭೀತಿಯಿಂದಾಗಿ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿತ್ತು.
ನಿವೃತ್ತಿಯಿಂದ ಕಮ್‌ಬ್ಯಾಕ್: ಕೊನೆಗೂ ಮೌನ ಮುರಿದ ಎಬಿಡಿ..!
ಸದ್ಯ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಕ್ಕೆ ಜೂನ್‌ವರೆಗೆ ಯಾವುದೇ ಕ್ರಿಕೆಟ್ ಟೂರ್ನಿಗಳಲ್ಲಿ ಪಾಲ್ಗೊಳ್ಳುತ್ತಿಲ್ಲ. ಪ್ರಸ್ತುತ ದಕ್ಷಿಣ ಆಫ್ರಿಕಾದಲ್ಲಿ 1,400 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು 5 ಮಂದಿ ಮೃತಪಟ್ಟಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.