
ಕೊಲಂಬೊ(ನ.22): ಚೊಚ್ಚಲ ಆವೃತ್ತಿಯ ಲಂಕಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಡೇಲ್ ಸ್ಟೇನ್ ಕ್ಯಾಂಡಿ ಟಸ್ಕರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಕ್ಯಾಂಡಿ ಟಸ್ಕರ್ಸ್ ಭಾನುವಾರ(ನ.22) ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಈ ವಿಷಯವನ್ನು ಖಚಿತ ಪಡಿಸಿದ್ದು, ಸಾರ್ವಕಾಲಿಕ ಶ್ರೇಷ್ಠ ವೇಗದ ಬೌಲರ್ ಡೇಲ್ ಸ್ಟೇನ್ ಕ್ಯಾಂಡಿ ಟಸ್ಕರ್ಸ್ ತಂಡ ಕೂಡಿಕೊಂಡಿದ್ದಾರೆ ಎಂದು ತಿಳಿಸಲು ನಮಗೆ ಸಂತೋಷವಾಗುತ್ತಿದೆ ಎಂದು ಟ್ವೀಟ್ ಮಾಡಿದೆ.
ಈ ಮೊದಲು ಜಿಂಬಾಬ್ವೆ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಬ್ರೆಂಡನ್ ಟೇಲರ್ ಕೂಡಾ ಕ್ಯಾಂಡಿ ಟಸ್ಕರ್ಸ್ ತಂಡವನ್ನು ಕೂಡಿಕೊಂಡಿದ್ದರು. ಈ ವಿಚಾರವನ್ನು ಕ್ಯಾಂಡಿ ಟಸ್ಕರ್ಸ್ ಫ್ರಾಂಚೈಸಿ ಟ್ವೀಟ್ ಮೂಲಕವೇ ಖಚಿತಪಡಿಸಿತ್ತು.
ಲಂಕಾ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೂ ಮುನ್ನವೇ ಕ್ರಿಸ್ ಗೇಲ್ ಹಾಗೂ ಲಿಯಾಮ್ ಪ್ಲಂಕೆಟ್ ಟೂರ್ನಿಯಿಂದ ಹಿಂದೆ ಸರಿದಿದ್ದು ಕ್ಯಾಂಡಿ ಟಸ್ಕರ್ಸ್ ಪಾಳಯದಲ್ಲಿ ಆತಂಕ ಮನೆ ಮಾಡುವಂತೆ ಮಾಡಿತ್ತು. ಆದರೆ ಇದೀಗ ಬ್ರೆಂಡನ್ ಟೇಲರ್ ಹಾಗೂ ಡೇಲ್ ಸ್ಟೇನ್ ಸೇರ್ಪಡೆಯಿಂದ ಕ್ಯಾಂಡಿ ಟಸ್ಕರ್ಸ್ ತಂಡ ನೆಮ್ಮದಿಯಿಂದ ನಿಟ್ಟುಸಿರು ಬಿಡುವಂತೆ ಮಾಡಿದೆ.
ಆಸೀಸ್ ಎದುರು ವಿರಾಟ್ ಕೊಹ್ಲಿ ಅನುಪಸ್ಥಿತಿ ಟೀಂ ಇಂಡಿಯಾಗೆ ದೊಡ್ಡ ಹೊಡೆತ ನೀಡಲಿದೆ..!
ನವೆಂಬರ್ 26ರಿಂದ ಲಂಕಾ ಪ್ರೀಮಿಯರ್ ಲೀಗ್ ಟೂರ್ನಿಯು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಕ್ಯಾಂಡಿ ಟಸ್ಕರ್ಸ್ ತಂಡವು ಕೊಲಂಬೊ ತಂಡವನ್ನು ಎದುರಿಸಲಿದೆ. ಪೈನಲ್ ಪಂದ್ಯ ಡಿಸೆಂಬರ್ 16ರಂದು ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.