
ಬೆಂಗಳೂರು: ಈ ಬಾರಿಯ ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಭಾರತ ತಂಡ ಹಾಗೂ ತಂಡದ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ವಿಧಾನಸಭೆಯಲ್ಲಿ ಸೋಮವಾರ ಅಭಿನಂದನೆ ಸಲ್ಲಿಸಲಾಯಿತು. ಮಧ್ಯಾಹ್ನ ಭೋಜನ ವಿರಾಮದ ಬಳಿಕ ಪ್ರಶ್ನೋತ್ತರ ಅವಧಿ ಮುಕ್ತಾಯಗೊಂಡ ನಂತರ ಸ್ಪೀಕರ್ ಯು.ಟಿ. ಖಾದರ್ ಅವರು ರಾಹುಲ್ ದ್ರಾವಿಡ್‌ಗೆ ಸದನದ ಪರವಾಗಿ ಅಭಿನಂದನೆ ಸಲ್ಲಿಸಿದರು.
ಕರ್ನಾಟಕದ ಹೆಮ್ಮೆಯ ಪುತ್ರ, ಕ್ರಿಕೆಟ್ ಗೋಡೆ ರಾಹುಲ್ ದ್ರಾವಿಡ್ ಮಾರ್ಗದರ್ಶನ ಹಾಗೂ ರೋಹಿತ್ ಶರ್ಮಾ ಸಾರಥ್ಯದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
13 ಬಾರಿ ಫೈನಲ್‌ನಲ್ಲಿ ಸೋತ ಮೊದಲಿಗ 24 ಗ್ರ್ಯಾನ್‌ಸ್ಲಾಂಗಳ ಒಡೆಯ ಜೋಕೋವಿಚ್!
ಸದ್ಯಕ್ಕೆ ಟೆಸ್ಟ್, ಏಕದಿನ ನಿವೃತ್ತಿಯಿಲ್ಲ: ರೋಹಿತ್
ಡಲ್ಲಾಸ್(ಅಮೆರಿಕ): ಟಿ20 ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿರುವ ಭಾರತೀಯ ಕ್ರಿಕೆಟಿಗ ರೋಹಿತ್ ಶರ್ಮಾ, ಟೆಸ್ಟ್ ಹಾಗೂ ಏಕದನದಿಂದ ಸದ್ಯದಲ್ಲಿ ನಿವೃತ್ತಿಯಾಗುವುದಿಲ್ಲ ಎಂದಿದ್ದಾರೆ. ಈ ಬಗ್ಗೆ ಭಾನುವಾರ ಸಮಾರಂಭವೊಂದರಲ್ಲಿ ಮಾತನಾಡಿರುವ ಅವರು, ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಇನ್ನಷ್ಟು ಕಾಲ ಮುಂದುವರಿಯಲಿದ್ದೇನೆ ಎಂದಿದ್ದಾರೆ. ಇತ್ತೀಚೆಗಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು, ರೋಹಿತ್ ನಾಯಕತ್ವದಲ್ಲೇ 2025ರ ಚಾಂಪಿಯನ್ಸ್ ಟ್ರೋಫಿ ಹಾಗೂ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದರು.
ವಡೋದರಾದಲ್ಲಿ ಹಾರ್ದಿಕ್‌ಗೆ ಅದ್ಧೂರಿ ಸ್ವಾಗತ, ಮೆರವಣಿಗೆ..! ವಿಡಿಯೋ ವೈರಲ್
ಅನುಮತಿ ನಿರಾಕರಿಸಿದ್ರೆ ಲಿಖಿತ ದಾಖಲೆ ಕೊಡಿ: ಬಿಸಿಸಿಐಗೆ ಪಿಸಿಬಿ ಆಗ್ರಹ
ಕರಾಚಿ: 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಬರಲು ಭಾರತ ಸರ್ಕಾರ ಅನುಮತಿ ನಿರಾಕರಿಸಿದರೆ ಅದಕ್ಕೆ ಲಿಖಿತ ದಾಖಲೆ ಕೊಡಬೇಕು ಎಂದು ಬಿಸಿಸಿಐಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಒತ್ತಾಯ ಮಾಡಿದ್ದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಇನ್ನೂ ಬಿಸಿಸಿಐ ಸ್ಪಷ್ಟನೆ ನೀಡಿಲ್ಲ. ಬದಲಾಗಿ ಭದ್ರತಾ ದೃಷ್ಟಿಯಿಂದ ಟೂರ್ನಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಐಸಿಸಿಗೆ ಆಗ್ರಹಿಸಿದೆ ಎಂದು ಹೇಳಲಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.