
ನವದೆಹಲಿ(ಜ.25): ಭಾರತ-ಇಂಗ್ಲೆಂಡ್ ಟಿ20 ಸರಣಿಗೆ ಕ್ರೀಡಾಂಗಣಕ್ಕೆ ಪ್ರೇಕ್ಷಕರಿಗೆ ಪ್ರವೇಶ ಕಲ್ಪಿಸಲು ಬಿಸಿಸಿಐ ಚಿಂತನೆ ನಡೆಸಿದೆ.
4 ಪಂದ್ಯಗಳ ಟೆಸ್ಟ್ ಸರಣಿ ಬಳಿಕ 5 ಪಂದ್ಯಗಳ ಟಿ20 ಸರಣಿ ಅಹಮದಾಬಾದ್‌ನ ಮೊಟೇರಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಶೇ.50ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ನೀಡುವಂತೆ ಬಿಸಿಸಿಐ ಸದ್ಯದಲ್ಲೇ ಗುಜರಾತ್ ಸರ್ಕಾರಕ್ಕೆ ಮನವಿ ಮಾಡಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.
ಫೆ.5 ರಿಂದ ಭಾರತ-ಇಂಗ್ಲೆಂಡ್ ತವರಿನ ಸರಣಿ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!
ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಕ್ರೀಡಾಂಗಣಗಳಿಗೆ ಶೇ.50ರಷ್ಟು ಪ್ರೇಕ್ಷಕರನ್ನು ಬಿಡಬಹದಾಗಿದೆ. ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಎನಿಸಿಕೊಂಡಿರುವ ಮೊಟೇರಾದಲ್ಲಿ 1.1 ಲಕ್ಷ ಆಸನಗಳಿವೆ. ಮಾ.12ರಿಂದ ಟಿ20 ಸರಣಿ ಆರಂಭಗೊಳ್ಳಲಿದೆ.
ಇಂಡೋ-ಇಂಗ್ಲೆಂಡ್ ಟೆಸ್ಟ್ ಸರಣಿ: ಪ್ರೇಕ್ಷಕರಿಗಿಲ್ಲ ಪ್ರವೇಶ..!
ಈಗಾಗಲೇ ಭಾರತ-ಇಂಗ್ಲೆಂಡ್ ನಡುವಿನ ಮೊದಲೆರಡು ಟೆಸ್ಟ್ ಪಂದ್ಯಗಳು ಖಾಲಿ ಮೈದಾನದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಖಚಿತಪಡಿಸಿದೆ. ಫೆಬ್ರವರಿ 05ರಿಂದ ಚೆನ್ನೈನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಮೇಲ್ನೋಟಕ್ಕೆ ಎರಡು ತಂಡಗಳು ಸಾಕಷ್ಟು ಬಲಿಷ್ಠವಾಗಿದ್ದು, ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.