ರವಿಚಂದ್ರನ್‌ ಅಶ್ವಿನ್ ಭಾರತ ತಂಡದ ಬೌಲಿಂಗ್‌ ಕ್ಯಾಪ್ಟನ್‌ ಎಂದ ಟೀಂ ಇಂಡಿಯಾ ಮಾಜಿ ಸ್ಪಿನ್ನರ್..!

By Suvarna NewsFirst Published Jan 3, 2021, 12:49 PM IST
Highlights

ರವಿಚಂದ್ರನ್ ಅಶ್ವಿನ್ ಭಾರತ ಬೌಲಿಂಗ್ ಕ್ಯಾಪ್ಟನ್‌ ಎಂದು ಮಾಜಿ ಸ್ಪಿನ್ನರ್ ಪ್ರಗ್ಯಾನ್ ಓಜಾ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಜ.03): ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಮುಕ್ತಾಯವಾಗಿದ್ದು, ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗೆಲ್ಲುವುದರೊಂದಿಗೆ ಸರಣಿಯಲ್ಲಿ 1-1ರ ಸಮಬಲ ಸಾಧಿಸಿವೆ. ಇದೀಗ ಜನವರಿ 07ರಿಂದ ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ಜರುಗಲಿರುವ ಮೂರನೇ ಟೆಸ್ಟ್ ಪಂದ್ಯ ಗೆಲ್ಲುವ ಲೆಕ್ಕಾಚಾರದಲ್ಲಿ ಉಭಯ ತಂಡಗಳು ಇವೆ.

ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿದ್ದ ಟೀಂ ಇಂಡಿಯಾ ಆ ಬಳಿಕ ಮೆಲ್ಬರ್ನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಶಮಿ ಅನುಪಸ್ಥಿತಿಯ ಹೊರತಾಗಿಯೂ ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿ ಆಸ್ಟ್ರೇಲಿಯಾಗೆ ತಿರುಗೇಟು ನೀಡಿತ್ತು. 

ನಾನಿನ್ನೂ ಸಂಪೂರ್ಣ ಫಿಟ್‌ ಆಗಿಲ್ಲ: ಡೇವಿಡ್ ವಾರ್ನರ್‌ ಅಚ್ಚರಿಯ ಹೇಳಿಕೆ

ಕಳೆದೆರಡು ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಬೌಲರ್‌ಗಳು ಗಮನಾರ್ಹ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಿರುವಾಗಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರಗ್ಯಾನ್‌ ಓಜಾ, ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಪ್ರಸ್ತುತ ಭಾರತ ಟೆಸ್ಟ್ ತಂಡದ ಬೌಲಿಂಗ್ ನಾಯಕ ಎಂದು ಬಣ್ಣಿಸಿದ್ದಾರೆ. ಜಗತ್ತಿನ ಯಾವುದೇ ಮೂಲೆಯಲ್ಲಿ, ಎಂತಹದ್ದೇ ವಾತಾವರಣವಿದ್ದರೂ ಅಶ್ವಿನ್ ಅದ್ಭುತ ಪ್ರದರ್ಶನ ನೀಡಿದ್ದಾರೆ ಎಂದು ಓಜಾ ತಿಳಿಸಿದ್ದಾರೆ.

ಅಶ್ವಿನ್‌ ಅವರಿಗೆ ತಾವೇನು ಮಾಡಬೇಕು ಎನ್ನುವುದರ ಸ್ಪಷ್ಟ ಅರಿವಿದೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಹಾಗೂ ರವಿಚಂದ್ರನ್ ಅಶ್ವಿನ್ ಭಾರತ ತಂಡದ ಬೌಲಿಂಗ್‌ ನೇತೃತ್ವ ವಹಿಸಿಕೊಂಡಿದ್ದಾರೆ. ಪ್ರಸ್ತುತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅಶ್ವಿನ್‌ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದಾರೆ.
 

click me!