
ಅಹಮದಾಬಾದ್(ಮಾ.11): ಲೆಗ್ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತೊಮ್ಮೆ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲಾಗಿದ್ದು, ಭಾರತ ಟಿ20 ತಂಡದಿಂದ ಹೊರಬೀಳುವುದು ಬಹುತೇಕ ಖಚಿತವಾಗಿದೆ.
2 ಕಿ.ಮೀ. ಓಟದ ಪರೀಕ್ಷೆಯಲ್ಲಿ ವರುಣ್ ಮೊದಲ ಯತ್ನದಲ್ಲಿ ಅನುತ್ತೀರ್ಣರಾಗಿದ್ದರು. ಅವರಿಗೆ ಮತ್ತೊಂದು ಅವಕಾಶ ನೀಡಲಾಗಿತ್ತು. 2ನೇ ಅವಕಾಶದಲ್ಲೂ ಪಾಸಾಗಲು ಸಾಧ್ಯವಾಗಲಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಅಲ್ಲದೇ ಯೋ-ಯೋ ಫಿಟ್ನೆಸ್ ಪರೀಕ್ಷೆಯಲ್ಲೂ ವರುಣ್ ನಿಗದಿತ ಸ್ಕೋರ್ ಗಳಿಸುವಲ್ಲಿ ವಿಫಲರಾದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇನ್ನು ಆಲ್ರೌಂಡರ್ ರಾಹುಲ್ ತೆವಾಟಿಯಾ ಸಹ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.
ಟಿ20 ಸರಣಿಗಾಗಿ ಭಾರತಕ್ಕೆ ತಂಡದ ಆಯ್ಕೆಯೇ ಸವಾಲು..!
ಇದೇ ವೇಳೆ ವೇಗಿ ಟಿ.ನಟರಾಜನ್ ಮಂಡಿ ಗಾಯಕ್ಕೆ ತುತ್ತಾಗಿದ್ದು, ಬೆಂಗಳೂರಿನ ಎನ್‌ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಅವರು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡುವುದು ಅನುಮಾನವೆನಿಸಿದೆ.
13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದ ವರುಣ್ ಚಕ್ರವರ್ತಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆಯಾಗಿದ್ದರು. ಆದರೆ ಫಿಟ್ನೆಸ್ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದರು, ಇದೀಗ ಮತ್ತದೇ ಕಾರಣಕ್ಕಾಗಿ ತಂಡದಿಂದ ಬಹುತೇಕ ಹೊರಬಿದ್ದಿದ್ದು, ಕ್ರಿಕ್‌ಬಜ್ ವರದಿಯಂತೆ ವರುಣ್ ಚಕ್ರವರ್ತಿ ಬದಲಿಗೆ ಮುಂಬೈ ಇಂಡಿಯನ್ಸ್ ಸ್ಟಾರ್ ಸ್ಪಿನ್ನರ್ ರಾಹುಲ್ ಚಹಾರ್‌ಗೆ ಬಿಸಿಸಿಐ ಬುಲಾವ್ ನೀಡಲಿದೆ ಎಂದು ವರದಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.