ಸೂರ್ಯಕುಮಾರ್ ಯಾದವ್, ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ನಾಯಕನಾಗಿ ಭಾರತ ಟಿ20 ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಆದರೆ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಗಾಯಗೊಂಡು ತವರಿಗೆ ವಾಪಸ್ಸಾಗಿದ್ದರು.
ಮುಂಬೈ(ಜ.08): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪಾಳಯದಲ್ಲಿ ಆತಂಕ ಮನೆ ಮಾಡಿದೆ. ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಗಾಯಗೊಂಡಿದ್ದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್, ಇದೀಗ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಲಭ್ಯರಾಗುವ ಕುರಿತಂತೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.
ಹೌದು, ಸೂರ್ಯಕುಮಾರ್ ಯಾದವ್, ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ನಾಯಕನಾಗಿ ಭಾರತ ಟಿ20 ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಆದರೆ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಗಾಯಗೊಂಡು ತವರಿಗೆ ವಾಪಸ್ಸಾಗಿದ್ದರು. ಇದೀಗ ತವರಿನಲ್ಲಿ ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯಿಂದಲೂ ಹೊರಬಿದ್ದಿದ್ದಾರೆ. ಹೀಗಿರುವಾಗಲೇ ಸೂರ್ಯನಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಮುಂಬೈ ಸ್ಟೈಲೀಶ್ ಕ್ರಿಕೆಟಿಗ ಇದೀಗ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಮುಂದಿನ 8-9 ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಟಿ20 ಲೀಗ್‌ಗಳು ಟೆಸ್ಟ್ ಕ್ರಿಕೆಟ್‌ಗೆ ಮಾರಕ: ಎಬಿ ಡಿವಿಲಿಯರ್ಸ್
ಜರ್ಮನಿಯಲ್ಲಿ ನಡೆಯಲಿದೆ ಶಸ್ತ್ರಚಿಕಿತ್ಸೆ:
ಬಿಸಿಸಿಐ ಮೂಲಗಳ ಪ್ರಕಾರ, ಸೂರ್ಯಕುಮಾರ್ ಯಾದವ್ ಈ ಹರ್ನಿಯಾ ಶಸ್ತ್ರಚಿಕಿತ್ಸೆಯನ್ನು ಜರ್ಮನಿಯ ತಜ್ಞ ವೈದ್ಯರ ಬಳಿ ಮಾಡಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಈ ಕುರಿತಂತೆ ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಬಿಸಿಸಿಐ ಅಧಿಕಾರಿಯೊಬ್ಬರು, "ಸೂರ್ಯಕುಮಾರ್ ಯಾದವ್‌ಗೆ ಸ್ಪೋರ್ಟ್ಸ್ ಹರ್ನಿಯಾ ಆಗಿರುವುದು ಬೆಳಕಿಗೆ ಬಂದಿದೆ. ಸದ್ಯ ಈಗ ಸೂರ್ಯ ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ(NCA)ದ್ದಾರೆ. ಅವರು ಇನ್ನು ಮುಂದಿನ ಎರಡು ಮೂರು ದಿನಗಳಲ್ಲಿ ಸರ್ಜರಿಗೆ ಒಳಗಾಗಲು ಜರ್ಮನಿಯ ಮ್ಯೂನಿಚ್‌ಗೆ ತೆರಳಲಿದ್ದಾರೆ. ಹೀಗಾಗಿ ಖಂಡಿತವಾಗಿಯೂ ಈ ಬಾರಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ಸೂರ್ಯ ಮುಂಬೈ ತಂಡದಿಂದ ಹೊರಬಿದ್ದಂತೆ ಆಗಿದೆ. ಇನ್ನು ಐಪಿಎಲ್‌ನ ಆರಂಭಿಕ ಕೆಲವು ಪಂದ್ಯಗಳಿಂದಲೂ ಸೂರ್ಯಕುಮಾರ್ ಯಾದವ್ ಹೊರಗುಳಿಯುವ ಸಾಧ್ಯತೆಯಿದೆ ಎಂದು ಹೇಳಿದ್ದಾಗಿ ವರದಿಯಾಗಿದೆ.
Ranji Trophy: ಪಂಜಾಬ್ ಎದುರು ಕರ್ನಾಟಕದ ಗೆಲುವಿಗೆ ಬೇಕು 7 ವಿಕೆಟ್!
ಸೂರ್ಯ ಮುಂದೆ ಟಿ20 ವಿಶ್ವಕಪ್ ಗುರಿ:
ಹೌದು, 2024ರ ಜೂನ್ ತಿಂಗಳಿನಲ್ಲಿ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ಬಹುನಿರೀಕ್ಷಿತ ಟಿ20 ವಿಶ್ವಕಪ್ ವಿಶ್ವಕಪ್ ಟೂರ್ನಿ ಜರುಗಲಿದ್ದು, ಆ ಟೂರ್ನಿಯ ಮೇಲೆ ಕಣ್ಣಿಟ್ಟಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸೂರ್ಯಕುಮಾರ್ ಯಾದವ್ ಅವರ ಲಭ್ಯತೆ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಆನೆ ಬಲ ತಂದು ಕೊಡಲಿದೆ.