
ಕೊಲಂಬೊ(ಮಾ.29): ಶ್ರೀಲಂಕಾದ ಸ್ಟಾರ್ ಆಲ್ರೌಂಡರ್ ತಿಸಾರ ಪೆರೇರಾ 'ಲಿಸ್ಟ್ ಎ' ಟೂರ್ನಿಯೊಂದರಲ್ಲಿ ಸತತ 6 ಎಸೆತಗಳಿಗೆ 6 ಸಿಕ್ಸರ್ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಲಂಕಾದ ಮೊದಲ ಬ್ಯಾಟ್ಸ್‌ಮನ್ ಎನ್ನುವ ಕೀರ್ತಿಗೆ ಭಾಜನರಾಗಿದ್ದಾರೆ.
ಇಲ್ಲಿನ ಪನಗೊಡ ಆರ್ಮಿ ಗ್ರೌಂಡ್‌ನಲ್ಲಿ ಶ್ರೀಲಂಕಾ ಆರ್ಮಿ ತಂಡದ ಪರ ಕಣಕ್ಕಿಳಿದಿದ್ದ ಪೆರೇರಾ ಬ್ಲೂಮ್‌ಫೀಲ್ಡ್ ಕ್ರಿಕೆಟ್ ಅಂಡ್ ಅಥ್ಲೆಟಿಕ್ ಕ್ಲಬ್ ವಿರುದ್ದ ಅಕ್ಷರಶಃ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಬ್ಲೂಮ್‌ಫೀಲ್ಡ್ ಕ್ರಿಕೆಟ್ ಅಂಡ್ ಅಥ್ಲೆಟಿಕ್ ಕ್ಲಬ್ ವಿರುದ್ದ ಒಂದೇ ಓವರ್‌ನಲ್ಲಿ ಸತತ 6 ಸಿಕ್ಸರ್ ಚಚ್ಚುವ ಯುವರಾಜ್ ಸಿಂಗ್, ಹರ್ಷೆಲ್ ಗಿಬ್ಸ್ ಅವರಂತಹ ದಿಗ್ಗಜ ಕ್ರಿಕೆಟಿಗರ ಸಾಲಿಗೆ ಸೇರ್ಪಡೆಯಾಗಿದ್ದಾರೆ.
ನಾನು 5ನೇ ಸಿಕ್ಸ್ ಬಾರಿಸಬೇಕೆಂದುಕೊಂಡಿದ್ದೆ, ಅದರೆ..? ಯುವಿ ಬಿಚ್ಚಿಟ್ಟ ಸೀಕ್ರೇಟ್ ಇದು..!
ತಿಸಾರ ಪೆರೇರಾ ಕೇವಲ 13 ಎಸೆತಗಳಲ್ಲಿ 52 ರನ್ ಸಿಡಿಸುವ ಮೂಲಕ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಎರಡನೇ ಅತಿವೇಗದ ಅರ್ಧಶತಕ ಬಾರಿಸಿದ ಕೀರ್ತಿಗೂ ಎಡಗೈ ಬ್ಯಾಟ್ಸ್‌ಮನ್ ಭಾಜನರಾಗಿದ್ದಾರೆ. ತಿಸಾರ ಈ ಇನಿಂಗ್ಸ್‌ನಲ್ಲಿ 8 ಮನಮೋಹಕ ಸಿಕ್ಸರ್‌ಗಳು ಸೇರಿದ್ದವು. 50 ಓವರ್‌ಗಳ ಏಕದಿನ ಪಂದ್ಯವನ್ನು ಮಳೆಯಿಂದಾಗಿ 41 ಓವರ್‌ಗೆ ಸೀಮಿತಗೊಳಿಸಲಾಗಿತ್ತು. ಪೆರೆರಾ ಕ್ರೀಸ್‌ಗಿಳಿದಾಗ ಕೇವಲ 20 ಎಸೆತಗಳು ಮಾತ್ರ ಬಾಕಿ ಇದ್ದವು. ಆದರೆ ಪೆರೇರಾ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಶ್ರೀಲಂಕಾ ಆರ್ಮಿ ಕ್ಲಬ್ 318 ರನ್‌ಗಳ ಬೃಹತ್ ಮೊತ್ತ ಕಲೆಹಾಕಲು ನೆರವಾದರು.
ಪೆರೇರಾ ಬಾರಿಸಿದ ಸಿಕ್ಸರ್ ವಿಡಿಯೋ ಇಲ್ಲಿದೆ ನೋಡಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.