ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಘೋಷಿಸಿದ ಉಪುಲ್ ತರಂಗಾ..!

Suvarna News   | Asianet News
Published : Feb 23, 2021, 06:37 PM IST
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಘೋಷಿಸಿದ ಉಪುಲ್ ತರಂಗಾ..!

ಸಾರಾಂಶ

ಶ್ರೀಲಂಕಾ ಆರಂಭಿಕ ಬ್ಯಾಟ್ಸ್‌ಮನ್‌ ಉಪುಲ್‌ ತರಂಗಾ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ದಿಢೀರ್ ಗುಡ್‌ಬೈ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಕೊಲಂಬೊ(ಫೆ.23): ಶ್ರೀಲಂಕಾದ ಸ್ಫೋಟಕ ಎಡಗೈ ಬ್ಯಾಟ್ಸ್‌ಮನ್‌ ಉಪುಲ್‌ ತರಂಗಾ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ದಿಢೀರ್ ಗುಡ್‌ಬೈ ಹೇಳಿದ್ದಾರೆ. ಶ್ರೀಲಂಕಾ ಪರ ತರಂಗಾ 31 ಟೆಸ್ಟ್‌, 235 ಏಕದಿನ ಹಾಗೂ 26 ಟಿ20 ಪಂದ್ಯಗಳನ್ನಾಡಿದ್ದರು.

ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ 36 ವರ್ಷದ ತರಂಗಾ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಎಲ್ಲಾ ಒಳ್ಳೆಯದಕ್ಕೂ ಒಂದು ಕೊನೆ ಇರಲೇಬೇಕು ಎನ್ನುವ ಸುಂದರ ಸಾಲಿನೊಂದಿಗೆ ಲಂಕಾ ಮಾಜಿ ನಾಯಕ ತಮ್ಮ ನಿವೃತ್ತಿ ನಿರ್ಧಾರವನ್ನು ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀಲಂಕಾ ಕ್ರಿಕೆಟ್‌ ಮಂಡಳಿ, ಅಭಿಮಾನಿಗಳಿಗೆ, ಸ್ನೇಹಿತರಿಗೆ, ಕುಟುಂಬಸ್ಥರಿಗೆ ಹಾಗೂ 15 ವರ್ಷಗಳ ಕಾಲ ಜತೆಗಿದ್ದ ಸಹ ಆಟಗಾರರೆಲ್ಲರಿಗೂ ತರಂಗಾ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

My Dear Friends, As the good old saying goes "All good things must come to an end", I believe it is time for me to bid...

Posted by Upul Tharanga on Tuesday, February 23, 2021
ಎಡಗೈ ಬ್ಯಾಟ್ಸ್‌ಮನ್ ಉಪುಲ್ ತರಂಗಾ ಆಗಸ್ಟ್‌ 2, 2005ರಲ್ಲಿ ವೆಸ್ಟ್ ಇಂಡೀಸ್‌ ವಿರುದ್ದ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದಾದ ಬಳಿಕ ಭಾರತ ವಿರುದ್ದ ಅಹಮದಾಬಾದ್‌ನಲ್ಲಿ ತರಂಗಾ ಮೊದಲ ಟೆಸ್ಟ್ ಪಂದ್ಯವನ್ನಾಡಿದ್ದರು. ಇದಾದ ಬಳಿಕ 2006ರಲ್ಲಿ ಇಂಗ್ಲೆಂಡ್‌ ವಿರುದ್ದ ನಡೆದ ಚೊಚ್ಚಲ ಟಿ20 ಪಂದ್ಯದಲ್ಲೂ ತರಂಗಾ ಲಂಕಾ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಕಣಕ್ಕಿಳಿದಿದ್ದರು.
 
ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಫಾಫ್‌ ಡುಪ್ಲೆಸಿಸ್‌..!

ಮೂರು ಮಾದರಿಯ ಕ್ರಿಕೆಟ್‌ನಿಂದ ಉಪುಲ್‌ ತರಂಗಾ 9 ಸಾವಿರಕ್ಕೂ ಅಧಿಕ ರನ್‌ ಬಾರಿಸಿದ್ದಾರೆ. 2019ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಉಪುಲ್ ತರಂಗಾ ಕೊನೆಯ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದರು.  ಉಪುಲ್ ತರಂಗಾ 20 ಏಕದಿನ ಪಂದ್ಯಗಳಲ್ಲಿ ಲಂಕಾ ತಂಡವನ್ನು ಮುನ್ನಡೆಸಿದ್ದರು. ಇನ್ನು ಆರು ಟಿ20 ಪಂದ್ಯಗಳಲ್ಲಿ ತರಂಗಾ ದ್ವೀಪರಾಷ್ಟ್ರವನ್ನು ಮುನ್ನಡೆಸಿದ್ದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್