2ನೇ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ ಮೇಲುಗೈ

Suvarna News   | Asianet News
Published : May 02, 2021, 08:59 AM IST
2ನೇ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ ಮೇಲುಗೈ

ಸಾರಾಂಶ

ಬಾಂಗ್ಲಾದೇಶ ವಿರುದ್ದದ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲೂ ಶ್ರೀಲಂಕಾ ತನ್ನ ಬಿಗಿಹಿಡಿತವನ್ನು ಮುಂದುವರೆಸಿದ್ದು, ಒಟ್ಟಾರೆ 259 ರನ್‌ಗಳ ಮುನ್ನಡೆ ಸಾಧಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಕ್ಯಾಂಡಿ(ಮೇ.02): ಬಾಂಗ್ಲಾದೇಶ ವಿರುದ್ಧ 2ನೇ ಟೆಸ್ಟ್‌ನಲ್ಲಿ ಶ್ರೀಲಂಕಾ ಮೇಲುಗೈ ಸಾಧಿಸಿದೆ. ಮೂರನೇ ದಿನದಾಟದ ಅಂತ್ಯದ ವೇಳೆಗೆ ಲಂಕಾ ಹಿಡಿತದಲ್ಲಿ ಬಾಂಗ್ಲಾದೇಶ ತಂಡ ಸಿಲುಕಿಕೊಂಡಿದೆ.

ಮೊದಲ ಇನ್ನಿಂಗ್ಸಲ್ಲಿ 7 ವಿಕೆಟ್‌ಗೆ 493 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡ ಲಂಕಾ, ಮೊದಲ ಇನ್ನಿಂಗ್ಸಲ್ಲಿ ಬಾಂಗ್ಲಾವನ್ನು 251 ರನ್‌ಗೆ ಆಲೌಟ್‌ ಮಾಡಿತು. ಪ್ರವೀಣ್‌ ಜಯವಿಕ್ರಮ 6 ವಿಕೆಟ್‌ ಕಬಳಿಸುವ ಮೂಲಕ ಬಾಂಗ್ಲಾದೇಶ ಕುಸಿತಕ್ಕೆ ಕಾರಣರಾದರು. ಬಾಂಗ್ಲಾದೇಶ ಪರ ತಮೀಮ್ ಇಕ್ಬಾಲ್‌ 92 ರನ್‌ ಬಾರಿಸಿ ಕೇವಲ 8 ರನ್ ಅಂತರದಲ್ಲಿ ಶತಕ ವಂಚಿತರಾದರು.  ಇನ್ನು ಮೊಮಿನುಲ್ ಹಕ್‌(49) ಹಾಗೂ ಮುಷ್ಪಿಕುರ್ ರಹೀಮ್(40) ರನ್ ಬಾರಿಸಿದ್ದು ಬಿಟ್ಟರೆ ಉಳಿದ್ಯಾವ ಬಾಂಗ್ಲಾ ಬ್ಯಾಟ್ಸ್‌ಗಳು ಲಂಕಾ ಬೌಲರ್ ಎದುರು ನೆಲಕಚ್ಚಿ ಆಡುವ ಪ್ರಯತ್ನ ಮಾಡಲಿಲ್ಲ.

2ನೇ ಟೆಸ್ಟ್‌: ಬಾಂಗ್ಲಾದೇಶ ವಿರುದ್ಧ ಲಂಕಾ ದೊಡ್ಡ ಮೊತ್ತ

ಇನ್ನು 2ನೇ ಇನ್ನಿಂಗ್ಸ್‌ ಆರಂಭಿಸಿರುವ ಲಂಕಾ ಆರಂಭಿಕ ಆಘಾತ ಅನುಭವಿಸಿದೆ. ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಬಾರಿಸಿದ್ದ ಲಹಿರು ತಿರುಮನ್ನೆ ಹಾಗೂ ಒಶಾಡ ಫರ್ನಾಂಡೋ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದಾರೆ. 3ನೇ ದಿನದಂತ್ಯಕ್ಕೆ ಲಂಕಾ 2 ವಿಕೆಟ್‌ಗೆ 17 ರನ್‌ ಗಳಿಸಿದ್ದು, ಒಟ್ಟು 259 ರನ್‌ ಮುನ್ನಡೆ ಪಡೆದಿದೆ.

ಸಂಕ್ಷಿಪ್ತ ಸ್ಕೋರ್:
ಶ್ರೀಲಂಕಾ: 493/7 ಡಿ & 17/2
ಬಾಂಗ್ಲಾದೇಶ: 251/10
(* ಮೂರನೇ ದಿನದಾಟದಂತ್ಯದ ವೇಳೆಗೆ)
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ