
ಟೀಂ ಇಂಡಿಯಾ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ರಾಜಕೀಯಕ್ಕೆ (mohammed shami enter politics) ಧುಮುಕಲಿದ್ದಾರೆ. ಇವತ್ತು ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದರು. ಬೆನ್ನಲ್ಲೇ ಅವರು ಬಿಜೆಪಿ ಸೇರುವ ಬಗ್ಗೆ ಊಹಾಪೋಹಗಳು ಎದ್ದಿವೆ. ಇನ್ನು ಶಮಿ ಅವರು ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ.
ಟೀಂ ಇಂಡಿಯಾ ವೇಗಿ ತುಂಬಾ ದಿನಗಳಿಂದ ತಂಡದಿಂದ ಹೊರಗಿದ್ದಾರೆ. ಕೊನೆಯ ಬಾರಿಗೆ ಭಾರತ ಪರ ಏಕದಿನ ಪಂದ್ಯವನ್ನು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನದ ಹೊರತಾಗಿಯೂ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಫೋಟೋಗಳನ್ನ ನೋಡಿದ ಫ್ಯಾನ್ಸ್, ಶಮಿ ರಾಜಕೀಯಕ್ಕೆ ಎಂಟ್ರಿ ನೀಡುತ್ತಿದ್ದಾರೆ ಎಂದು ಮಾತನ್ನಾಡಿಕೊಳ್ಳುತ್ತಿದ್ದಾರೆ.
ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಭೇಟಿ ತುಂಬಾನೇ ಮಹತ್ವ ಪಡೆದುಕೊಂಡಿದೆ. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಕುನ್ವರ್ ಬಾಸಿತ್ ಅಲಿ ಸಮ್ಮುಖದಲ್ಲಿ ಈ ಭೇಟಿ ನಡೆದಿದೆ. ಅಲ್ಪಸಂಖ್ಯಾತ ಮೋರ್ಚಾದಲ್ಲಿ ಶಮಿಗೆ ಪ್ರಮುಖ ಜವಾಬ್ದಾರಿ ನೀಡಬಹುದು ಎಂದು ಚರ್ಚೆ ಆಗ್ತಿದೆ.
ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯಲಿದೆ. ಪರಿಣಾಮ ಮೊಹಮ್ಮದ್ ಶಮಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಊಹಾಪೋಹಗಳಿವೆ. ಅವರನ್ನು ಬಿಜೆಪಿ ಟಿಕೆಟ್‌ನಲ್ಲಿ ಅಮ್ರೋಹಾದಿಂದ ಕಣಕ್ಕಿಳಿಸಬಹುದು. ಮೊಹಮ್ಮದ್ ಶಮಿ ಮೂಲತಃ ಅಮ್ರೋಹಾದವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡುವ ಮೊದಲು, ಮೊಹಮ್ಮದ್ ಶಮಿ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜಯಂತ್ ಚೌಧರಿ ಅವರನ್ನು ಭೇಟಿ ಮಾಡಿದ್ದರು.
ಕ್ರಿಕೆಟ್ ವೃತ್ತಿಜೀವನ ಅದ್ಭುತ
ಶಮಿ ಕ್ರಿಕೆಟ್ ವೃತ್ತಿಜೀವನ ತುಂಬಾ ರೋಚಕವಾಗಿದೆ. ಭಾರತ ಪರ 64 ಟೆಸ್ಟ್, 108 ಏಕದಿನ ಮತ್ತು 25 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಶಮಿ ಟೆಸ್ಟ್‌ನಲ್ಲಿ 229 ವಿಕೆಟ್‌ಗಳು ಮತ್ತು ಏಕದಿನ ಪಂದ್ಯಗಳಲ್ಲಿ 206 ವಿಕೆಟ್‌ಗಳನ್ನು ಪಡೆದಿದ್ದಾರೆ. ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 27 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು 103 ಪ್ರಥಮ ದರ್ಜೆ ಪಂದ್ಯಗಳಲ್ಲಿ 398 ವಿಕೆಟ್‌ಗಳನ್ನು ಹೊಂದಿದ್ದಾರೆ. ಅವರು 149 ಲಿಸ್ಟ್ ಎ ಪಂದ್ಯಗಳಲ್ಲಿ 283 ವಿಕೆಟ್‌ಗಳನ್ನು ಪಡೆದಿದ್ದಾರೆ. ಶಮಿ ಐಪಿಎಲ್‌ನಲ್ಲಿ ಆರು ತಂಡಗಳ ಭಾಗವಾಗಿದ್ದಾರೆ. ಅವರು 132 ಐಪಿಎಲ್ ಪಂದ್ಯಗಳಲ್ಲಿ 145 ವಿಕೆಟ್‌ಗಳನ್ನು ಹೊಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.