ಮುಂಬರುವ ಐಸಿಸಿ ಟಿ20 ವಿಶ್ವಕಪ್ ಬಳಿಕ ರೋಹಿತ್ ಶರ್ಮಾ, ಬಹುತೇಕ ಟಿ20 ನಾಯಕತ್ವದಿಂದ ಕೆಳಗಿಳಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇನ್ನು ಮುಂದಿನ ವರ್ಷದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಬಳಿಕ ದೀರ್ಘ ಮಾದರಿಯ ಕ್ರಿಕೆಟ್‌ಗೂ ಹಿಟ್‌ಮ್ಯಾನ್ ವಿದಾಯ ಘೋಷಿಸುವ ಸಾಧ್ಯತೆಯಿದೆ.
ಬೆಂಗಳೂರು(ಏ.21): ಸದ್ಯ ರೋಹಿತ್ ಶರ್ಮಾ, ಮೂರು ಮಾದರಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್ ಶರ್ಮಾ ಬಳಿಕ ಭಾರತದ ಭವಿಷ್ಯದ ನಾಯಕ ಯಾರು ಎನ್ನುವ ಚರ್ಚೆ ಆರಂಭವಾಗಿದೆ. ಇದೀಗ ಟೀಂ ಇಂಡಿಯಾ ಮಾಜಿ ಆಲ್ರೌಂಡರ್ ಸುರೇಶ್ ರೈನಾ ಈ ಕುರಿತಾದ ಪ್ರಶ್ನೆಗೆ ಇಂಟ್ರೆಸ್ಟಿಂಗ್ ಉತ್ತರ ನೀಡಿದ್ದಾರೆ.
ಮುಂಬರುವ ಐಸಿಸಿ ಟಿ20 ವಿಶ್ವಕಪ್ ಬಳಿಕ ರೋಹಿತ್ ಶರ್ಮಾ, ಬಹುತೇಕ ಟಿ20 ನಾಯಕತ್ವದಿಂದ ಕೆಳಗಿಳಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇನ್ನು ಮುಂದಿನ ವರ್ಷದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಬಳಿಕ ದೀರ್ಘ ಮಾದರಿಯ ಕ್ರಿಕೆಟ್‌ಗೂ ಹಿಟ್‌ಮ್ಯಾನ್ ವಿದಾಯ ಘೋಷಿಸುವ ಸಾಧ್ಯತೆಯಿದೆ. ಈಗಾಗಲೇ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ನಾಯಕ ಪಟ್ಟ ಕಟ್ಟಲಾಗಿದೆ.
ಇಂದು ಗ್ರೀನ್ ಜೆರ್ಸಿಯಲ್ಲಿ RCB ಕಣಕ್ಕೆ ..! ಬೆಂಗಳೂರು ತಂಡಕ್ಕೆ ಹಸಿರು ಬಣ್ಣ ವರನಾ..? ಶಾಪನಾ..?
ಇನ್ನು ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ನಾಯಕತ್ವ ಪಟ್ಟಕಟ್ಟಿದರೂ, ಪಾಂಡ್ಯ ನೇತೃತ್ವದ ಮುಂಬೈ ತಂಡವು ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದೆ. ಮುಂಬೈ ಇಂಡಿಯನ್ಸ್ ತಂಡವು ತಾನಾಡಿದ ಮೊದಲ 7 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇನ್ನು ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ ಹಾಗೂ ಜಸ್ಪ್ರೀತ್ ಬುಮ್ರಾ ಭಾರತ ತಂಡದ ನಾಯಕರ ರೇಸ್‌ನಲ್ಲಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲಿ ಸುರೇಶ್ ರೈನಾ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರೋಹಿತ್ ಶರ್ಮಾ ಬಳಿಕ ಶುಭ್‌ಮನ್ ಗಿಲ್ ಭಾರತದ ಭವಿಷ್ಯದ ನಾಯಕರಾಗಲಿದ್ದಾರೆ ಎಂದು ಸುರೇಶ್ ರೈನಾ ಹೇಳಿದ್ದಾರೆ. "ನನ್ನ ಪ್ರಕಾರ ಹೇಳಬೇಕೆಂದರೆ, ರೋಹಿತ್ ಶರ್ಮಾ ಬಳಿಕ ಶುಭ್‌ಮನ್ ಗಿಲ್ ಭಾರತದ ನಾಯಕರಾಗಿ ನೇಮಕವಾಗಬಲ್ಲರು" ಎಂದು ಹೇಳಿದ್ದಾರೆ.
ICC T20 World Cup: ಭಾರತ ಕ್ರಿಕೆಟ್ ತಂಡದ ಆಯ್ಕೆಗೆ ಕ್ಷಣಗಣನೆ..! ಯಾರಿಗೆ ಸಿಗುತ್ತೆ ಸ್ಥಾನ?
ಸದ್ಯ ಶುಭ್‌ಮನ್ ಗಿಲ್, ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಮೂಲಕ 2024ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಗಿಲ್ ಅತಿ ಕಿರಿಯ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. ಶುಭ್‌ಮನ್ ಗಿಲ್ ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 7 ಪಂದ್ಯಗಳನ್ನಾಡಿ 43.83ರ ಸರಾಸರಿಯಲ್ಲಿ 263 ರನ್ ಸಿಡಿಸಿದ್ದಾರೆ.