
ನವದೆಹಲಿ(ಆ.11): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವದ ಅತ್ಯಂತ ಜನಪ್ರಿಯ ಕ್ರಿಕೆಟಿಗ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಕೇವಲ ಬಾಯಿ ಮಾತಿನಲ್ಲಿ ಮಾತ್ರವಲ್ಲ ಸಮೀಕ್ಷೆಗಳಲ್ಲೂ ಸಾಬೀತಾಗಿದೆ.
‘ಸೆಮ್‌ರಶ್’ ಎನ್ನುವ ಸಂಸ್ಥೆಯೊಂದು ನಡೆಸಿರುವ ಸಮೀಕ್ಷೆ ಪ್ರಕಾರ, ಅಭಿಮಾನಿಗಳು ಈ ವರ್ಷ ಜನವರಿಯಿಂದ ಜೂನ್‌ವರೆಗೂ ಗೂಗಲ್ ಸರ್ಚ್‌ನಲ್ಲಿ ಪ್ರತಿ ತಿಂಗಳು ಸರಾಸರಿ 16.2 ಲಕ್ಷ ಬಾರಿ ಕೊಹ್ಲಿ ಹೆಸರಲ್ಲಿ ಹುಡುಕಾಟ ನಡೆಸಿದ್ದಾರೆ. ರೋಹಿತ್ ಶರ್ಮಾ (ಸರಾಸರಿ 9.7 ಲಕ್ಷ), ಎಂ.ಎಸ್.ಧೋನಿ (ಸರಾಸರಿ 9.4 ಲಕ್ಷ) ಕ್ರಮವಾಗಿ 2 ಹಾಗೂ 3ನೇ ಸ್ಥಾನ ಪಡೆದಿದ್ದಾರೆ.
ಇದೇ ಅವಧಿಯಲ್ಲಿ ಭಾರತ ಕ್ರಿಕೆಟ್ ತಂಡದ ಹೆಸರಲ್ಲಿ ಪ್ರತಿ ತಿಂಗಳು ಸರಾಸರಿ 2.4 ಲಕ್ಷ ಬಾರಿ ಹುಡುಕಾಟ ನಡೆಸಲಾಗಿದ್ದು, ವಿಶ್ವದ ಅತ್ಯಂತ ಜನಪ್ರಿಯ ಕ್ರಿಕೆಟ್ ತಂಡವಾಗಿ ಟೀಂ ಇಂಡಿಯಾ ಹೊರಹೊಮ್ಮಿದೆ. ಇನ್ನು ಆನಂತರದ ತಂಡಗಳ ಪೈಕಿ ಇಂಗ್ಲೆಂಡ್, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ನ್ಯೂಜಿಲೆಂಡ್, ಶ್ರೀಲಂಕಾ, ಐರ್ಲೆಂಡ್, ಆಫ್ಘನಿಸ್ತಾನ ಹಾಗೂ ಜಿಂಬಾಬ್ವೆ ತಂಡಗಳು ಸ್ಥಾನ ಪಡೆದಿವೆ.
ಟೀಂ ಇಂಡಿಯಾ ಕಿಟ್ ಪ್ರಾಯೋಜಕತ್ವಕ್ಕೆ ಪೂಮಾ-ಆ್ಯಡಿಡಾಸ್ ಪೈಪೋಟಿ..?
ಇನ್ನು ಕ್ರಿಕೆಟ್ ಅಭಿಮಾನಿಗಳು ಮಹಿಳಾ ಕ್ರಿಕೆಟ್ ಆಟಗಾರ್ತಿಯರ ಬಗ್ಗೆಯೂ ಹುಡುಕಾಟ ನಡೆಸಿದ್ದಾರೆ. ಆದರೆ ಟಾಪ್ 10 ಪಟ್ಟಿಯೊಳಗೆ ಸ್ಥಾನ ಪಡೆಯಲು ಯಾವುದೇ ಮಹಿಳಾ ಕ್ರಿಕೆಟ್ ಆಟಗಾರ್ತಿಗೆ ಸಾಧ್ಯವಾಗಿಲ್ಲ. ಸ್ಮೃತಿ ಮಂಧನಾ ಹಾಗೂ ಏಲಿಸಾ ಪೆರ್ರಿ ಕ್ರಮವಾಗಿ 12& 20ನೇ ಸ್ಥಾನ ಪಡೆದಿದ್ದಾರೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.