T20 World Cup ಟೂರ್ನಿಯಲ್ಲಿ ಟೀಂ ಇಂಡಿಯಾದ ಈ ಆಟಗಾರ ಅಪಾಯಕಾರಿಯಾಗಲ್ಲ ಎಂದ ಆಸೀಸ್ ಕೋಚ್‌

By Naveen Kodase  |  First Published Sep 26, 2022, 4:09 PM IST

ಆಸ್ಟ್ರೇಲಿಯಾ ಎದುರು ಟಿ20 ಸರಣಿ ಗೆದ್ದು ಬೀಗಿದ ರೋಹಿತ್ ಶರ್ಮಾ ಪಡೆ
ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್ ಅಪಾಯಕಾರಿಯಾಗಬಲ್ಲರು ಎಂದ ಆಸೀಸ್ ಕೋಚ್


ಹೈದರಾಬಾದ್‌(ಸೆ.26): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸೂರ್ಯಕುಮಾರ್ ಯಾದವ್ ಬಗ್ಗೆ ಎಚ್ಚರಿಕೆಯಿಂದ ಇರುವ ಅಗತ್ಯವಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಹೆಡ್ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್‌ ಅಭಿಪ್ರಾಯಪಟ್ಟಿದ್ದಾರೆ. ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ಅಪಾಯಕಾರಿ ಬ್ಯಾಟರ್ ಆಗಬಲ್ಲರು ಎಂದು ಆಂಡ್ರ್ಯೂ ಮೆಕ್‌ಡೊನಾಲ್ಡ್‌ ಅಭಿಪ್ರಾಯ ಪಟ್ಟಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು, ಟೀಂ ಇಂಡಿಯಾಗೆ 187 ರನ್‌ಗಳ ಸವಾಲಿನ ಗುರಿ ನೀಡಿತ್ತು. ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಆರಂಭದಲ್ಲೇ ಕೆ ಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತಾದರೂ ಮೂರನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ 104 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವನ್ನು ನಿಭಾಯಿಸಿದರು. 

Tap to resize

Latest Videos

undefined

ಸೂರ್ಯಕುಮಾರ್ ಯಾದವ್ ಇಂದು ಅತ್ಯುದ್ಭುತ ಆಟವನ್ನು ಪ್ರದರ್ಶಿಸಿದರು. ಅವರು ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಪಾಯಕಾರಿಯಾಗಬಲ್ಲರು. ಅವರು ತಾವೇನು ಮಾಡಬಲ್ಲೆ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಮಾಡಿದರು ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಹೆಡ್‌ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್‌ ಅಭಿಪ್ರಾಯಪಟ್ಟಿದ್ದಾರೆ.

Ind vs Aus 'ಯಾವ ಔಷಧಿಯನ್ನಾದರೂ ಕೊಡಿ, ನಾನು ಫೈನಲ್‌ ಆಡಬೇಕು ಅಷ್ಟೇ' ಎಂದಿದ್ದ ಸೂರ್ಯಕುಮಾರ್ ಯಾದವ್..!

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ರವೀಂದ್ರ ಜಡೇಜಾ ಹೊರಬಿದ್ದಾಗ, ಎಲ್ಲರೂ ಟೀಂ ಇಂಡಿಯಾ ಕೊಂಚ ದುರ್ಬಲವಾಗಿದೆ ಎಂದು ಭಾವಿಸಿದ್ದರು. ಆದರೆ ಭಾರತ ಕ್ರಿಕೆಟ್‌ ತಂಡವು ಅಕ್ಷರ್ ಪಟೇಲ್ ಅವರನ್ನು ಕಣಕ್ಕಿಳಿಸುವ ಮೂಲಕ ಪರ್ಯಾಯ ಆಯ್ಕೆಯನ್ನು ಹುಡುಕಿಕೊಂಡಿದೆ. ಈ ಸರಣಿಯಲ್ಲಿ ಅಕ್ಷರ್ ಪಟೇಲ್ ಅತ್ಯದ್ಭುತ ಪ್ರದರ್ಶನವನ್ನು ತೋರಿದರು ಎಂದು ಮೂರನೇ ಟಿ20 ಪಂದ್ಯ ಮುಕ್ತಾಯದ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇದೇ ವೇಳೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಬೌಲರ್‌ಗಳ ವೈಫಲ್ಯದ ಬಗ್ಗೆ ಮನಬಿಚ್ಚಿ ಮಾತನಾಡಿದ್ದು, ಟೀಂ ಇಂಡಿಯಾ ಬ್ಯಾಟರ್‌ಗಳ ಕೌಶಲ್ಯದ ಎದುರು ನಮ್ಮ ಬೌಲರ್‌ಗಳು ಕೊಂಚ ಒತ್ತಡಕ್ಕೆ ಒಳಗಾದರು ಎನ್ನುವುದನ್ನು ಆಂಡ್ರ್ಯೂ ಮೆಕ್‌ಡೊನಾಲ್ಡ್‌ ಒಪ್ಪಿಕೊಂಡಿದ್ದಾರೆ.

ಈ ಬಗ್ಗೆ ನಮ್ಮ ತಂಡದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ. ಡೆತ್ ಓವರ್‌ಗಳಲ್ಲಿ ನಮ್ಮ ಬೌಲರ್‌ಗಳ ಪ್ರದರ್ಶನವನ್ನು ಮತ್ತಷ್ಟು ಉತ್ತಮಪಡಿಸಿಕೊಳ್ಳಬಹುದೇ ಎನ್ನುವ ಬಗ್ಗೆ ಚರ್ಚೆ ನಡೆಸಿದ್ದೇವೆ. ತಮ್ಮ ಯೋಜನೆಗಳನ್ನು ಮೈದಾನದಲ್ಲಿ ಸರಿಯಾಗಿ ಅನುಷ್ಟಾನಗೊಳಿಸಲು ಪ್ರಯತ್ನಿಸಲಾಗುತ್ತದೆ, ಆದರೆ ಹಾರ್ದಿಕ್ ಪಾಂಡ್ಯ ಅವರಂತಹ ಬ್ಯಾಟರ್‌ಗಳ ಕೈ ಮೇಲಾಗುತ್ತದೆ ಎಂದು ಮೆಕ್‌ಡೊನಾಲ್ಡ್ ಹೇಳಿದ್ದಾರೆ.

ಇನ್ನು ಡೇವಿಡ್ ವಾರ್ನರ್‌ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಯುವ ಚಾಲೆಂಜ್ ಸ್ವೀಕರಿಸಿ ಯಶಸ್ವಿಯಾದ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಬಗ್ಗೆ ಕೋಚ್ ಮೆಕ್‌ಡೊನಾಲ್ಡ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಾರತ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಕ್ಯಾಮರೋನ್ ಗ್ರೀನ್ ಎರಡು ಅರ್ಧಶತಕ ಸಹಿತ 118 ರನ್ ಸಿಡಿಸಿ ಗಮನ ಸೆಳೆದಿದ್ದರು.

click me!