ಮುಷ್ತಾಕ್ ಅಲಿ ಟಿ20: ಕರ್ನಾಟಕಕ್ಕೆ ಪಂಜಾಬ್‌ ಎದುರಾಳಿ

Kannadaprabha News   | Asianet News
Published : Jan 12, 2021, 08:35 AM IST
ಮುಷ್ತಾಕ್ ಅಲಿ ಟಿ20: ಕರ್ನಾಟಕಕ್ಕೆ ಪಂಜಾಬ್‌ ಎದುರಾಳಿ

ಸಾರಾಂಶ

ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ ತಂಡ ಶುಭಾರಂಭ ಮಾಡಿದ್ದು, ಇದೀಗ ಎರಡನೇ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜ.12): ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಹಾಲಿ ಚಾಂಪಿಯನ್‌ ಕರ್ನಾಟಕ ತಂಡ, ಮಂಗಳವಾರ ಪಂಜಾಬ್‌ ತಂಡವನ್ನು ಎದುರಿಸಲಿದೆ. 

ಆಲೂರು ಕ್ರಿಕೆಟ್‌ ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಕರುಣ್‌ ನಾಯರ್‌ ಪಡೆ ಮತ್ತೊಂದು ಜಯದ ಲೆಕ್ಕಾಚಾರದಲ್ಲಿದೆ. ಮೊದಲ ಪಂದ್ಯದಲ್ಲಿ ಜಮ್ಮು ಕಾಶ್ಮೀರ ವಿರುದ್ಧ ಕರ್ನಾಟಕ 43 ರನ್‌ಗಳ ಗೆಲುವು ಸಾಧಿಸಿತ್ತು. 

ಫೆಬ್ರವರಿ 11ಕ್ಕೆ ಐಪಿಎಲ್ ಆಟಗಾರರ ಹರಾಜು..?

ಟಾಸ್ ಗೆದ್ದ ಜಮ್ಮು ಮತ್ತು ಕಾಶ್ಮೀರ ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ ಜರ್ನಾಟಕ ತಂಡ 5 ವಿಕೆಟ್ ಕಳೆದುಕೊಂಡು 150 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಜಮ್ಮು&ಕಾಶ್ಮೀರ ತಂಡ 107 ರನ್‌ಗಳಿಗೆ ಸರ್ವಪತನ ಕಂಡಿತ್ತು. ಇದರೊಂದಿಗೆ ಹಾಲಿ ಚಾಂಪಿಯನ್ ಕರ್ನಾಟಕ ತಂಡ 43 ರನ್‌ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು.

ಪಂದ್ಯ ಆರಂಭ: ಮಧ್ಯಾಹ್ನ 12ಕ್ಕೆ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?