
ಸೂರತ್[ನ.24]: ಸಯ್ಯದ್ ಮುಷ್ತಾಕ್ ಅಲಿ ರಾಷ್ಟ್ರೀಯ ಟಿ20 ಟೂರ್ನಿಯ ಸೂಪರ್ ಲೀಗ್ ಹಂತದ ತನ್ನ 3ನೇ ಪಂದ್ಯದಲ್ಲಿ ಕರ್ನಾಟಕ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿರುವ ಕರ್ನಾಟಕ ಆಡಿರುವ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 8 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇತ್ತ ಪಂಜಾಬ್, ಆಡಿರುವ 1 ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ.
ಬಲಿಷ್ಠ ತಂಡಗಳ ನಡುವಿನ ಪೈಪೋಟಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು. ಪಂಜಾಬ್ ವಿರುದ್ಧ ಗೆಲುವು ಸಾಧಿಸಿದರೆ, ಕರ್ನಾಟಕದ ಸೆಮಿ ಫೈನಲ್ ಹಾದಿ ಸುಗಮಗೊಳ್ಳಲಿದೆ. ಇದೀಗ ಪಂಜಾಬ್ 10 ಓವರ್ ಮುಕ್ತಾಯಕ್ಕೆ 3 ವಿಕೆಟ್ ಕಳೆದುಕೊಂಡು ಕೇವಲ 61 ರನ್’ಗಳನ್ನಷ್ಟೇ ಬಾರಿಸಿದೆ.
ಮುಷ್ತಾಕ್ ಅಲಿ: ಜಾರ್ಖಂಡ್ ವಿರುದ್ಧ ಕರ್ನಾಟಕ ಜಯಭೇರಿ
ಅಗ್ರ ಬ್ಯಾಟ್ಸ್‌ಮನ್‌ಗಳೇ ಆಧಾರ: ಕರ್ನಾಟಕ ಸೂಪರ್ ಲೀಗ್‌ನ 2 ಪಂದ್ಯಗಳಲ್ಲಿ ಗೆದ್ದಿರುವುದು ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಅಬ್ಬರದ ಆಟದಿಂದಲೇ. ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್, ತಮ್ಮ ಅಮೋಘ ಪ್ರದರ್ಶನದಿಂದ ಸುದ್ದಿಯಾಗಿದ್ದಾರೆ. ಭಾರತ ತಂಡದ ಆಟಗಾರರಾದ ಕೆ.ಎಲ್.ರಾಹುಲ್, ಮನೀಶ್ ಪಾಂಡೆ ಜವಾಬ್ದಾರಿಯುತ ಆಟವಾಡಿದ್ದಾರೆ. ಈ ಮೂವರು ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ದೊಡ್ಡ ಇನ್ನಿಂಗ್ಸ್ ಆಡಿದರಷ್ಟೇ ಕರ್ನಾಟಕಕ್ಕೆ ಗೆಲುವು ಎನ್ನುವಂತಾಗಿದೆ. ಕರುಣ್ ನಾಯರ್ ಲಯ ಕಳೆದುಕೊಂಡಿದ್ದು, ಪವನ್ ದೇಶಪಾಂಡೆ ಸ್ಥಿರತೆ ಕಾಯ್ದುಕೊಳ್ಳಲು ವಿಫಲರಾಗಿದ್ದಾರೆ. ಆಲ್ರೌಂಡರ್ ಕೆ.ಗೌತಮ್ ಅನುಪಸ್ಥಿತಿ ತಂಡವನ್ನು ಕಾಡುತ್ತಿದೆ. ಕೆಳ ಮಧ್ಯಮ ಕ್ರಮಾಂಕವನ್ನು
ನೆಚ್ಚಿಕೊಳ್ಳುವ ಹಾಗಿಲ್ಲ. ಒಂದೊಮ್ಮೆ ತಂಡ ಬ್ಯಾಟಿಂಗ್ ವೈಫಲ್ಯ ಕಂಡರೆ, ಗೆಲ್ಲುವುದು ಕಷ್ಟವಾಗಲಿದೆ.
ಇಶಾಂತ್ ದಾಳಿಗೆ ಬಾಂಗ್ಲಾ ತತ್ತರ, ಇತಿಹಾಸ ರಚಿಸಲು ಭಾರತ ಕಾತರ!
ತಂಡದ ಬೌಲರ್‌ಗಳು ಸಹ ಮೊನಚು ಕಳೆದುಕೊಂಡಿದ್ದಾರೆ. ರೋನಿತ್ ಮೋರೆ, ವಿ.ಕೌಶಿಕ್ ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಸಾಧಾರಣ ಪ್ರದರ್ಶನ ತೋರಿದ್ದರು. ಪ್ರಮುಖ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಸಹ ಲಯದಲ್ಲಿಲ್ಲ. ಲೆಗ್ ಸ್ಪಿನ್ನರ್ ಪ್ರವೀಣ್ ದುಬೆ, ಎಡಗೈ ಸ್ಪಿನ್ನರ್ ಜೆ.ಸುಚಿತ್ ಮೇಲೆ ಹೆಚ್ಚಿನ ನಿರೀಕ್ಷೆ ಇಡಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.