
ವಿಶಾಖಪಟ್ಟಣಂ[ನ.17]: ಸಯ್ಯದ್ ಮುಷ್ತಾಕ್ ಅಲಿ ರಾಷ್ಟ್ರೀಯ ಟಿ20 ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ, ಭಾನುವಾರ ಗೋವಾ ಸವಾಲನ್ನು ಎದುರಿಸಲಿದೆ.
‘ಎ’ ಗುಂಪಿನಲ್ಲಿ ಮನೀಶ್ ಪಾಂಡೆ ನೇತೃತ್ವದ ಕರ್ನಾಟಕ ತಂಡ ಆಡಿರುವ 5 ಪಂದ್ಯಗಳಲ್ಲಿ 4ರಲ್ಲಿ ಗೆದ್ದಿದ್ದು 16 ಅಂಕಗಳಿಂದ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇತರೆ ತಂಡಗಳಿಗಿಂತ ಉತ್ತಮ ನೆಟ್ ರನ್‌ರೇಟ್ ಹೊಂದಿರುವ ಕರ್ನಾಟಕ ತಂಡ, ಗುಂಪು ಹಂತದ ಅಂತಿಮ ಪಂದ್ಯದಲ್ಲಿ ಗೆದ್ದು ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ವಿಶ್ವಾಸದಲ್ಲಿದೆ.
ಮುಷ್ತಾಕ್ ಅಲಿ ಟಿ20: ಬಿಹಾರ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ
ತಾರಾ ಆಟಗಾರರನ್ನು ಹೊಂದಿರುವ ಕರ್ನಾಟಕ, ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡರೂ, ಗೋವಾ ತಂಡವನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಭರ್ಜರಿ ಜಯದೊಂದಿಗೆ ಮುಂದಿನ ಹಂತಕ್ಕೆ ಪ್ರವೇಶಿಸುವುದು ರಾಜ್ಯ ತಂಡದ ಗುರಿಯಾಗಿದೆ. ಸ್ಥಿರತೆ ಕಾಯ್ದುಕೊಳ್ಳಲು ಪರದಾಡುತ್ತಿರುವ ಕೆ.ಎಲ್.ರಾಹುಲ್ ಮೇಲೆ ಒತ್ತಡವಿದೆ. ಟೂರ್ನಿಯಲ್ಲಿ ಕರ್ನಾಟಕ ತಂಡವು ಬರೋಡ ಎದುರು ಮಾತ್ರವೇ ಮುಗ್ಗರಿಸಿತ್ತು. ಇನ್ನು ಬರೋಡ ತಂಡಕ್ಕೆ ಗೋವಾ ಶಾಕ್ ನೀಡಿತ್ತು.
ಮುಷ್ತಾಕ್ ಅಲಿ ಟ್ರೋಫಿ: ರಾಜ್ಯ ತಂಡಕ್ಕೆ ರಾಹುಲ್ ಸೇರ್ಪಡೆ
‘ಎ’ ಗುಂಪಿನಿಂದ ಕರ್ನಾಟಕ ಹಾಗೂ ಬರೋಡಾ ತಂಡಗಳು ಸೂಪರ್ ಲೀಗ್ ಹಂತಕ್ಕೆ ಪ್ರವೇಶ ಪಡೆಯುವುದು ಬಹುತೇಕ ಖಚಿತವಾಗಿದೆ. ಬರೋಡಾ ತಂಡ 6 ಪಂದ್ಯಗಳನ್ನು ಆಡಿದ್ದು 5ರಲ್ಲಿ ಗೆಲುವ ಮೂಲಕ 20 ಅಂಕ ಗಳಿಸಿ ಮೊದಲ ಸ್ಥಾನದಲ್ಲಿದೆ. 5 ಗುಂಪುಗಳಲ್ಲಿ ಅಗ್ರ 2 ಸ್ಥಾನಗಳನ್ನು ಪಡೆಯುವ ತಂಡಗಳು ಸೂಪರ್ ಲೀಗ್ ಹಂತಕ್ಕೆ ಪ್ರವೇಶಿಸಲಿವೆ. ನ. 21 ರಿಂದ ಸೂಪರ್ ಲೀಗ್ ಆರಂಭಗೊಳ್ಳಲಿದ್ದು, ನ. 29ರಂದು ಸೆಮಿಫೈನಲ್ ಹಾಗೂ ಡಿ.1ರಂದು ಫೈನಲ್ ಪಂದ್ಯ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.