ಸಿಡ್ನಿ ಟೆಸ್ಟ್‌ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ..?

By Suvarna News  |  First Published Dec 30, 2020, 3:39 PM IST

ಆಸ್ಟ್ರೇಲಿಯಾ ವಿರುದ್ದ ಜನವರಿ 07ರಿಂದ ಆರಂಭವಾಗಲಿರುವ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ 3 ಬದಲಾವಣೆಗಳಾಗುವ ನಿರೀಕ್ಷೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.


ಸಿಡ್ನಿ(ಡಿ.30): ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‌ ಭರ್ಜರಿ ಜಯ ಸಾಧಿಸಿದೆಯಾದರೂ, ಜನವರಿ 07ರಿಂದ ಆರಂಭವಾಗಲಿರುವ ಸಿಡ್ನಿ ಟೆಸ್ಟ್‌ ಪಂದ್ಯದಲ್ಲಿ ರಹಾನೆ ನೇತೃತ್ವದ ಭಾರತ ತಂಡ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ನಾಯಕ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಅನುಪಸ್ಥಿತಿಯ ಹೊರತಾಗಿಯೂ ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಮೆಲ್ಬರ್ನ್‌ ಟೆಸ್ಟ್‌ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. ಹೀಗಿದ್ದು ಭಾರತ ತಂಡದಲ್ಲಿ ಸಿಡ್ನಿ ಟೆಸ್ಟ್‌ ಪಂದ್ಯಕ್ಕೆ 3 ಬದಲಾವಣೆಗಳನ್ನು ಮಾಡಿಕೊಂಡು ಕಣಕ್ಕಿಳಿಯುವ ಸಾಧ್ಯತೆಯಿದೆ. ವೇಗಿ ಉಮೇಶ್ ಯಾದವ್‌ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದು, ಉಮೇಶ್ ಬದಲಿಗೆ ಎಡಗೈ ವೇಗಿ ಟಿ. ನಟರಾಜನ್ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಈ ಮೊದಲು ಮೊಹಮ್ಮದ್ ಶಮಿ ಗಾಯಗೊಂಡ ಸರಣಿಯಿಂದ ಹೊರಬಿದ್ದಾಗ ಅವರ ಬದಲಿಗೆ ಶಾರ್ದೂಲ್ ಠಾಕೂರ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿತ್ತು. 

Latest Videos

undefined

ಮೆಲ್ಬರ್ನ್ ಟೆಸ್ಟ್‌ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದ ಮೊಹಮ್ಮದ್ ಸಿರಾಜ್ 5 ವಿಕೆಟ್ ಕಬಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಈಗಾಗಲೇ ಆಸ್ಟ್ರೇಲಿಯಾ ವಿರುದ್ದ ಸೀಮಿತ ಓವರ್‌ಗಳ ಸರಣಿಯಲ್ಲಿ ಕಮಾಲ್‌ ಮಾಡಿರುವ ನಟರಾಜನ್‌ ಐತಿಹಾಸಿಕ ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. 

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕಮೆಂಟೇಟರ್ ಬಿಜೆಪಿ ಸೇರ್ಪಡೆ; ಹೊಸ ಸಂಚಲನ!

ಇನ್ನುಳಿದಂತೆ ರೋಹಿತ್ ಶರ್ಮಾ ಹಾಗೂ ಕೆ.ಎಲ್. ರಾಹುಲ್‌ ಕೂಡಾ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ದಟ್ಟವಾಗತೊಡಗಿದೆ. ಒಂದುವೇಳೆ ರೋಹಿತ್ ಶರ್ಮಾ ಫಿಟ್ನೆಸ್ ಪರೀಕ್ಷೆ ಪಾಸಾದರೆ, ಮಯಾಂಕ್‌ ಅಗರ್‌ವಾಲ್ ಬದಲಿಗೆ ಹಿಟ್‌ಮ್ಯಾನ್‌ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ಹನುಮ ವಿಹಾರಿ ಬ್ಯಾಟಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿಲ್ಲ. ಹೀಗಾಗಿ ವಿಹಾರಿಗೆ ವಿಶ್ರಾಂತಿ ನೀಡಿ ಕೆ,ಎಲ್‌. ರಾಹುಲ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಕಲ್ಪಿಸಿಕೊಡುವ ಸಾಧ್ಯತೆಯಿದೆ.
 

click me!