4ನೇ ಟಿ20: ಸರಣಿ ಗೆದ್ದ ಭಾರತ ತಂಡದಲ್ಲಿ ಬದಲಾವಣೆ; ಇಲ್ಲಿದೆ ಸಂಭಾವ್ಯ XI

Published : Jan 30, 2020, 06:45 PM IST
4ನೇ ಟಿ20: ಸರಣಿ ಗೆದ್ದ ಭಾರತ ತಂಡದಲ್ಲಿ ಬದಲಾವಣೆ; ಇಲ್ಲಿದೆ ಸಂಭಾವ್ಯ XI

ಸಾರಾಂಶ

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಸೂಪರ್ ಓವರ್ ಪಂದ್ಯದ ಹ್ಯಾಂಗ್ ಓವರ್‌ನಿಂದ ಯಾರೂ ಹೊರಬಂದಿಲ್ಲ. ಆಗಲೆ 4ನೇ ಪಂದ್ಯಕ್ಕೆ ಉಭಯ ತಂಡಗಳು ಅಭ್ಯಾಸ ನಡೆಸುತ್ತಿದೆ. ಜ.31ರಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.  

ವೆಲ್ಲಿಂಗ್ಟನ್(ಜ.30): ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಈಗಾಗಲೇ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಇದೀಗ ಕ್ಲೀನ್ ಸ್ವೀಪ್‌ನತ್ತ ಚಿತ್ತ ಹರಿಸಿದೆ. ಇನ್ನುಳಿದಿರುವ 2 ಪಂದ್ಯದಲ್ಲಿ ಅಬ್ಬರಿಸಲು ಕೊಹ್ಲಿ ಸೈನ್ಯ ಸಜ್ಜಾಗಿದೆ. ಹೀಗಾಗಿ ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆಗಳಾಗುವ ಸಾಧ್ಯತೆ ಇದೆ.  

ಇದನ್ನೂ ಓದಿ: INDvNZ: ಶಮಿ ವಿಕೆಟ್, ರೋಹಿತ್ ಸಿಕ್ಸರ್, ಹೇಗಿತ್ತು ಭಾರತದ ಸೂಪರ್ ಗೆಲುವು?

ಬೌಲಿಂಗ್‌ನಲ್ಲಿ ದುಬಾರಿಯಾದೂರೂ ಶಾರ್ದೂಲ್ ಠಾಕೂರ್ ಕಳೆದ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದ್ದಾರೆ. ಅಂತಿಮ 2 ಪಂದ್ಯಕ್ಕೆ ಬೆಂಂಚ್ ಸ್ಟ್ರೆಂಥ್ ಪರೀಕ್ಷಿಸಲು ಶಾರ್ದೂಲ್ ಠಾಕೂರ್ ಬದಲು ನವದೀಪ್ ಸೈನಿ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. 

ಇದನ್ನೂ ಓದಿ: ಭಾರತ vs ನ್ಯೂಜಿಲೆಂಡ್ ಪಂದ್ಯ ಟೈ; ಹಿಂದಿದೆ ರೋಚಕ ಕಹಾನಿ!

ಇನ್ನುಳಿದಂತೆ ಹೆಚ್ಚಿನ ಬದಲಾವಣೆ ಮಾಡುವ ಸಾಧ್ಯತೆಗಳಿಲ್ಲ. ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಕೆಎಲ್ ರಾಹುಲ್‌ ವಿಕೆಟ್ ಕೀಪರ್ ಆಗಿ ಮುಂದುವರಿಸುವ ಚಿಂತನೆಯಲ್ಲಿರುವ ಮ್ಯಾನೇಜ್ಮೆಂಟ್, ಸಂಜು ಸಾಮ್ಸನ್‌ಗೆ ಅವಕಾಶ ನೀಡುವ ಸಾಧ್ಯತೆಗಳಿಲ್ಲ. 

ಭಾರತ ಸಂಭವನೀಯ ತಂಡ:
ವಿರಾಟ್ ಕೊಹ್ಲಿ(ನಾಯಕ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶಿವಂ ದುಬೆ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರವೀಂದ್ರ ಜಡೇಜಾ, ನವದೀಪ್ ಸೈನಿ, ಮೊಹಮ್ಮದ್ ಶಮಿ, ಯಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿವೃತ್ತಿ ನಂತರ ಕೊಹ್ಲಿ, ರೋಹಿತ್ ಏನ್ಮಾಡ್ತಾರೆ? ಗುಟ್ಟು ಬಿಚ್ಚಿಟ್ಟ ಅಶ್ವಿನ್
ind vs sl 1st test : ಸರ್ಪರಾಜ್‌ಗೆ ಇಲ್ಲ ಸ್ಥಾನ, ಮೂವರು ಕನ್ನಡಿಗರಿಗೆ ಪ್ಲೇಯಿಂಗ್-11ನಲ್ಲಿ ಸ್ಥಾನ ಕೊಟ್ಟ ಚೋಪ್ರಾ