T20 World Cup 2021: ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್!

By Suvarna NewsFirst Published Oct 23, 2021, 7:04 PM IST
Highlights
  • ಸೂಪರ್ 12 ಹೋರಾಟದಲ್ಲಿ ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮುಖಾಮುಖಿ
  • ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ
  • ದುಬೈನಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯ

ದುಬೈ(ಅ.23);  T20 World Cup 2021 ಅಸಲಿ ಹೋರಾಟದ 2ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ಮುಖಾಮುಖಿಯಾಗುತ್ತಿದೆ. ಹಾಲಿ ಏಕದಿನ ವಿಶ್ವಕಪ್ ಚಾಂಪಿಯನ್ ಹಾಗೂ ಹಾಲಿ ಟಿ20 ವಿಶ್ವಕಪ್ ಚಾಂಪಿಯನ್ ನಡುವಿನ ಹೋರಾಟ ಹಲವು ಕುತೂಹಲಕ್ಕೆ ಕಾರಣವಾಗಿದೆ. ಸೂಪರ್ 12 ಹಂತದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 

2016ರಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ಮುಖಾಮುಖಿಯಾಗಿತ್ತು. ಇಂಗ್ಲೆಂಡ್ ಮಣಿಸಿದ ವಿಂಡೀಸ್ ಚಾಂಪಿಯನ್ ಆಗಿ ಮೆರೆದಾಡಿತ್ತು. ಇದೀಗ ಇಂಗ್ಲೆಂಡ್ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಇತ್ತ ವೆಸ್ಟ್ ಇಂಡೀಸ್ ಗೆಲುವಿನ ಅಭಿಯಾನ ಮುಂದುವರಿಸುವ ವಿಶ್ವಾಸದಲ್ಲಿದೆ.

T20 World Cupನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಆಟಗಾರರು!

2016ರ ಫೈನಲ್ ಪಂದ್ಯದಲ್ಲಿ ಆಡಿದ ಹಲವು ಕ್ರಿಕೆಟಿಗರ ಜೊತೆಗೆ ಯುವ ಕ್ರಿಕೆಟಿಗರು ತಂಡದಲ್ಲಿದ್ದಾರೆ. ಹೀಗಾಗಿ ಇಂದಿನ ಹೋರಾಟ ತೀವ್ರ ಜಿದ್ದಾಜಿದ್ದಿನಿಂದ ಕೂಡಿರಲಿದೆ.  ಆದರೆ ವೆಸ್ಟ್ ಇಂಡೀಸ್ ತನ್ನ ಅಭ್ಯಾಸ ಪಂದ್ಯದಲ್ಲಿ ತೀವ್ರ ನಿರಾಸೆ ಅನುಭವಿಸಿದೆ. ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನ ವಿರುದ್ದದ ಅಭ್ಯಾಸ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸೋಲು ಕಂಡಿದೆ.

ಟಿ20 ವಿಶ್ವಕಪ್ ಇತಿಹಾಸದಲ್ಲಿ ವೆಸ್ಟ್ ಇಂಡೀಸ್, ಇಂಗ್ಲೆಂಡ್ ವಿರುದ್ಧ ಸೋಲು ಕಂಡಿಲ್ಲ. ಕಳೆದ 5 ಮುಖಾಮುಖಿಯಲ್ಲಿ 5ರಲ್ಲೂ ವೆಸ್ಟ್ ಇಂಡೀಸ್ ಗೆಲುವು ಸಾಧಿಸಿದೆ.  ಹೀಗಾಗಿ ಇಂದಿನ ಪಂದ್ಯದಲ್ಲೂ ಗೆಲುವಿನ ವಿಶ್ವಾಸದಲ್ಲಿದೆ. ಇದಕ್ಕಾಗಿ ಕಠಿಣ ಅಭ್ಯಾಸ ನಡೆಸಿದೆ

T20 World Cup 2021:ಕೊಹ್ಲಿ ಸೈನ್ಯಕ್ಕೆ ಬಾಬರ್ ಅಜಮ್ ಎಚ್ಚರಿಕೆ, ಶುರುವಾಯ್ತು ಜಟಾಪಟಿ!

ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ಮಿಶ್ರ ಫಲಿತಾಂಶ ಕಂಡಿದೆ. ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದರೆ, ಭಾರತ ವಿರುದ್ಧ ಮುಗ್ಗರಿಸಿತ್ತು. ಆದರೆ ಕಠಿಣ ಹೋರಾಟ ನೀಡಿತ್ತು. ಹೀಗಾಗಿ ಸದ್ಯ ಫಾರ್ಮ್‌ನಲ್ಲಿರುವ ಇಂಗ್ಲೆಂಡ್ ಕೂಡ ಅದೇ ಆತ್ಮವಿಶ್ವಾಸದಲ್ಲಿದೆ.

ದುಬೈ ಕ್ರೀಡಾಂಗಣದಲ್ಲಿ ಡ್ಯು ಫ್ಯಾಕ್ಟರ್ ಪರಿಣಾಮ ಬೀರಲಿದೆ. ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ ಟೂರ್ನಿಯಲ್ಲಿ ಸೆಕೆಂಡ್ ಬ್ಯಾಟಿಂಗ್ ಮಾಡಿದ ತಂಡ ಹೆಚ್ಚು ಯಶಸ್ಸು ಸಾಧಿಸಿದೆ. 13 ಪಂದ್ಯದಲ್ಲಿ 9 ಪಂದ್ಯದಲ್ಲಿ ಸೆಕೆಂಡ್ ಬ್ಯಾಟಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ. 

ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಮುಖಾಮುಖಿಯಲ್ಲಿ ವಿಂಡೀಸ್ ಮೇಲುಗೈ ಸಾಧಿಸಿದೆ. 18 ಪಂದ್ಯದಲ್ಲಿ 11ರಲ್ಲಿ ವೆಸ್ಟ್ ಇಂಡೀಸ್ ಗೆಲುವು ಸಾಧಿಸಿದೆ. ಕ್ರಿಸ್ ಗೇಲ್ ಇಂಗ್ಲೆಂಡ್ ವಿರುದ್ದ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಗೇಲ್ 157.31 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ.

 

click me!