T20 World Cup 2021: ಇಂಗ್ಲೆಂಡ್ ಮಣಿಸಿ ಚೊಚ್ಚಲ ಭಾರಿಗೆ ಫೈನಲ್ ಪ್ರವೇಶಿಸಿದ ನ್ಯೂಜಿಲೆಂಡ್!

By Suvarna NewsFirst Published Nov 10, 2021, 11:06 PM IST
Highlights
  • T20 World Cup 2021 ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲೆಂಡ್
  • ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮಣಿಸಿದ ಕಿವೀಸ್
  • ಮೊದಲ ಬಾರಿಗೆ ಟಿ20 ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲೆಂಡ್

ಅಬು ಧಾಬಿ(ನ.10):  ಜಿದ್ದಾಜಿದ್ದಿನ ಹೋರಾಟ, ಒಂದು ಹಂತದಲ್ಲಿ ಇಂಗ್ಲೆಂಡ್(England) ಮೇಲುಗೈ, ಮತ್ತೊಂದು ಹಂತದಲ್ಲಿ ನ್ಯೂಜಿಲೆಂಡ್(New zealand) ಮೇಲುಗೈ. ಅಂತಿಮ ಹಂತದವರೆಗೆ ಗೆಲುವು ಯಾರಿಗೆ ಅನ್ನೋದು ತೀವ್ರ ಕುತೂಹಲ ಕೆರಳಿಸಿತ್ತು. ಆದರೆ ಈ ರೋಚಕ ಹೋರಾಟದಲ್ಲಿ ನ್ಯೂಜಿಲೆಂಡ್ 5 ವಿಕೆಟ್ ಗೆಲವು ದಾಖಲಿಸಿದೆ. ಈ ಮೂಲಕ ನ್ಯೂಜಿಲೆಂಡ್ T20 World Cup 2021 ವಿಶ್ವಕಪ್ ಟೂರ್ನಿ ಫೈನಲ್(Final) ಪ್ರವೇಶಿಸಿದೆ. ನ್ಯೂಜಿಲೆಂಡ್ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿ ಫೈನಲ್ ಪ್ರವೇಶಿಸಿದೆ. ಇತ್ತ ಭಾರಿ ನಿರೀಕ್ಷೆ ಮೂಡಿಸಿದ್ದ ಇಂಗ್ಲೆಂಡ್ ಸೆಮಿಫೈನಲ್ ಸೋಲಿನೊಂದಿಗೆ ಟೂರ್ನಿಯಿಂದ ನಿರ್ಗಮಿಸಿದೆ.

ಟಾಸ್ ಗೆದ್ದ ನ್ಯೂಜಿಲೆಂಡ್ ಇಂಗ್ಲೆಂಡ್ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿತ್ತು. ಡೇವಿಡ್ ಮಲಾನ್ ಹಾಗೂ ಮೊಯಿನ್ ಆಲಿ ಸ್ಫೋಟಕ ಬ್ಯಾಟಿಂಗ್‌ನಿಂದ ಇಂಗ್ಲೆಂಡ್ ದಿಟ್ಟ ಹೋರಾಟ ನೀಡಿತು. ಮಲಾನ್ 41 ರನ್ ಸಿಡಿಸಿದರೆ, ಮೊಯಿನ್ ಆಲಿ ಅಜೇಯ 51 ರನ್ ಸಿಡಿಸಿದರು. ಜೋಸ್ ಬಟ್ಲರ್ 29 ರನ್, ಜಾನಿ ಬೈರ್‌ಸ್ಟೋ 13, ಲಿಯಾಮ್ ಲಿವಿಂಗ್‌ಸ್ಟೋನ್ 17 ರನ್ ಕಾಣಿಕೆ ನೀಡಿದರು. ಈ ಮೂಲಕ ಇಂಗ್ಲೆಂಡ್ 4 ವಿಕೆಟ್ ನಷ್ಟಕ್ಕೆ 166 ರನ್ ಸಿಡಿಸಿತು. 

167 ರನ್ ಟಾರ್ಗೆಟ್(Target) ನ್ಯೂಜಿಲೆಂಡ್‌ಗೆ ಕಠಿಣ ಸವಾಲಾಗಿ ಪರಿಣಮಿಸಿತು. ಆರಂಭದಲ್ಲೇ ಪ್ರಮುಖ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಮಾರ್ಟಿನ್ ಗಪ್ಟಿಲ್ ಕೇವಲ 4 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ನಾಯಕ ಕೇನ್ ವಿಲಿಯಮ್ಸನ್ 5 ರನ್ ಸಿಡಿಸಿ ನಿರಾಸೆ ಮೂಡಿಸಿದರು. ರನ್ ಚೇಸಿಂಗ್‌ನಲ್ಲಿ 13 ರನ್ ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡ ನ್ಯೂಜಿಲೆಂಡ್ ಸಂಕಷ್ಟ ಹೆಚ್ಚಾಯಿತು.

T20 World Cup; ಸೆಮೀಸ್‌ಗೆ ಏರದ ಭಾರತ,  ಟಾಪ್‌ ಎತ್ತಿ 'ಎಲ್ಲ' ತೋರಿಸಿದ ಪಾಕ್ ಅಭಿಮಾನಿ!

ಡರಿಲ್ ಮಿಚೆಲ್ ಡೆವೊನ್ ಕೊನ್ವೆ ಜೊತೆಯಾಟದಿಂದ ನ್ಯೂಜಿಲೆಂಡ್ ಚೇತರಿಸಿಕೊಂಡಿತು. ಡೊವೋನ್ ಕೊನ್ವೆ 38 ಎಸೆತದಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್  ಮೂಲಕ 46 ರನ್ ಸಿಡಿಸಿ ಔಟಾದರು. ಇತ್ತ ನ್ಯೂಜಿಲೆಂಡ್ ಒತ್ತಡ ಹೆಚ್ಚಾಯಿತು. ಕೊನ್ವೆ ಬೆನ್ನಲ್ಲೆ ಗ್ಲೆನ್ ಫಿಲಿಪ್ಸ್ ವಿಕೆಟ್ ಕಳೆದುಕೊಂಡಿತು. 107ರನ್‌ಗೆ 4 ವಿಕೆಟ್ ಕಳೆದುಕೊಂಡ ನ್ಯೂಜಿಲೆಂಡ್ ತೀವ್ರ ಸಂಕಷ್ಟಕ್ಕೆ ಸಿಲುಕಿತು.

ಡರಿಲ್ ಮಿಚೆಲ್ ಹೋರಾಟ ಮುಂದುವರಿಸಿದರು. ಇತ್ತ ಜೇಮ್ಸ್ ನೀಶಮ್ ಉತ್ತಮ ಸಾಥ್ ನೀಡಿದರು. ಗೆಲುವಿಗೆ ಅಂತಿಮ 18 ಎಸೆತದಲ್ಲಿ 34 ರನ್ ಅವಶ್ಯಕತೆ ಇತ್ತು. ಡರಿಲ್ ಹಾಗೂ ನೀಶಮ್ ಸ್ಫೋಟಕ ಬ್ಯಾಟಿಂಗ್, ಇಂಗ್ಲೆಂಡ್ ಬೌಲರ್‌ಗಳ ತಲೆ ನೋವು ಹೆಚ್ಚಿಸಿತು. ಇದರ ನಡುವೆ ಡರಿಲ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು.

11 ಎಸೆತದಲ್ಲಿ 3 ಸಿಕ್ಸರ್ 1 ಬೌಂಡರಿ ಮೂಲಕ ನೀಶಮ್ 27 ರನ್ ಸಿಡಿಸಿ ಔಟಾದರು. 19ನೇ ಓವರ್‌ನಲ್ಲಿ ಡರಿಲ್ ಸತತ 2 ಸಿಕ್ಸರ್ ಸಿಡಿಸಿದರು. ಇದರಿಂದ ಪಂದ್ಯದ ಮೇಲೆ ನ್ಯೂಜಿಲೆಂಡ್ ಸಂಪೂರ್ಣ ಹಿಡಿತ ಸಾಧಿಸಿತು. 9ನೇ ಓವರ್‌ ಅಂತಿಮ ಎಸೆತದಲ್ಲಿ ಬೌಂಡರಿ ಸಿಡಿಸಿಗ ಡರಿಲ್ ನ್ಯೂಜಿಲೆಂಡ್ ತಂಡಕ್ಕೆ 5 ವಿಕೆಟ್ ಗೆಲುವು ತಂದುಕೊಟ್ಟರು. ಡರಿಲ್ ಅಜೇಯ 72 ರನ್ ಸಿಡಿಸಿದರು. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ 2019ರ ಏಕದಿನ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು. 

Team India Squad:ನ್ಯೂಜಿಲೆಂಡ್ ವಿರುದ್ಧ T20ಗೆ ಬಲಿಷ್ಠ ತಂಡ ಪ್ರಕಟ, ರೋಹಿತ್ ನಾಯಕ, ಕೊಹ್ಲಿಗೆ ರೆಸ್ಟ್!

ನ್ಯೂಜಿಲೆಂಡ್ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಟೂರ್ನಿ ಫೈನಲ್ ಪ್ರವೇಶಿಸಿದೆ. ಇತ್ತ ಐಸಿಸಿ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ. ಕಳೆದ 5 ಸೆಮಿಫೈನಲ್ ಪಂದ್ಯದಲ್ಲಿ ಸತತ ಗೆಲುವು ಕಂಡಿದ್ದ ಇಂಗ್ಲೆಂಡ್ 6ನೇ ಪಂದ್ಯದಲ್ಲಿ ಮುಗ್ಗರಿಸಿದೆ. 1983ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮುಗ್ಗರಿಸಿತ್ತು. ಬಳಿಕ ಐಸಿಸಿ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿದ ಇಂಗ್ಲೆಂಡ್ ಇದೀಗ ನ್ಯೂಜಿಲೆಂಡ್ ವಿರುದ್ದ ಮುಗ್ಗರಿಸುವ ಮೂಲಕ ಅಜೇಯ ಓಟಕ್ಕೆ ಬ್ರೇಕ್ ಬಿದ್ದಿದೆ.
 

click me!