
ದುಬೈ(ಅ.20): T20 World Cup 2021 ಟೂರ್ನಿ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಸತತ 2ನೇ ಗೆಲುವು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿದ ಟೀಂ ಇಂಡಿಯಾ(Team India), ಎರಡನೇ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ(Australia) ವಿರುದ್ದ 9 ವಿಕೆಟ್ ಸುಲಭ ಗೆಲುವು ದಾಖಲಿಸಿದೆ.
T20 World Cup: ಟೀಂ ಇಂಡಿಯಾಗೆ ಸ್ಪರ್ಧಾತ್ಮಕ ಗುರಿ ನೀಡಿದ ಆಸ್ಟ್ರೇಲಿಯಾ
ರೋಹಿತ್ ಶರ್ಮಾ(Rohit Sharma) ಅಬ್ಬರ, ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ನೆರವಿನಿಂದ ಕಾಂಗರೂಗಳ ವಿರುದ್ಧ ಭಾರತ 17.5 ಓವರ್‌ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ ಗೆಲುವು ಸಾಧಿಸಿದೆ. 9 ವಿಕೆಟ್ ಗೆಲುವು ಕಂಡ ಭಾರತ ಯಶಸ್ವಿಯಾಗಿ ಅಭ್ಯಾಸ ಪಂದ್ಯ ಮುಗಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ, ಭಾರತದ ದಾಳಿಗೆ ತತ್ತರಿಸಿತು. ಡೇವಿಡ್ ವಾರ್ನರ್ ಕೇವಲ 1 ರನ್ ಸಿಡಿಸಿ ಔಟಾದರು. ಇತ್ತ ನಾಯಕ ಆ್ಯರೋನ್ ಫಿಂಚ್ 8 ರನ್ ಸಿಡಿಸಿ ನಿರ್ಗಮಿಸಿದರು. ಆರಂಭದಲ್ಲೇ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಮೋಡಿಗೆ ಆಸೀಸ್ ಕಂಗಾಲಾಯಿತು.
ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಮಾರ್ಕಸ್ ಸ್ಟೊಯ್ನಿಸ್ ಹೋರಾಟದಿಂದ ಆಸ್ಟ್ರೇಲಿಯಾ ಚೇತರಿಸಿಕೊಂಡಿತು. ಸ್ಮಿತ್ 57 ರನ್ ಸಿಡಿಸಿದರೆ, ಮ್ಯಾಕ್ಸ್‌ವೆಲ್ 37 ಹಾಗೂ ಸ್ಟೊಯ್ನಿಸ್ 41 ರನ್ ಕಾಣಿಕೆ ನೀಡಿದರು. ಈ ಮೂಲಕ ಆಸ್ಟ್ರೇಲಿಯಾ 5 ವಿಕೆಟ್ ನಷ್ಟಕ್ಕೆ 152 ರನ್ ಸಿಡಿಸಿತು.
T20 World Cup 2021: ಅಭ್ಯಾಸ ಪಂದ್ಯದಲ್ಲಿ ಶುಭಾರಂಭ, ಇಂಗ್ಲೆಂಡ್ ಮಣಿಸಿದ ಭಾರತ!
153 ರನ್ ಟಾರ್ಗೆಟ್ ಪಡೆದ ಟೀಂ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಸ್ಫೋಟಕ ಆರಂಭ ನೀಡಿದರು. ರಾಹುಲ್ 39 ರನ್ ಸಿಡಿಸಿ ಔಟಾದರು. ಆದರೆ ರೋಹಿತ್ ಅಬ್ಬರ ಮುಂದುವರಿಯಿತು. ಸೂರ್ಯಕುಮಾರ್ ಯಾದವ್ ಜೊತೆ ಸೇರಿದ ರೋಹಿತ್ ಹಾಫ್ ಸೆಂಚುರಿ ಸಿಡಿಸಿದರು.
41 ಎಸೆತದಲ್ಲಿ 60 ರನ್ ಸಿಡಿಸಿದ ರೋಹಿತ್ ರಿಟೈರ್ಡ್ ಹರ್ಟ್ ಆಗಿ ಪೆವಿಲಿಯನ್ ಸೇರಿಕೊಂಡರು. ಇತ್ತ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಅಬ್ಬರ ಆರಂಭಗೊಂಡಿತು. ಸೂರ್ಯಕುಮಾರ್ ಯಾದವ್ 27 ಎಸೆತದಲ್ಲಿ ಅಜೇಯ 38 ರನ್ ಸಿಡಿಸಿದರೆ, ಹಾರ್ದಿಕ್ 8 ಎಸೆತದಲ್ಲಿ 14 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 17.5 ಓವರ್‌ಗಳಲ್ಲಿ 9 ವಿಕೆಟ್ ಭರ್ಜರಿ ಗೆಲುವು ಕಂಡಿತು.
ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸದೊಂದಿಗೆ ಟೀಂ ಇಂಡಿಯಾ ಪ್ರಾಕ್ಟೀಸ್ ಮ್ಯಾಚ್ ಅಂತ್ಯಗೊಂಡಿದೆ. ಇನ್ನು ಲೀಗ್ ಹಂತದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಬದ್ಧ ವೈರಿ ಪಾಕಿಸ್ತಾನ ವಿರುದ್ಧ ಹೋರಾಟ ನಡೆಸಲಿದೆ. ಅಕ್ಟೋಬರ್ 24 ರಂದು ಈ ಪಂದ್ಯ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.