ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಮುಕ್ತಾಯಗೊಂಡಿದೆ. ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ಹೋರಾಟ ನಡೆಸಿದರೆ, ಭಾರತ ಹಾಗೂ ಇಂಗ್ಲೆಂಡ್ ಹೋರಾಟ ನಡೆಸಲಿದೆ. ಇದೀಗ ಭಾರತ ಹಾಗೂ ಪಾಕಿಸ್ತಾನತ್ತೆ ಮತ್ತೆ ಮುಖಾಮುಖಿಯಾಗುವ ಅವಕಾಶ ಬಂದಿದೆ. 2007ರ ಇತಿಹಾಸ ಮರುಕಳಿಸುತ್ತಾ?
ಸಿಡ್ನಿ(ನ.06): ಟಿ20 ವಿಶ್ವಕಪ್ ಟೂರ್ನಿ ರೋಚಕತ್ತೆ ಮತ್ತಷ್ಟು ಹೆಚ್ಚಾಗಿದೆ. ಸೌತ್ ಆಫ್ರಿಕಾ ಸೆಮಿಫೈನಲ್ ಪ್ರವೇಶಿಸುವುದು ಬಹುತೇಕ ಖಚಿತಗೊಂಡಿತ್ತು, ಇತ್ತ ಪಾಕಿಸ್ತಾನ ಸೆಮಿಫೈನಲ್ ರೇಸ್‌ನಲ್ಲಿ ಒಂದು ಕಾಲು ಹೊರಗಿಟ್ಟಿತ್ತು. ಆದರೆ ಇದೀಗ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಿದರೆ, ಸೌತ್ ಆಫ್ರಿಕಾ ಹೊರಬಿದ್ದಿದೆ. ಟೀಂ ಇಂಡಿಯಾ ಅಧಿಕಾರಯುತವಾಗಿ ಸೆಮಿಫೈನಲ್ ಪ್ರವೇಶಿಸಿದೆ. ಸೆಮಿಫೈನಲ್ ಹೋರಾಟದ ತಂಡಗಳು ಇದೀಗ ಫೈನಲ್ ಪ್ರವೇಶಕ್ಕೆ ಹೊಂಚು ಹಾಕುತ್ತಿದೆ. ಇದೀಗ ಇಲ್ಲೊಂದು ಕುತೂಹಲಕರ ವಿಚಾರವಿದೆ. ಭಾರತ ಹಾಗೂ ಪಾಕಿಸ್ತಾನ ಮತ್ತೆ ಮುಖಾಮುಖಿಯಾಗುವ ಅವಕಾಶವಿದೆ. ಟಿ20 ವಿಶ್ವಕಪ್ 2022 ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಹೋರಾಟಕ್ಕೆ ಚಾನ್ಸ್ ಇದೆ. ಹೀಗಾದಲ್ಲಿ 2007ರ ಇತಿಹಾಸ ಮರುಕಳಿಸುತ್ತಾ ಅನ್ನೋ ಚರ್ಚೆ ಶುರುವಾಗಿದೆ.
ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡ ಜಿಂಬಾಬ್ವೆ ವಿರುದ್ಧ ಗೆಲುವು ದಾಖಲಿಸಿತು. ಈ ಮೂಲಕ ಎರಡನೇ ಗುಂಪಿನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿತು. ಭಾರತ ನವೆಂಬರ್ 10 ರಂದು ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಹೋರಾಟ ನಡೆಸಲಿದೆ. ಇನ್ನು ನ್ಯೂಜಿಲೆಂಡ್ ನವೆಂಬರ್ 9 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಹೋರಾಟ ನಡೆಸಲಿದೆ. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿ, ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ದಾಖಲಿಸಿದರೆ, ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿದೆ.
T20 WORLD CUP ಜಿಂಬಾಬ್ವೆ ವಿರುದ್ಧ ಗೆಲುವು, ಮೊದಲ ಸ್ಥಾನಕ್ಕೇರಿದ ಭಾರತ!
2007ರ ಟಿ20 ವಿಶ್ವಕಪ್ ಇತಿಹಾಸ
2007ರ ಟಿ20 ವಿಶ್ವರಪ್ ಟೂರ್ನಿ. ಇದು ಚೊಚ್ಚಲ ಟಿ20 ವಿಶ್ವಕಪ್. ಸೌತ್ ಆಫ್ರಿಕಾದಲ್ಲಿ ನಡೆದ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಿತ್ತು. ಅತ್ಯಂತ ರೋಚಕ ಹೋರಾಟದ ಟೈನಲ್ಲಿ ಅಂತ್ಯಗೊಂಡಿತ್ತು. ಹೀಗಾಗಿ ಗೆಲುವು ನಿರ್ಧರಿಸಲು ಬಾಲ್ ಔಟ್ ಮೊರೆ ಹೋಗಲಾಗಿತ್ತು. ಈ ರೋಚಕ ಹೋರಾಟದಲ್ಲಿ ಭಾರತ ಗೆಲುವು ದಾಖಲಿಸಿತ್ತು. 2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತನ್ನ ಮೊದಲ ಹೋರಾಟವನ್ನು ಪಾಕಿಸ್ತಾನ ವಿರುದ್ಧವೇ ಆಡಿದೆ. ಈ ಹೋರಾಟವೂ ಅತ್ಯಂತ ರೋಚಕವಾಗಿತ್ತು. ಕೊನೆಯ ಎಸೆತದಲ್ಲಿ ಭಾರತ ರೋಚಕ ಗೆಲುವು ದಾಖಲಿಸಿತ್ತು.
T20 World Cup: ಬಾಂಗ್ಲಾದೇಶಕ್ಕೆ ಸೋಲುಣಿಸಿ ಸೆಮೀಸ್‌ಗೆ ಲಗ್ಗೆಯಿಟ್ಟ ಪಾಕಿಸ್ತಾನ..!
2007ರಲ್ಲಿ ಭಾರತ ಹಾಗೂ ಪಾಕಿಸ್ತಾನ ಮತ್ತೆ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯವೂ ಅತ್ಯಂತ ರೋಚಕತೆಯಿಂದ ಕೂಡಿತ್ತು. ಅಂತಿಮ ಓವರ್‌ನ 3ನೇ ಎಸೆತದಲ್ಲಿ ಗೆಲುವಿನ ರನ್ ಸಿಡಿಸಲು ಹೋದ ಮಿಸ್ಬಾ ಉಲ್ ಹಕ್ ಲೆಕ್ಕಾಚಾರ ಉಲ್ಟಾ ಆಗಿತ್ತು. ಶ್ರೀಶಾಂತ್‌ಗೆ ಕ್ಯಾಚ್ ನೀಡಿದರು. ಇದರೊಂದಿಗೆ ಪಾಕಿಸ್ತಾನ ಆಲೌಟ್ ಆಗಿತ್ತು. ಭಾರತ ಚೊಚ್ಚಲ ವಿಶ್ವಕಪ್ ಟೂರ್ನಿ ಗೆದ್ದುಕೊಂಡಿತು. ಇದೇ ಇತಿಹಾಸ ಮರುಕಳಿಸುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿದೆ.