
ಕಿಂಗ್ಸ್‌ಟೌನ್: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಆಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ಕೊನೆಗೂ 8 ರನ್ ರೋಚಕ ಗೆಲುವು ಸಾಧಿಸುವ ಮೂಲಕ ರೋಚಕವಾಗಿ ಸೆಮಿಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.
ಮಳೆ ಬಾಧಿತ ಪಂದ್ಯದಲ್ಲಿ 19 ಓವರ್‌ಗಳಲ್ಲಿ 114 ರನ್ ಗುರಿ ಪಡೆದಿದ್ದ ಬಾಂಗ್ಲಾದೇಶ ತಂಡವು 105 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಗೆಲುವಿನೊಂದಿಗೆ ಗ್ರೂಪ್ 1ರಿಂದ ಎರಡನೇ ತಂಡವಾಗಿ ರಶೀದ್ ಖಾನ್ ಪಡೆ ಸೆಮೀಸ್‌ಗೇರಿದರೆ, ಆಸ್ಟ್ರೇಲಿಯಾ ತಂಡದ ಸೆಮೀಸ್ ಕನಸು ನುಚ್ಚುನೂರಾಯಿತು.
ಒಂದು ವೇಳೆ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಗೆಲುವು ಸಾಧಿಸಿದ್ದರೇ, ಆಸ್ಟ್ರೇಲಿಯಾ ತಂಡವು ಸೆಮೀಸ್‌ಗೇರುತ್ತಿತ್ತು. ಆದರೆ ರಶೀದ್ ಖಾನ್, ನವೀನ್ ಉಲ್ ಹಕ್ ಅವರ ಮಾರಕ ದಾಳಿಯ ನೆರವಿನಿಂದ ಅಲ್ಪ ಮೊತ್ತವನ್ನು ರಕ್ಷಿಸಿಕೊಳ್ಳುವಲ್ಲಿ ಆಫ್ಘಾನಿಸ್ತಾನ ತಂಡವು ಯಶಸ್ವಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.