T20 World Cup: ಭಾರತ ಎದುರು ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಆಯ್ಕೆ

By Naveen Kodase  |  First Published Jun 22, 2024, 7:38 PM IST

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮಹತ್ವದ ಪಂದ್ಯಕ್ಕೆ ಇಲ್ಲಿನ ಸರ್ ವಿವಿನ್ ರಿಚರ್ಡ್ಸ್‌ ಸ್ಟೇಡಿಯಂ ಆತಿಥ್ಯ ವಹಿಸಿದೆ. ನಿರೀಕ್ಷೆಯಂತೆಯೇ ಬಾಂಗ್ಲಾದೇಶ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಟಸ್ಕಿನ್ ಅಹಮದ್ ತಂಡದಿಂದ ಹೊರಬಿದ್ದಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.


ನಾರ್ತ್‌ ಸೌಂಡ್‌(ಆ್ಯಂಟಿಗಾ): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಪಂದ್ಯದಲ್ಲಿಂದು ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ನಜ್ಮುಲ್ ಹೊಸೈನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಇಂದಿನ ಪಂದ್ಯ ಬಾಂಗ್ಲಾದೇಶ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದ್ದರೆ, ಟೀಂ ಇಂಡಿಯಾ ಸೆಮೀಸ್ ಹೊಸ್ತಿಲ್ಲಲ್ಲಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮಹತ್ವದ ಪಂದ್ಯಕ್ಕೆ ಇಲ್ಲಿನ ಸರ್ ವಿವಿನ್ ರಿಚರ್ಡ್ಸ್‌ ಸ್ಟೇಡಿಯಂ ಆತಿಥ್ಯ ವಹಿಸಿದೆ. ನಿರೀಕ್ಷೆಯಂತೆಯೇ ಬಾಂಗ್ಲಾದೇಶ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಟಸ್ಕಿನ್ ಅಹಮದ್ ತಂಡದಿಂದ ಹೊರಬಿದ್ದಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

Tap to resize

Latest Videos

undefined

ಆಸ್ಟ್ರೇಲಿಯಾ ವಿರುದ್ಧ ಸೂಪರ್‌-8 ಹಂತದ ಮೊದಲ ಪಂದ್ಯದಲ್ಲಿ ಸೋಲನುಭವಿಸಿದ್ದ ಬಾಂಗ್ಲಾ ಮೊದಲ ಗೆಲುವಿನ ಕಾತರದಲ್ಲಿದೆ. ತಂಡ ಭಾರತ ವಿರುದ್ಧವೂ ಸೋತರೆ ಸೆಮಿಫೈನಲ್‌ ರೇಸ್‌ನಿಂದ ಬಹುತೇಕ ಹೊರಗುಳಿಯಲಿದೆ.

ಆರಂಭಿಕ ಪಂದ್ಯದಲ್ಲಿ ಆಫ್ಘನ್ನರನ್ನು ಮಣಿಸಿರುವ ಭಾರತಕ್ಕೆ 2ನೇ ಗುಂಪಿನ ಕೊನೆ ಪಂದ್ಯದಲ್ಲಿ ಆಸ್ಟ್ರೇಲಿಯಾ ಸವಾಲು ಎದುರಾಗಲಿದೆ. ಹೀಗಾಗಿ ಆಸೀಸ್‌ ಸವಾಲಿಗೂ ಮುನ್ನವೇ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿ ಸೆಮಿಫೈನಲ್‌ನಲ್ಲಿ ಸ್ಥಾನ ಗಿಟ್ಟಿಸಲು ಭಾರತ ಎದುರು ನೋಡುತ್ತಿದೆ.

ಉಭಯ ತಂಡಗಳ ಆಟಗಾರರ ಪಟ್ಟಿ

ಭಾರತ: ರೋಹಿತ್‌ ಶರ್ಮಾ(ನಾಯಕ), ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್, ಶಿವಂ ದುಬೆ, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್‌ ಯಾದವ್, ಅರ್ಶ್‌ದೀಪ್‌ ಸಿಂಗ್.

ಬಾಂಗ್ಲಾದೇಶ: ತಂಜೀದ್‌ ಹಸನ್, ಲಿಟನ್‌ ದಾಸ್, ನಜ್ಮುಲ್‌ ಹೊಸೈನ್(ನಾಯಕ), ಶಕೀಬ್‌ ಅಲ್ ಹಸನ್, ತೌಹೀದ್‌, ಮಹ್ಮೂದುಲ್ಲಾ, ಮಹೆದಿ, ರಿಶಾದ್‌, ಜೇಕರ್ ಅಲಿ , ತಂಜೀಮ್‌, ಮುಸ್ತಾಫಿಜುರ್‌.

ಪಂದ್ಯ: ರಾತ್ರಿ 8 ಗಂಟೆಗೆ, 
ನೇರಪ್ರಸಾರ: ಸ್ಟಾರ್‌ಸ್ಪೋರ್ಟ್ಸ್‌, ಹಾಟ್‌ಸ್ಟಾರ್‌.

ಪಂದ್ಯಕ್ಕೆ ಮಳೆ ಭೀತಿ

ಭಾರತ-ಬಾಂಗ್ಲಾ ನಡುವಿನ ಪಂದ್ಯಕ್ಕೆ ಮಳೆ ಭೀತಿ ಇದೆ. ಶುಕ್ರವಾರದ ಆಸ್ಟ್ರೇಲಿಯಾ-ಬಾಂಗ್ಲಾ ಪಂದ್ಯ ಕೂಡಾ ಮಳೆಯಿಂದಾಗಿ ಅರ್ಧದಲ್ಲೇ ಸ್ಥಗಿತಗೊಂಡಿತ್ತು. ಶನಿವಾರವೂ ಶೇ.40ರಷ್ಟು ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಅಡ್ಡಿಪಡಿಸುವ ಸಾಧ್ಯತೆ ಇದೆ.

click me!