
ಬ್ರಿಡ್ಜ್‌ಟೌನ್: ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿನೊಂದಿಗೆ ಈ ಬಾರಿ ಟಿ20 ವಿಶ್ವಕಪ್‌ನಲ್ಲಿ ಅಳಿವು ಉಳಿವಿನ ಸ್ಥಿತಿಗೆ ತಲುಪಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ, ಸೂಪರ್-8 ಹಂತದ ನಿರ್ಣಾಯಕ ಪಂದ್ಯದಲ್ಲಿ ಭಾನುವಾರ ಅಮೆರಿಕ ವಿರುದ್ಧ ಸೆಣಸಾಡಲಿದೆ.
ಸೆಮಿಫೈನಲ್ ರೇಸ್‌ನಲ್ಲಿ ಉಳಿದುಕೊಳ್ಳಲು ತಂಡಕ್ಕೆ ಗೆಲುವು ಅತ್ಯಗತ್ಯವಾಗಿದ್ದು, ಸೋತರೆ ಟೂರ್ನಿಯಿಂದ ಬಹುತೇಕ ಹೊರಬೀಳಲಿದೆ. ಸೂಪರ್ -8ರ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ ಭರ್ಜರಿ ಗೆಲುವು ಸಾಧಿಸಿದ್ದ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ವಿರುದ್ಧದ ಕಳೆದ ಪಂದ್ಯದಲ್ಲಿ ಕೊನೆ ಕ್ಷಣದಲ್ಲಿ ಎಡವಿ ಸೋಲನುಭವಿಸಿತ್ತು. ತಂಡ 2 ಪಂದ್ಯ ದಲ್ಲಿ 2 ಅಂಕ ಹೊಂದಿದ್ದು, ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ದ.ಆಫ್ರಿಕಾ 2 ಜಯದೊಂದಿಗೆ 4 ಅಂಕ, ವಿಂಡೀಸ್ 2 ಅಂಕ ಹೊಂದಿದೆ. ಹೀಗಾಗಿ ಇಂಗ್ಲೆಂಡ್ ಈ ಪಂದ್ಯದಲ್ಲಿ ದೊಡ್ಡ ಅಂತರದಲ್ಲಿ ಗೆದ್ದರಷ್ಟೇ ಸೆಮೀಸ್ ಪ್ರವೇಶಿಸಬಹುದು.
ಎರಡನೇ ಬಾರಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಟೆನಿಸಿಗ ಸುಮಿತ್ ನಗಾಲ್
ಅತ್ತ ಅಮೆರಿಕ ಈಗಾಗಲೇ ಎರಡು ಪಂದ್ಯಗಳಲ್ಲೂ ಸೋತಿದೆ. ಆದರೂ ತಂಡಕ್ಕೆ ಸೆಮೀಸ್ ಅವಕಾಶ ಇದೆ. ಇಂಗ್ಲೆಂಡ್‌ನ ದೊಡ್ಡ ಅಂತರದಲ್ಲಿ ಸೋಲಿಸಿ, ಅತ್ತ ದ.ಆಫ್ರಿಕಾ ವಿರುದ್ಧ ವಿಂಡೀಸ್ ಸೋತರೆ ಅಮೆರಿಕಕ್ಕೆ ನೆಟ್ ರನ್‌ರೇಟ್ ಆಧಾರದಲ್ಲಿ ಸೆಮೀಸ್‌ಗೇರುವ ಅವಕಾಶ ಸಿಗಲಿದೆ.
ಪಂದ್ಯ ಆರಂಭ: ರಾತ್ರಿ 8 ಗಂಟೆಗೆ,
ಪ್ರಸಾರ: ಸ್ಟಾರ್‌ಸ್ಟೋರ್ಟ್ಸ್, ಹಾಟ್‌ಸ್ಟಾರ್.
ಏಕದಿನ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಕ್ಲೀನ್ ಸ್ವೀಪ್ ಗುರಿ
ಬೆಂಗಳೂರು: ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ಕ್ಲೀನ್‌ಸ್ವೀಪ್ ಸಾಧಿಸುವ ನಿರೀಕ್ಷೆಯಲ್ಲಿರುವ ಭಾರತ ಮಹಿಳಾ ತಂಡ, ಭಾನುವಾರ ಏಕದಿನ ಸರಣಿಯ 3ನೇ ಹಾಗೂ ಕೊನೆ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ದಕ್ಷಿಣ ಆಫ್ರಿಕಾ ಗೆಲುವಿನೊಂದಿಗೆ ಸರಣಿಗೆ ವಿದಾಯ ಹೇಳಲು ಕಾಯುತ್ತಿದೆ.
ಆರಂಭಿಕ ಪಂದ್ಯದಲ್ಲಿ ಅಭೂತಪೂರ್ವ ಬ್ಯಾಟಿಂಗ್ ಪ್ರದರ್ಶನ ನೀಡಿ ಗೆದ್ದಿದ್ದ ಭಾರತ, ಎರಡನೇ ಪಂದ್ಯದಲ್ಲಿ ಬೌಲರ್‌ಗಳ ನೆರವಿನಿಂದ ಗೆಲುವು ತನ್ನದಾಗಿಸಿಕೊಂಡಿತ್ತು. ಸತತ ಎರಡು ಶತಕ ಸಿಡಿಸಿರುವ ಸ್ಮೃತಿ ಮಂಧನಾ ಮತ್ತೊಮ್ಮೆ ಅಬ್ಬರಿಸಲು ಕಾಯುತ್ತಿದ್ದು, ಕಳೆದ ಪಂದ್ಯದಲ್ಲಿ 103 ರನ್ ಸಿಡಿಸಿದ್ದ ನಾಯಕಿ ಹರ್ಮನ್‌ಪ್ರೀತ್ ಕೂಡಾ ಮತ್ತೊಂದು ಅಮೋಘ ಇನಿಂಗ್ಸ್‌ನ ನಿರೀಕ್ಷೆಯಲ್ಲಿದ್ದಾರೆ.
ಟಿ20 ವಿಶ್ವಕಪ್: ಬಾಂಗ್ಲಾ ಹುಲಿಗಳ ಬೇಟೆಯಾಡಿ ಗೆದ್ದ ಭಾರತ
ಮೊದಲೆರಡು ಪಂದ್ಯಗಳಲ್ಲಿ ಅವಕಾಶ ವಂಚಿತರಾಗಿದ್ದ ಕರ್ನಾಟಕದ ಶ್ರೇಯಾಂಕ ಪಾಟೀಲ್ ಈ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.