
ನ್ಯೂಯಾರ್ಕ್(ಮೇ.06): ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್ ಮಾರಕ ದಾಳಿಗೆ ತತ್ತರಿಸಿದ ಐರ್ಲೆಂಡ್ ತಂಡವು 16 ಓವರ್‌ಗಳಲ್ಲಿ ಕೇವಲ 96 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಪಡೆ ಶುಭಾರಂಭ ಮಾಡಲು ಸಾಧಾರಣ ಗುರಿ ಸಿಕ್ಕಿದೆ.
ಇಲ್ಲಿನ ನಾಸೌ ಕೌಂಟಿ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ಐರ್ಲೆಂಡ್ ಎದುರು ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡುವಲ್ಲಿ ಟೀಂ ಇಂಡಿಯಾ ವೇಗಿಗಳು ಯಶಸ್ವಿಯಾದರು.
ಟಿ20 ವಿಶ್ವಕಪ್‌ಗೆ ಪಾದಾರ್ಪಣೆ ಮಾಡಲು ರೆಡಿಯಾಗಿದ್ದಾರೆ ಈ 6 ಟೀಂ ಇಂಡಿಯಾ ಕ್ರಿಕೆಟರ್ಸ್..!
ಮೂರನೇ ಓವರ್‌ನಲ್ಲೇ ಆರ್ಶದೀಪ್ ಸಿಂಗ್, ಐರ್ಲೆಂಡ್ ಆರಂಭಿಕ ಬ್ಯಾಟರ್‌ಗಳಾದ ನಾಯಕ ಪೌಲ್ ಸ್ಟರ್ಲಿಂಗ್(2) ಹಾಗೂ ಆಂಡ್ರ್ಯೂ ಬಲ್ಬಿರ್ನ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಇನ್ನು ಹ್ಯಾರಿ ಟೆಕ್ಟರ್ 4 ರನ್ ಗಳಿಸಿ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಲಾರ್ಕನ್ 10 ಹಾಗೂ ಕುರ್ಟಿಸ್ ಕ್ಯಾಂಪರ್ 12 ರನ್ ಗಳಿಸಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು.
ಇನ್ನು ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಚುರುಕಿನ ಬ್ಯಾಟಿಂಗ್ ನಡೆಸಿದ ಗೆರಾತ್ ಡೆಲ್ನೆ 14 ಎಸೆತಗಳನ್ನು ಎದುರಿಸಿ 27 ರನ್ ಗಳಿಸಿ ರನೌಟ್ ಆದರು. ಜೋಶ್ವಾ ಲಿಟ್ಲ್ 14 ರನ್ ಗಳಿಸಿ ಕೊನೆಯಲ್ಲಿ ಉತ್ತಮ ಸಾಥ್ ನೀಡಿದರು.
T20 World Cup 2024: ಐರ್ಲೆಂಡ್ ಎದುರು ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ಟೀಂ ಇಂಡಿಯಾ ಸಂಘಟಿತ ದಾಳಿ: ಟೀಂ ಇಂಡಿಯಾ ಮೊದಲ ಓವರ್‌ನಿಂದಲೇ ಶಿಸ್ತುಬದ್ಧ ದಾಳಿ ನಡೆಸಿತು. ಹಾರ್ದಿಕ್ ಪಾಂಡ್ಯ 27 ರನ್ ನೀಡಿ 3 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಹಾಗೂ ಆರ್ಶದೀಪ್ ಸಿಂಗ್ ತಲಾ ಎರಡು ವಿಕೆಟ್ ತಮ್ಮ ಖಾತೆಗೆ ಸೇರಿಸಿಕೊಂಡರು. ಇನ್ನು ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ತಮ್ಮ ಖಾತೆಗೆ ಸೇರಿಸಿಕೊಂಡರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.